ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ಕಡಿತ ಮಾಡುವುದಿಲ್ಲ: ಗೃಹ ಸಚಿವ ಪರಮೇಶ್ವರ

ಬೆಂಗಳೂರು, (ಸೆ.11); ತನಿಖಾ ಸಂಸ್ಥೆಗಳ ಹಂತದಲ್ಲಿ ವಿವಿಧ ಹಗರಣಗಳ ತನಿಖೆ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ವಾರದೊಳಗೆ ಸಮಿತಿ ಸಭೆ ನಡೆಸುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಹಗರಣಗಳ ಪ್ರಕರಣಗಳನ್ನು ಗುರುತಿಸಿದ್ದೇವೆ.‌ ಅವುಗಳ ತನಿಖೆ ಯಾವ ಹಂತದಲ್ಲಿವೆ ಎಂಬುದನ್ನು ಪರಿಶೀಲಿಸಿ, ವರದಿಯನ್ನು ಸಚಿವ ಸಂಪುಟಕ್ಕೆ ಸಲ್ಲಿಸುತ್ತೇವೆ ಎಂದರು.

ತ್ವರಿತಗತಿಯಲ್ಲಿ ತನಿಖೆ ನಡೆಯಬೇಕು ಎಂಬ ಉದ್ದೇಶದಿಂದ ಸಮಿತಿ ರಚನೆ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪ್ರಗತಿ ಪರಿಶೀಲನೆ ವೇಳೆ ಗಮನಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ವಿಚಾರ ಕ್ಯಾಬಿನೆಟ್ ಗಮನಕ್ಕೆ ಬಂದ ಬಳಿಕ ತ್ವರಿತಗತಿಯಲ್ಲಿ ಮಾಡಲು ಸಮಿತಿ ರಚಿಸಿದ್ದಾರೆ‌ ಎಂದು ಹೇಳಿದರು.

ದ್ವೇಷದ ರಾಜಕಾರಣ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿ, ಅವರು ಏನಾದರು ಹೇಳಿಕೊಳ್ಳಲಿ. ನಮ್ಮನ್ನು ಟೀಕೆ ಮಾಡುವುದಕ್ಕೆ,‌ ಸಲಹೆ‌ ನೀಡಲು, ತಪ್ಪು ಮಾಡಿದಾಗ ಹೇಳುವುದಕ್ಕೆ ಅವರಿಗೆ ಜವಾಬ್ಧಾರಿಗಳಿರುತ್ತವೆ. ಆಡಳಿತ ನಡೆಸುವರಿಗೂ ಅವರಿಗೆ ಆದಂತಹ ಜವಾಬ್ದಾರಿಗಳಿರುತ್ತವೆ ಎಂದರು.

ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚರ್ಚೆ ಅನಗತ್ಯ.‌ ನಾವು ಜನರಿಗೆ ಕೊಟ್ಟ ಭರವಸೆಗಳನ್ನು, ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಆಡಳಿತ ಮಾಡಬೇಕು. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸಲು, ಸರ್ಕಾರದ ಕಾರ್ಯಕ್ರಮಗಳು ಅನುಷ್ಟಾನ ಆಗಬಾರದು ಎಂಬ ಉದ್ದೇಶದಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಇದೆಲ್ಲವನ್ನು ಬದಿಗೊತ್ತಿ ನಾವು ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸ್ಥಾನದ ಚರ್ಚೆಯ ಬಗ್ಗೆ ಶಿಸ್ತಿನ ಕ್ರಮದ ಕುರಿತು ಪಕ್ಷದ ಅಧ್ಯಕ್ಷರು ಕಡಿವಾಣ ಹಾಕುತ್ತಾರೆ. ಅಧ್ಯಕ್ಷರು ಅಮೇರಿಕ ಪ್ರವಾಸದಲ್ಲಿದ್ದು, ಬಂದನಂತರ ಈ ಬಗ್ಗೆ ಗಮನ ಹರಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

ವಾಲ್ಮೀಕಿ ನಿಗಮ ಹಗರಣದ ಇ.ಡಿ. ಚಾರ್ಜ್‌ಶೀಟ್ ಕುರಿತು ಪ್ರತಿಕ್ರಿಯಿಸಿ, ನಾವ್ಯಾರೋ ಹೇಳಿದ ಹೇಳಿಕೆ ಮುಖ್ಯವಲ್ಲ‌. ತನಿಖಾ ಸಂಸ್ಥೆಗಳು ಸಿಕ್ಕಂತಹ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತೀರ್ಮಾನ ಮಾಡುತ್ತಾರೆ. ನಾವು ನೀಡುವ ಹೇಳಿಕೆಗಳು ಮೇಲ್ನೋಟಕ್ಕೆ ಮಾತ್ರ. ತನಿಖೆ ಕೈಗೊಂಡ ಬಳಿಕ ಸತ್ಯಾಸತ್ಯತೆ ಗೊತ್ತಾಗುತ್ತದೆ.

ಮಾಜಿ ಸಚಿವ ನಾಗೇಂದ್ರ ಅವರ ಪಾತ್ರ ಇದೆ ಎಂದು ಇ.ಡಿ.ಯವರು ಹೇಳುತ್ತಿದ್ದಾರೆ. ಬೇಕಾದಷ್ಟು ಸಲ ಹಾಗೇ ಆಗುತ್ತದೆ. ಅವರು ಹೇಳಿರುವುದಕ್ಕೆ ನಮಗೆ ಸಾಕ್ಷ್ಯ ಸಿಕ್ಕಿರುವುದಿಲ್ಲ. ನಾವು ಹೇಳಿರುವುದಕ್ಕೆ ಅವರಿಗೆ ಸಾಕ್ಷ್ಯ ಸಿಕ್ಕಿರುವುದಿಲ್ಲ. ಬೇಕಾದಷ್ಟು ಸಲ ಹೀಗಾಗಿದೆ. ವಿವಿಧ ತನಿಖಾ ಸಂಸ್ಥೆಗಳ ತನಿಖಾ ವಿಧಾನವೇ ಬೇರೆ ಇರುತ್ತದೆ. ಆ ದೃಷ್ಟಿಯಿಂದ‌ ಮಾಡುತ್ತಾರೆ. ಇ.ಡಿ.ಯವರು ಮತ್ತು ಎಸ್‌ಐಟಿಯವರು ಇಬ್ಬರು ಚಾರ್ಜ್‌ಶೀಟ್ ಸಲ್ಲಿಸುತ್ತಾರೆ ಎಂದು ಹೇಳಿದರು.

ಡಿಕೆಶಿ, ರಾಹುಲ್ ಗಾಂಧಿ ಭೇಟಿ ಆಕಸ್ಮಿಕ: ಅಮೇರಿಕಾದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಭೇಟಿಯಾಗಿರುವುದು ನನಗೆ ಗೊತ್ತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಬಂದಿರುವ ಫೋಟೊಗಳನ್ನು ಗಮನಿಸಿದ್ದೇನೆ. ಅವರು ಕುಟುಂಬ ಸಮೇತ ಅಮೇರಿಕಾ ಪ್ರವಾಸ ಹೋಗಿದ್ದಾರೆ. ಆಕಸ್ಮಿಕವಾಗಿ ಅದೇ ಹೋಟೆಲ್‌ನಲ್ಲಿ ಸಿಕ್ಕಿದ್ದಾರೆ ಎಂದರೆ, ಓಡಿ ಹೋಗಲು ಆಗುತ್ತಾ? ಅವರಿಗೆ ಸತ್ಕರಿಸಿರುತ್ತಾರೆ. ಅದು ಬಿಟ್ಟರೆ ಬೇರೆನು ಗೊತ್ತಿಲ್ಲ ಎಂದರು.

ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ಕಡಿತ ಮಾಡುವುದಿಲ್ಲ. ತೆರಿಗೆ ಪಾವತಿ ಮಾಡುತ್ತಿರುವವರು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲ ಎಂಬುದು ನಿಯಮದಲ್ಲಿದೆ. ಸುಳ್ಳು ದಾಖಲೆ ಸಲ್ಲಿಸಿ, ಅಧಿಕಾರಿಗಳ ಮನವೊಲಿಸಿ ಕಾರ್ಡ್ ಪಡೆದಿರುವುದು ತಪ್ಪಲ್ಲವೇ? ಯಾರ ಕಾರ್ಡ್‌ನ್ನು ತೆಗೆಯಲು ಹೋಗುವುದಿಲ್ಲ ಎಂದ ಅವರು, ಸರ್ಕಾರ ಬಡವರ ಅನ್ನ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದಿರುವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಏನೋ ಹೇಳುತ್ತಾರೇ ಪಾಪ. ಹೆಚ್.ಡಿ.ಕುಮಾರಸ್ವಾಮಿ ಅವರು ದೊಡ್ಡ ಜವಾಬ್ಧಾರಿಯಲ್ಲಿದ್ದಾರೆ. ರಾಜ್ಯಕ್ಕೆ ದೊಡ್ಡ ಕೈಗಾರಿಕೆ, ಸ್ಟೀಲ್ ಇಂಡಸ್ಟ್ರೀಸ್ ನೀಡಿದರೆ ಚೆಂದ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ ಬರೋಬ್ಬರಿ 18 ಲಕ್ಷ ರೂ.ಹಣ ಕಳೆದುಕೊಂಡ ಯುವಕನೋರ್ವ ಸೆಲ್ಪಿ ವೀಡಿಯೊ ಮಾಡಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ..

[ccc_my_favorite_select_button post_id="110524"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!