ದೊಡ್ಡಬಳ್ಳಾಪುರ, (ಸೆ.15); ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ಮಾನವ ಸರಪಣಿ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ತಾಲ್ಲೂಕಿನ ಗಡಿಭಾಗದಿಂದ ಪ್ರಾರಂಭವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಗಡಿ ಭಾಗವಾದ ಹೆಗ್ಗಡಹಳ್ಳಿ ತನಕ ದೊಡ್ಡಬಳ್ಳಾಪುರ ತಾಲ್ಲೂಕಿನ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮಾನವ ಸರಪಣಿಯನ್ನು ನಿರ್ಮಿಸಿದ್ದರು.
ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ದಿನಾಚರಣೆ ಮಹತ್ವ ಕುರಿತು ಶಿಕ್ಷಕರು ಮತ್ತು ಉಪನ್ಯಾಸಕರು ಮಾತನಾಡುತ್ತಿದ್ದ ದೃಶ್ಯ ಕಂಡು ಬಂತು. ನಂತರ ಸಂವಿಧಾನ ಪೀಠಿಕೆಯನ್ನು ಓದಿದರು.
ಅಂತರರಾಷ್ಟ್ರೀಯ ಉದ್ದೇಶವೇ ಮಾನವ ಹಕ್ಕುಗಳ ರಕ್ಷಣೆ, ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ಸದೃಢಗೊಳಿಸುವುದಾಗಿದೆ. ಪ್ರಚಾರ ಒಳಗೊಂಡಿರುವ ಪ್ರಜಾಪ್ರಭುತ್ವದ ಅಗತ್ಯವನ್ನು ಇದು ಒತ್ತಿ ಹೇಳುತ್ತದೆ ಎಂದು ಭಾಷಣಕಾರರು ತಿಳಿಸಿದರು.
ಕೊನೆಯಲ್ಲಿ ಜೈ ಹಿಂದ್ ಮತ್ತು ಜೈ ಕರ್ನಾಟಕ ಘೋಷಣೆಗಳನ್ನು ಹೇಳುವ ಮೂಲಕ ಕಾರ್ಯಕ್ರಮ ಮುಕ್ತಾಯವಾಯಿತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….