ಬುಧವಾರ, ಸೆಪ್ಟೆಂಬರ್ 11, 2024, ದೈನಂದಿನ ರಾಶಿ ಭವಿಷ್ಯ
ಮೇಷ ರಾಶಿ: ಹಣಕಾಸು ವ್ಯವಹಾರ, ಯೋಜನೆಗಳ ರೂಪಿಸಲು ಸಾಕಷ್ಟು ಸಮಯವಿರುತ್ತದೆ. ಆದರೆ, ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)
ವೃಷಭ ರಾಶಿ: ವಾಹನ ಚಾಲನೆ ವೇಳೆ ಎಚ್ಚರವಿರಲಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿ ಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷ ವನ್ನು ತರುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ಮಿಥುನ ರಾಶಿ: ರೈತರಿಗೆ ಇಂದು ಹೆಚ್ಚಿನ ವ್ಯಾಪಾರವಾಗಲಿದೆ.ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇಡಿ. ಇಡೀ ಜನರ ಸಹಕಾರ ದೊರೆಯುತ್ತದೆ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)
ಕಟಕ ರಾಶಿ: ಇಂದು ನಿಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು. ಇಲ್ಲಿಯವರೆಗೆ ಅನವಶ್ಯಕವಾಗಿ ಹಣ ವ್ಯಯಿಸು ತ್ತಿದ್ದವರಿಗೆ ಹಣಕಾಸಿನ ಕೊರತೆಯ ನಡುವೆ ದಿಢೀರ್ ಅವಶ್ಯಕತೆ ಉಂಟಾಗುವುದರಿಂದ ಹಣ ಸಂಪಾದಿಸುವುದು ಮತ್ತು ಉಳಿಸುವುದು ಎಷ್ಟು ಕಷ್ಟ ಎಂಬುದು ಅರ್ಥವಾಗುತ್ತದೆ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ಸಿಂಹ ರಾಶಿ: ಸಂವೇದನಾಶೀಲ ಸಂಗತಿಯಾಗಿರುವ ಸಂದರ್ಭಗಳು ಎದುರಾಗಬಹುದು. ಬದಲಾವಣೆಗ ಳಿಗಿದು ಸಕಾಲವಲ್ಲ, ಎಚ್ಚರಿಕೆ ವಹಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)
ಕನ್ಯಾ ರಾಶಿ: ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾಧ್ಯ.ಬೇಸರ ಬೇಡ. ಮುನ್ನಡೆಯಿರಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ತುಲಾ ರಾಶಿ: ಯೋಜನೆಯ ಸಂಶೋಧನೆಯಲ್ಲಿ ಕೆಲಸ ಮಾಡಬಹುದು. ಇದಲ್ಲದೇ ವ್ಯಾಪಾರಕ್ಕೆ ಸಂಬಂಧಿಸಿದವರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮಾತುಗಳನ್ನು ವಿವರಿಸಲು ಸ್ವಲ್ಪ ಕಷ್ಟವಾಗಬಹುದು. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ವೃಶ್ಚಿಕ ರಾಶಿ: ಹೊಸ ವಿಷಯಗಳನ್ನು ಕಲಿಯುವ ನಿಮ್ಮ ಸಾಮರ್ಥ್ಯವು ಗಮನಾರ್ಹ ವಾಗಿರುತ್ತದೆ. ಹೊಸ ಆಲೋಚನೆಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಕ್ತ ಸಮಯ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)
ಧನಸ್ಸು ರಾಶಿ: ನಿಮ್ಮ ನೈಜ ಸನ್ನಿವೇಶಗಳು ನಿಮ್ಮ ಭರವಸೆಯನ್ನು ತೃಪ್ತಿಪಡಿಸಲು ಅನುಮತಿ ಸುತ್ತದೆಯೇ ಎಂಬುದನ್ನು ಗಮನಿಸ ಬೇಕಾಗುತ್ತದೆ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ಮಕರ ರಾಶಿ: ಇಂದು ಹಿಂದಿನ ಮೊತ್ತವನ್ನು ಇನ್ನೂ ಹಿಂತಿರುಗಿಸದ ಸಂಬಂಧಿಕರಿಗೆ ನಿಮ್ಮ ಹಣವನ್ನು ಸಾಲ ನೀಡುವುದನ್ನು ತಪ್ಪಿಸಿ. ಪ್ರೀತಿಪಾತ್ರರ ಜೊತೆ ವಾದಗಳನ್ನು ಉಂಟುಮಾಡುವ ವಿವಾದಾತ್ಮಕ ಸಮಸ್ಯೆಗಳನ್ನು ನೀವು ತಪ್ಪಿಸಬೇಕು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ಕುಂಭ ರಾಶಿ: ಯಾವುದನ್ನೂ ಮತ್ತು ಯಾರನ್ನೂ ಲಘುವಾಗಿ ಪರಿಗಣಿಸ ಬೇಡಿ, ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ಮೀನ ರಾಶಿ: ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಕಡಿಮೆ ಯಾಗುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿ ಯಲ್ಲಿ ಪೂರ್ಣ ವಿಶ್ವಾಸದಿಂದ ನಿಮ್ಮ ಕೆಲಸವನ್ನು ಮಾಡಿ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)
ತಿಥಿ: ಅಷ್ಟಮಿ
ನಕ್ಷತ್ರ: ಜೇಷ್ಠ ನಕ್ಷತ್ರ.
ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….