ನವದೆಹಲಿ, (ಸೆ.13); ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಆಮ್ ಆದ್ಮಿ ಪಕ್ಷದ (ಆಪ್) ಮುಖ್ಯಸ್ಥ ಹಾಗು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದೆ.
10 ಲಕ್ಷ ರೂ ಬಾಂಡ್, ಎರಡು ಶ್ಯೂರಿಟಿಗಳೊಂದಿಗೆ ಕೇಜ್ರಿವಾಲ್ಗೆ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ನ್ಯಾ.ಸೂರ್ಯ ಕಾಂತ್ ಅವರು ಜಾಮೀನು ಮಂಜೂರು ಮಾಡಿದ್ದಾರೆಂದು ರಾಷ್ಟ್ರೀಯ ಮಾಧ್ಯಮಳು ವರದಿ ಮಾಡಿವೆ.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಮಾರ್ಚ್ 21ರಿಂದ ಬಂಧನದಲ್ಲಿದ್ದ ಕೇಜ್ರಿವಾಲ್, ಮೇ ತಿಂಗಳಲ್ಲಿ 21 ದಿನಗಳ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು.
ಜುಲೈ 12ರಂದು ಇಡಿ ಪ್ರಕರಣದಲ್ಲಿ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 26ರಂದು ಸಿಬಿಐ ಬಂಧಿಸಿತ್ತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….