ದೊಡ್ಡಬಳ್ಳಾಪುರ, (ಸೆ.12): ಭಾರತೀಯ ಜನತಾ ಪಾರ್ಟಿ ನಗರ ಮಂಡಲ ಎಸ್.ಸಿ ಮೋರ್ಚಾ ಮತ್ತೋರ್ವ ಕಾರ್ಯದರ್ಶಿಯನ್ನು ಆಯ್ಕೆ ಮಾಡಿ ನಗರ ಅಧ್ಯಕ್ಷ ಬಿ.ಮುದ್ದಪ್ಪ ಆದೇಶಿಸಿದ್ದಾರೆ.
ಇದರನ್ವಯ ಎಸ್‌ಸಿ ಮೋರ್ಚಾ ಕಾರ್ಯದರ್ಶಿಯಾಗಿ ಅರುಣ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಎಸ್.ಸಿ ಮೋರ್ಚಾ ಅಧ್ಯಕ್ಷ ಕುಮಾರ್, ಈ ಹೊಣೆಗಾರಿಕೆಯನ್ನು ಅತ್ಯಂತ ಜವಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಡಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಂತೆ ಸೂಚಿಸಲಾಗಿದೆ ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….