ಬೆಂಗಳೂರು, (ಸೆ.17): ಬಿಜೆಪಿ ಶಾಸಕ ಮುನಿರತ್ನ ಅವರು ಗುತ್ತಿಗೆದಾರ ರೊಬ್ಬರ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ಒಕ್ಕಲಿಗ ಸಮುದಾಯದ ಹೆಣ್ಣುಮಕ್ಕಳ ಬಗ್ಗೆ ಆಕ್ಷೇಪಾರ್ಹ ಶಬ್ದಗಳನ್ನು ಬಳಸಿರುವುದಕ್ಕೆ ರಾಜ್ಯ ಒಕ್ಕಲಿಗರ ಸಂಘ ತೀವ್ರವಾಗಿ ಖಂಡಿಸಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ಪ್ರಕರಣ ಚುನಾಯಿತ ಪ್ರತಿನಿಧಿಗಳು ತಲೆ ತಗ್ಗಿಸುವಂತಹ ವಿಚಾರವಾಗಿದೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘದ ಅಧ್ಯಕ್ಷರೂ ಆಗಿರುವ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ಮತ್ತೊಂದೆಡೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಬಿಜೆಪಿ ಶಾಸಕ ಮುನಿರತ್ನ ಅವರ ಕರ್ಮಕಾಂಡ ಒಂದಾ ಎರಡಾ ಅವರಿಂದ ಅಧಿಕಾರಿಗಳು, ಗುತ್ತಿಗೆದಾರರು ಸೇರಿದಂತೆ ಹಲವರು ಸಾಕಷ್ಟು ನೋವು ತಿಂದಿದ್ದಾರೆ. ದಲಿತರು, ಒಕ್ಕಲಿಗರು, ಹೆಣ್ಣುಮಕ್ಕಳ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿರೋದು ಅಕ್ಷಮ್ಯ ಅಪರಾಧ ಎಂದು ಹೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….