ನಾಗಮಂಗಲ, (ಸೆ.13); ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಕೋಮು ಸೌಹಾರ್ದತೆ ಕದಡಿದರೆ ಸರಕಾರ ಸುಮ್ಮನಿರುವುದಿಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ನಾಗಮಂಗಲಕ್ಕೆ ಭೇಟಿನೀಡಿ ಪ್ರತ್ಯಕ್ಷದರ್ಶಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಗ್ಯಾರೇಜ್ ಮಾಲೀಕರು ಮತ್ತು ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದರು. ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದರು.
ಘರ್ಷಣೆ ದುರದೃಷ್ಟಕರ: ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗು ವುದು. ಈ ಘಟನೆ ನಡೆದಿರುವುದು ದುರ ದೃಷ್ಟಕರ. ಆಕಸ್ಮಿಕವಾಗಿ ನಡೆದ ಘಟನೆ, ನಂತರ ದೊಡ್ಡ ಮಟ್ಟದ ಗಲಭೆಗೆ ಕಾರಣವಾಗಿದೆ ಎಂದು ಚಲುವರಾಯಸ್ವಾಮಿ ಕಳವಳ ವ್ಯಕ್ತಪಡಿಸಿದರು.
ಮುಂದಿನ ಎರಡು ದಿನದಲ್ಲಿ ಮಂಡ್ಯ ಜಿಲ್ಲಾಧಿಕಾರಿ, ಹಾಗೂ ಎಸ್.ಪಿ. ನೇತೃತ್ವದಲ್ಲಿ ಶಾಂತಿಸಭೆ ನಡೆಸಲು ಸೂಚನೆ ನೀಡಲಾಗಿದೆ. ಈ ಘಟನೆಯನ್ನು ರಾಜಕೀಯವಾಗಿ ಬಳಸದೇ ವಿರೋಧ ಪಕ್ಷಗಳು ಸಹ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದರು.
ಅಮಾಯಕರನ್ನು ಬಂಧಿಸಲಾಗಿದ್ದು, ಬಿಡುಗಡೆಗೊಳಿಸಿ ಎಂದು ನಾಗಮಂಗಲ ಪೋಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಎರಡೂ ಕೋಮಿನ ಜನರನ್ನು ಸಚಿವ ಚಲುವರಾಯಸ್ವಾಮಿ ಭೇಟಿ ಮಾಡಿದರು.
ಈ ವರಗೆ 54 ಮಂದಿ ಬಂಧಿಸಲಾಗಿದೆ . ನೈಜ ತಪ್ಪಿತಸ್ಥರನ್ನು ಬಿಡುವ ಪ್ರಶ್ನೆ ಇಲ್ಲ ಅದರೆ ಘಟನೆಯಲ್ಲಿ ಪಾಲ್ಗೊಳದ ಅಮಾಯಕರ ಬಂಧನವಾಗಿದ್ದಲ್ಲಿ ಸಿ.ಸಿ ಟಿ.ವಿ ಪರಿಶೀಲಿಸಿ ಖಚಿತ ಪಡಿಸಿಕೊಂಡು ಬಿಡುಗಡೆ ಮಾಡಲು ಸೂಚಿಸಲಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….