ದೊಡ್ಡಬಳ್ಳಾಪುರ, (ಸೆ.14); ಡಿವೈಡರ್ ಗೆ ಕಾರು ಡಿಕ್ಕಿಯಾಗಿ ದೊಡ್ಡಬಳ್ಳಾಪುರ ಮೂಲದ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ದೊಡ್ಡಬಳ್ಳಾಪುರದಿಂದ ಚಿತ್ತೂರಿಗೆ ತೆರಳುತ್ತಿದ್ದ ವೇಳೆ ಆಂದ್ರಪ್ರದೇಶದ ಬೆಂಗಳೂರು – ಚೆನ್ನೈ ನಡುವಿನ ಹೆದ್ದಾರಿ ಚಿತ್ತೂರು ಜಿಲ್ಲೆಯ ಬಂಗಾರುಪಾಲೆಂ ಮಂಡಲನ ತಗ್ಗುವಾರಿಪಲ್ಲಿ ಬಳಿ ಭೀಕರ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಗಂಗರಾಜು, ಲಕ್ಷ್ಮೀ ಎನ್ನುವವರು ಸಾವನಪ್ಪಿದ್ದು, ಗಾಯಗೊಂಡಿರುವ ಖಾಸಗಿ ಶಾಲೆಯ ಮುಖ್ಯಸ್ಥ ಸೇರಿ ನಾಲ್ವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು, ಅತಿವೇಗದಿಂದ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆಂದು ವರದಿಯಾಗಿದೆ.
ಘಟನೆಯಲ್ಲಿ ಇನ್ನೂವಾ ಕಾರು ಜಖಂಗೊಂಡಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….