ನೆಲಮಂಗಲ, (ಸೆ.12): ಟಿಪ್ಪರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆಯ ಬಳಿ ನಡೆದಿದೆ. ಟಿಪ್ಪರ್ ಲಾರಿ ಮತ್ತು ಬೈಕ್ ಡಿಕ್ಕಿ ಹೊಡೆದಿದೆ.
ಬೈಕ್ ಸವಾರನ ಮೇಲೆ ಟಿಪ್ಪರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಬೈಕ್ ಚಾಲಕನ ಗುರುತು ಪತ್ತೆಯಾಗಿಲ್ಲ.
ನೆಲಮಂಗಲ ಮೂಲಕ ತುಮಕೂರು ಕಡೆ ಸಾಗುವ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಟಿಪ್ಪರ್ ಲಾರಿ ಚಾಲಕನ ಅತಿವೇಗ ಅಪಘಾತಕ್ಕೆ ಕಾರಣವಾಗಿದ್ದು, ಲಾರಿ ಬಿಟ್ಟು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….