ಬೆಂಗಳೂರು, (ಸೆ.14): ವಾಲ್ಮೀಕಿ ಸಮುದಾಯವನ್ನು ಎಸ್ಟಿ ಪ್ರವರ್ಗಕ್ಕೆ ಹಾಗೂ ಕುಂಚಿಟಿಗ, ಸಾದರ, ವೀರಶೈವ, ಸಮಾಜಗಳನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಪ್ರಯತ್ನಕ್ಕೆ ದನಿಗೂಡಿಸಿ ಪ್ರಯತ್ನ ಮಾಡುವುದಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ.
ಈ ಬಗ್ಗೆ ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಮುಖಂಡರು ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಅವರು, ತಮ್ಮಗಳ ಬೇಡಿಕೆ ಬಗ್ಗೆ ಕೇಂದ್ರ ಸರ್ಕಾರದ ಗೃಹ ಸಚಿವರು ಹಾಗೂ ಸಾಮಾಜಿಕ ಸಬಲೀಕರಣ ಸಚಿವರ ಜತೆ ಚರ್ಚೆ ಮಾಡುತ್ತೇನೆ ಎಂದು ಭರವಸೆ ಕೊಟ್ಟರು.
ಈಗಾಗಲೇ ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸುವ ನಿಟ್ಟಿನಲ್ಲಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಹಾಗೂ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇವೆ. ನಿಮ್ಮ ಬೇಡಿಕೆಯ ಬಗ್ಗೆಯೂ ಚರ್ಚೆ ಮಾಡುತ್ತೇನೆ ಎಂದು ಅವರು ಹೇಳಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….