ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 12,2024): 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ಮತ್ತು ನೆಲಮಂಗಲ ತಾಲ್ಲೂಕುಗಳಿಂದ, ಉದ್ಯೋಗಿನಿ, ಧನಶ್ರೀ, ಚೇತನಾ, ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ, ನಿಗಮದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮುಖಾಂತರ (ಸೇವಾಸಿಂಧು, ಬಾಪೂಜಿ ಸೇವಾಕೇಂದ್ರ, ಗ್ರಾಮ ಒನ್, ಕನಾಟಕ ಒನ್)ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಚಿಸುವಂತಹ ಮಹಿಳೆಯರು ತಾಲ್ಲೂಕುಗಳಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಉದ್ಯೋಗಿನಿ ಯೋಜನೆಯಡಿ ಸ್ವಯಂ ಉದ್ಯೋಗ ಮಾಡಲಿಚ್ಚಿಸುವಂತಹ 18-55 ವರ್ಷದೊಳಗಿನ, ಮಹಿಳೆಯರು, ಕುಟುಂಬದ ವಾರ್ಷಿಕ ಆದಾಯ ರೂ.1.5 ಲಕ್ಷ ಕ್ಕಿಂತ ಕಡಿಮೆ ಇರುವಂತಹ ಸಾಮಾನ್ಯ ವರ್ಗದ ಮಹಿಳೆಯರು, ಹಾಗೂ ರೂ.2.00ಲಕ್ಷ ಕ್ಕಿಂತ ಕಡಿಮೆ ಆದಾಯ ಹೊಂದಿರುವಂತಹ ಪ.ಜಾತಿ ಮತ್ತು ಪ.ಪಂಗಡದ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ಬ್ಯಾಂಕ್ ನಿಂದ ರೂ.1.00 ಲಕ್ಷದಿಂದ 3.00 ಲಕ್ಷಗಳವರೆಗೆ ಸಾಲ ಮತ್ತು ನಿಗಮದಿಂದ ಸಾಮಾನ್ಯ ವರ್ಗದ ಮಹಿಳೆಯರಿಗೆ ಶೇ. 30 ರಷ್ಟು, ಮತ್ತು ಪ.ಜಾತಿ & ಪ.ಪಂಗಡದ ಮಹಿಳೆಯರಿಗೆ ಶೇ. 50ರಷ್ಟು, ಸಹಾಯಧನ ಸೌಲಭ್ಯವನ್ನು ಉದ್ಯೋಗಿನಿ ಯೋಜನೆಯಡಿ ಒದಗಿಸಲಾಗುವುದು.
ಧನಶ್ರೀ, ಚೇತನಾ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಚಿಸುವಂತಹ ಫಲಾನುಭವಿಗಳಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸದರಿ ಯೋಜನೆಯಡಿ ಆದಾಯೋತ್ಪನ್ನ ಚಟುವಟಿಕೆ /ಸಣ್ಣ ಉದ್ದಿಮೆ ಕೈಗೊಳ್ಳಲು ಈ ಯೋಜನೆಯಡಿ ಅರ್ಜಿಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ರೂ.30,000/-ಗಳನ್ನು ಪ್ರೋತ್ಸಾಹಧನ ಸೌಲಭ್ಯವನ್ನು ಈ ಯೋಜನೆಯಡಿ ಒದಗಿಸಲಾಗುವುದು.
ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 21 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಅಭಿವೃದ್ಧಿ ನಿರೀಕ್ಷಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮತ್ತು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂ:206, 2ನೇ ಮಹಡಿ ಜಿಲ್ಲಾಡಳಿತ ಭವನ, ಬೀರಸಂದ್ರ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರನ್ನು ಸಂಪರ್ಕಿಸಬಹುದು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….