ದೊಡ್ಡಬಳ್ಳಾಪುರ, (ಸೆ.14): ರಸ್ತೆ ದಾಟುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧರೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಗರದ ಹೊರವಲಯದಲ್ಲಿರುವ ಪಾಲನಜೋಗಹಳ್ಳಿ ಗಣೇಶ ದೇವಸ್ಥಾನದ ಎದುರಲ್ಲಿರುವ ಬ್ಯಾಂಕ್ ಮುಂದಿನ ಗೌರಿಬಿದನೂರು – ಯಲಹಂಕ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದ್ದು, ಸುಮಾರು 75 ರಿಂದ 80 ವರ್ಷದ ವೃದ್ಧರು ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ವೃದ್ಧ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….