ಬೃಹತ್ ಉದ್ಯೋಗ ಮೇಳ; 1097 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ವಿತರಣೆ..!

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 13): ಜಿಲ್ಲೆಯಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ 2025 ರ ಅಕ್ಟೋಬರ್02 ರೊಳಗೆ  ಜಿಲ್ಲೆಯ ಪ್ರತಿಯೊಂದು ಕುಟುಂಬದ ಒಬ್ಬರಿಗೆ ಉದ್ಯೋಗ ಸಿಗುವಂತೆ  ಮಾಡುವುದು ನನ್ನ ಗುರಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.

       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೈಗಾರಿಕೆ ಕೇಂದ್ರ ಸಹಯೋಗದಲ್ಲಿ ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಉದ್ದೇಶಿಸಿ ಅವರು ಮಾತನಾಡಿದರು.

     ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯಿತಿಗಳಿದ್ದು, ಸುಮಾರು 2 ಲಕ್ಷ ಕುಟುಂಬಗಳಿವೆ. ಪ್ರತಿ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಿಕೊಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಉದ್ಯೋಗ ಮೇಳ ಅಯೋಜಿಸಲಾಗಿದ್ದು, ಇಂದು ಆರಂಭ, ಮುಂದಿನ ದಿನಗಳಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳ ಆಯೋಜಿಸಿ ಮನೆ ಮನೆಗೆ ಉದ್ಯೋಗ ಕಲ್ಪಿಸಿಕೊಡಲಾಗುವುದು ಎಂದು ಸಚಿವರು ಹೇಳಿದರು.

     ಕಂಪನಿಗಳು ಕೂಡ ಉದ್ಯೋಗ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಕೈ ಜೋಡಿಸಬೇಕು. ಕೌಶಲ್ಯ ಆಧಾರಿತ ಅಭ್ಯರ್ಥಿಗಳ ಅವಶ್ಯಕತೆ ಇದ್ದಲ್ಲಿ ಕಂಪನಿಗಳು ಮಾಹಿತಿಯನ್ನು ಸಂಬಂಧಪಟ್ಟ ಜಿಲ್ಲಾಡಳಿತಕ್ಕೆ ನೀಡಿದರೆ ಕಂಪನಿಗಳ ಬೇಡಿಕೆಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ಇಲಾಖೆಯಿಂದ ಕೌಶಲ್ಯ ತರಬೇತಿ ಕಲ್ಪಿಸಿಕೊಡಲಾಗುವುದು ಎಂದರು.

    ಕೈಗಾರಿಕಾ ವಲಯದ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ. ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಮನೆ ಮನೆಯ ಉದ್ಯೋಗಿಗಳ ಸರ್ವೆ ನಡೆಸಲಾಗುತ್ತಿದ್ದು, ಉದ್ಯೋಗ ಇಲ್ಲದ ಮನೆಗೆ ಒಂದು ಉದ್ಯೋಗ ಕೊಡಿಸುವ ಕೆಲಸ ಆರಂಭಗೊಂಡಿದೆ ಎಂದು ಸಚಿವರು ಹೇಳಿದರು.

    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್ ಅವರು ಮಾತನಾಡಿ, ಪ್ರಧಾನಮಂತ್ರಿಯವರು 10 ವರ್ಷಗಳಲ್ಲಿ 50 ಲಕ್ಷ ಕೋಟಿ ರೂ. ಮೂಲಸೌಕರ್ಯಕ್ಕೆ ಅನುದಾನ ನೀಡಿ, ಉದ್ಯಮ ಕ್ಷೇತ್ರದಲ್ಲಿ ಅಭಿವೃದ್ಧಿ ತಂದಿದ್ದಾರೆ. ಯುವಕರು ಕೇವಲ ಡಿಗ್ರಿ ಪಡೆದರೆ ಪ್ರಯೋಜನೆವಿಲ್ಲ, ಕೌಶಲ್ಯ ಭರಿತ ಶಿಕ್ಷಣ ಪಡೆದ್ರೆ ತಕ್ಷಣವೇ ಸಾಕಷ್ಟು ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸ್ಟೀಲ್ ಇಂಡಿಯಾ, ಪಿ.ಎಮ್ ವಿಶ್ವಕರ್ಮ ಸೇರಿದಂತೆ ಅನೇಕ ಜನಪರ ಯೋಜನೆ ಜಾರಿಗೆ ತಂದು ಕೌಶಲ್ಯ ತರಬೇತಿ ನೀಡಿ, ಉದ್ಯೋಗ ಕಲ್ಪಿಸಿಕೊಡುತ್ತಿದೆ ಎಂದರು.

   ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ  ತಯಾರಿಕಾ ಕೈಗಾರಿಕೆಗಳು ಹೆಚ್ಚು ಸ್ಥಾಪನೆಯಾಗುವಂತೆ ಕ್ರಮ ವಹಿಸಿ, ಯುವಕರಿಗೆ ಉದ್ಯೋಗ ಕೊಡಿಸುವ ಗ್ಯಾರಂಟಿಗೆ ಒತ್ತು ನೀಡುವ ಕೆಲಸ ಆಗಬೇಕಿದೆ ಎಂದು ಹೇಳಿದರು‌‌.

    ಕಿಯೋನಿಕ್ಸ್ ಅಧ್ಯಕ್ಷರು ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ಅವರು ಮಾತನಾಡಿ, ಯುವಕರಿಗೆ ವಿದ್ಯಾಭ್ಯಾಸವಷ್ಟೇ ನೀಡಿದರೇ ಸಾಕಾಗದು, ಅವರ ಶಿಕ್ಷಣಕ್ಕೆ ತಕ್ಕ ಉದ್ಯೋಗ ಕೊಡಿಸಿ, ಕುಟುಂಬದ ಆರ್ಥಿಕ ಸ್ಥಿತಿಗತಿ ಸುಧಾರಿಸುವ ಮೂಲಕ ಸಬಲರಾಗಿಸಬೇಕೆನ್ನುವ ಸದುದ್ದೇಶದಿಂದ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಿದೆ.

ಸುಮಾರು 26 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ  ನೀಡಲು 200 ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿವೆ. ಜಿಲ್ಲೆ ವ್ಯಾಪ್ತಿಯಲ್ಲಿ ಅಂತರಾಷ್ಟ್ರೀಯ ಉದ್ಯಮಿಗಳಿದ್ದು,  ನಿರುದ್ಯೋಗಿಗಳಿಗೆ ಸಾಕಷ್ಟು ಉದ್ಯೋಗವನ್ನು ನೀಡುತ್ತಾ ಸಾವಿರಾರು ಕುಟುಂಬಗಳಿಗೆ ನೆರವಾಗಲಿದ್ದಾರೆ. ರಾಜ್ಯ ಸರ್ಕಾರ ಯುವಕರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನವನ್ನು ಮೀಸಲು ಇಟ್ಟಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಕೆಲಸ ಮಾಡಿದ್ರೇ ಎಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಬಹುದಾಗಿದೆ ಎಂದು ಹೇಳಿದರು.

1097 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ವಿತರಣೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಮಾತನಾಡಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ದಲ್ಲಿ 163 ಕಂಪನಿಗಳು ಹಾಗೂ 12 ಸಾವಿರ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. 1097 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ವಿತರಿಸಲಾಗಿದೆ. 3500 ಅಭ್ಯರ್ಥಿಗಳನ್ನು ಮುಂದಿನ ಸಂದರ್ಶನಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!