ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘ ಕರ್ನಾಟಕ ರಾಜ್ಯ ಸಮಿತಿಗೆ ಪದಾಧಿಕಾರಿಗಳ ಆಯ್ಕೆ..!

ದೊಡ್ಡಬಳ್ಳಾಪುರ, (ಸೆ.14): ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘ ಕರ್ನಾಟಕ ರಾಜ್ಯ ಸಮಿತಿ 2024-27ನೇ ಸಾಲಿನ ಸರ್ವ ಸದಸ್ಯರ ಸಭೆ ಮತ್ತು ಹೊಸ ತಂಡದ ರಚನೆಗಾಗಿ ಚುನಾವಣೆ ಪ್ರಕ್ರಿಯೆ ನಗರದ ಡಿ.ಪಿ.ವಿ ಕಲ್ಯಾಣ ಮಂದಿರದಲ್ಲಿ ನಡೆಯಿತು.

ಚುನಾವಣಾ ಅಧಿಕಾರಿಯಾಗಿ ಗ್ವಾನವರ ಗಾಡಿಲಿಂಗಪ್ಪ ನೇಮಕಗೊಂಡಿದ್ದರು. ತೀವ್ರ ಕುತೂಹಲ ಹಾಗೂ ಹಣಾಹಣಿಯನ್ನು ನಿರೀಕ್ಷಿಸಿದ್ದ ಚುನಾವಣೆ ಯಾವುದೇ ಗದ್ದಲವಿಲ್ಲದೆ ಅವಿರೋಧ ಆಯ್ಕೆಯಾಯಿತು.

ಚುನಾವಣಾ ಮತ್ತು ಸರ್ವ ಸದಸ್ಯರ ಸಭೆಯ ವೀಕ್ಷಕರಾಗಿ ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘದ ಕೇಂದ್ರ ಕಚೇರಿಯ ಅಧ್ಯಕ್ಷ ಡಾ.ಅಯ್ಯಪ್ಪನ್ ಗೌರವ ಕಾರ್ಯದರ್ಶಿ ಕೆ ವಿಜಯಕುಮಾರ್, ಉಪಾಧ್ಯಕ್ಷ ಹರೀಂದ್ರನಾಥ್ , ಹಿರಿಯ ಸದಸ್ಯ ವಿಜಯೇಂದ್ರ ನಾಯರ್ ಆಗಮಿಸಿದ್ದರು. 

ಇದೇ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್‌ನ ಟಿ.ಎಸ್.ಮಹದೇವಯ್ಯ ಮತ್ತು ಬಿ.ವಿ.ಬಸವರಾಜ್ ರವರನ್ನು ಗೌರವಿಸಲಾಯಿತು.

ಪದಾಧಿಕಾರಿಗಳ ಆಯ್ಕೆ : ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷರಾಗಿ ಕೆ. ರಮೇಶ್, ಉಪಾಧ್ಯಕ್ಷರುಗಳಾಗಿ ಪಿ.ಬಿ. ಸುಬ್ರಹ್ಮಣ್ಯಂ, (ಮುಳಬಾಗಿಲು),  ರೇವಪ್ಪ ರೆಡ್ಡಿ (ಬೀದರ್) ಜಿ ಬಾಲಮುರುಗನ್ (ಬೆಂಗಳೂರು), ಹೆಚ್ ವೀರೇಂದ್ರ ಪ್ರಸಾದ್ (ಸಿರುಗುಪ್ಪ) ಹಾಗೂ ವಿರೂಪಣ್ಣ ಗುಡಿ (ಸಿಂಧನೂರು) ಮತ್ತು ವೀರೇಶ್ ಎಂ ಕಲಬುರ್ಗಿ (ಬಾಗಲಕೋಟೆ).

ಕಾರ್ಯದರ್ಶಿಯಾಗಿ ಪಿಪಿ ಮುರಳಿಧರನ್ (ತೆಕ್ಕಲಕೋಟೆ), ಜಂಟಿ ಕಾರ್ಯದರ್ಶಿಗಳಾಗಿ  ಮಹಾಂತೇಶ್ ಪಿ ಗೊನ್ನಾಗರ್ (ಧಾರವಾಡ) ಕೆ.ಟಿ ಗಿರೀಶ್ (ಚಿಕ್ಕಬಳ್ಳಾಪುರ) ಎಂ ಸುಬ್ರಮಣಿ (ಮದ್ದೂರು) ಕೆ ಎಂ ಗೋಪಿ (ಬೆಂಗಳೂರು) ಎಂ ರಾಘವೇಂದ್ರ (ಶಿವಮೊಗ್ಗ) ಡಿ.ಎನ್. ಮುರಳಿಮೋಹನ್ (ದೊಡ್ಡಬಳ್ಳಾಪುರ) ಖಜಾಂಚಿಯಾಗಿ ಕೆ.ನಾರಾಯಣ್ (ಧಾರವಾಡ).

ಆಡಳಿತ ಮಂಡಳಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅವಿರೋಧ ಆಯ್ಕೆಯಾದರು. ಇದರೊಂದಿಗೆ  ವಿವಿಧ ಜಿಲ್ಲೆಯ 40 ಜನರು ಆಡಳಿತ ಮಂಡಳಿಯ ಪ್ರತಿನಿಧಿಗಳಾಗಿ ಆಯ್ಕೆಯಾದರು.

ಅಧ್ಯಕ್ಷರಾಗಿ ಆಯ್ಕೆಯಾದ ಕೆ.ರಮೇಶ್ ಮಾತನಾಡಿ, ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘದ ಕರ್ನಾಟಕ ರಾಜ್ಯದ ಸದಸ್ಯರುಗಳ ಪ್ರೀತಿ ಅಭಿಮಾನ ನಂಬಿಕೆಯಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಈ ಮೂಲಕ ಕೃತಜ್ಞತೆಯನ್ನು ಅರ್ಪಿಸುತ್ತಿದ್ದೇನೆ. ಸಂಘವು ಅಯ್ಯಪ್ಪ ಭಕ್ತರ ಶ್ರೇಯೋಭಿವೃದ್ದಿಗಾಗಿ ಕೆಲಸ ಮಾಡಲಿದ್ದು, ಸದಸ್ಯರ ನಂಬಿಕೆ ಉಳಿಸಿಕೊಳ್ಳುವುದಾಗಿ ತಿಳಿಸಿದರು. 

ಬೆಂಗಳೂರಿನ ಹೃದಯ ಭಾಗದಲ್ಲಿ ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘ ಕರ್ನಾಟಕ ವಿಭಾಗಕ್ಕೆ ಕಛೇರಿಗಾಗಿ ಜಾಗವನ್ನು ನೀಡುವುದಾಗಿ ತಿಳಿಸಿರುವ ಜಿ ಬಾಲಮುರುಗನ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ರಾಹುಕಾಲ: 01:30PM ರಿಂದ 3:00PM, ಗುಳಿಕಕಾಲ: 09:00AM ರಿಂದ 10:30AM, ಯಮಗಂಡಕಾಲ: 06:00AM ರಿಂದ 07:30AM, Astrology

[ccc_my_favorite_select_button post_id="115027"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ಕಳ್ಳತನ.. ಲಕ್ಷಾಂತರ ರೂ. ಒಡವೆ, ನಗದು ದೋಚಿ ಪರಾರಿ!

ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ಕಳ್ಳತನ.. ಲಕ್ಷಾಂತರ ರೂ. ಒಡವೆ, ನಗದು ದೋಚಿ

ಮೊಮ್ಮಗನ ಜನ್ಮದಿನಕ್ಕೆ ತೆರಳಿದ್ದನ್ನೆ ಹೊಂಚು ಹಾಕಿರುವ ದುಷ್ಕರ್ಮಿಗಳು, ಮನೆಯ ಬಾಗಲು ಮೀಟಿ ಲಕ್ಷಾಂತರ ರೂ. ಒಡವೆ, ನಗದು ದೋಚಿ (Theft) ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ

[ccc_my_favorite_select_button post_id="115029"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!