ಚಿಕ್ಕಬಳ್ಳಾಪುರ, (ಸೆಪ್ಟೆಂಬರ್ 1; ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಕಾರಿನಲ್ಲಿ ಬರುತ್ತಿದ್ದ ಚಿಕ್ಕಬಳ್ಳಾಪುರ ಮೂಲದ ಮೂವರು ಆಂಧ್ರ ಪ್ರದೇಶದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ಲಾರಿ ಉರುಳಿ ಬಿದ್ದ ಪರಿಣಾಮ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಹರಿಸ್ಥಳ ನಿವಾಸಿಗಳಾದ ಮುನಿವೆಂಕಟ ರೆಡ್ಡಿ, ಚಾಲಕ ರಮೇಶ, ಮಂಜುನಾಥ್ ಮೃತ ದುರ್ದೈವಿಗಳು.
ತೇಜಸ್ ಎಂಬುವರಿಗೆ ಗಂಭೀರ ಗಾಯವಾಗಿದೆ. ತಿರುಪತಿಗೆ ಹೋಗಿ, ಗುರುವಾರ ಸಂಜೆ ಚಿಕ್ಕಬಳ್ಳಾಪುರಕ್ಕೆ ವಾಪಸ್ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಒಂದೇ ಕುಟುಂಬವದರು ಎರಡು ಕಾರಿನಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದರು. ತಿಮ್ಮಪ್ಪನ ದರ್ಶನ ಪಡೆದು ಗುರವಾರ ಸಂಜೆ ಕುಟುಂಬಸ್ಥರು ಚಿಕ್ಕಬಳ್ಳಾಪುರಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ ಒಂದು ಕಾರಿನ ಮೇಲೆ ಟೊಮ್ಯಾಟೊ ಸಾಗಿಸುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಚಾಲಕ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….