ಚಿಕ್ಕಬಳ್ಳಾಪುರ, (ಸೆ.14): ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ವಿಧ್ಯಾರ್ಥಿಗಳಿಬ್ಬರು ಪರಸ್ಪರ ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶಿಡ್ಲಘಟ್ಟದಲ್ಲಿ ನಡೆದಿದೆ.
ನವೀನ್ (21) ಹಾಗೂ ರೂಪಿಣಿ 16 ವರ್ಷ (ಹೆಸರು ಬದಲಿಸಲಾಗಿದೆ). ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.
ರೂಪಿಣಿ ಎಸ್ ಎಸ್ ಎಲ್ ಸಿ ಓದುತ್ತಿದ್ದು, ನವೀನ್ ಚಾಲಕನಾಗಿದ್ದ ಎನ್ನಲಾಗಿದೆ. ಈ ನಡುವೆ ಇಬ್ಬರ ನಡುವೆ ಸ್ನೇಹವಾಗಿ ಬಳಿಕ ಪ್ರೀತಿಯಾಗಿದೆ.
ಆದರೆ ಇಬ್ಬರ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು, ಇದರಿಂದ ಸಾಯಲು ನಿರ್ಧರಿಸಿದ್ದಾರೆ. ಅದರಂತೆಯೇ ಇಂದು ಬೆಳಗ್ಗೆ ರೂಪಿಣಿ ಎಂದಿನಂತೆ ಶಾಲೆಗೆ ಹೋಗುತ್ತೇನೆಂದು ಮನೆಯಿಂದ ಹೊರಬಂದಿದ್ದು, ನವೀನ್ ಜೊತೆ ಒಂದೇ ಹಗ್ಗದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಶಿಡ್ಲಘಟ್ಟ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….<!–
–>