ರಾಜ್ಯದ ಬೇಡಿಕೆಗಳ ಕುರಿತು ಕೇಂದ್ರ ಮೂವರು ಸಚಿವರೊಂದಿಗೆ ಎಂಬಿ ಪಾಟೀಲ ಚರ್ಚೆ

ನವದೆಹಲಿ, (ಸೆ.11); ರಾಜ್ಯದ ಕೈಗಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಕೇಂದ್ರ ಸರಕಾರದ ಸಹಕಾರ ಕೋರಿ ಮತ್ತು ಅಗತ್ಯ ಬಂಡವಾಳ ಹೂಡಿಕೆ ನಿರೀಕ್ಷಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮಂಗಳವಾರ ಇಲ್ಲಿ ಭೇಟಿ ಮಾಡಿ, ವಿಸ್ತೃತ ಮಾತುಕತೆ ನಡೆಸಿದರು.

2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಪಾಟೀಲ ಅವರು ದೆಹಲಿಗೆ ಎರಡು ದಿನಗಳ ಭೇಟಿ ನೀಡಿದ್ದು, ಮೊದಲ ದಿನ ಎಡೆಬಿಡದ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು.

ಮೊದಲಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಅವರು, ರಕ್ಷಣಾ ಸಾಧನಗಳ ಉತ್ಪಾದನೆ ಮತ್ತು ಅವುಗಳ ರಫ್ತಿನ ಮೇಲೆ ಇರುವ ನಿರ್ಬಂಧದ ತೆರವು, ಡಿಫೆನ್ಸ್ ಕಾರಿಡಾರ್ ಸ್ಥಾಪನೆಯ ಜರೂರು, ರಾಜ್ಯದಲ್ಲಿರುವ ಬಿಎಚ್ಇಎಲ್ ಮತ್ತು ಬಿಇಎಂಎಲ್ ತರಹದ ಕೇಂದ್ರೋದ್ಯಮಗಳಲ್ಲಿ ಹೂಡಿಕೆ ಹೆಚ್ಚಳಕ್ಕೆ ಉತ್ತೇಜನ ಮತ್ತು ಕಾರವಾರದ ನೌಕಾ ವೈಮಾನಿಕ ನಿಲ್ದಾಣದ ರನ್-ವೇಯನ್ನು ಈಗಿರುವ 2 ಕಿ.ಮೀ.ನಿಂದ 2.7 ಕಿ.ಮೀ.ವರೆಗೆ ವಿಸ್ತರಿಸಲು ಬೇಕಾಗಿರುವ ನೆರವಿನ ಬಗ್ಗೆ ಚರ್ಚಿಸಿದರು.

ಬಳಿಕ ರಾಜ್ಯದವರೇ ಆದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಕಂಡ ಪಾಟೀಲ ಅವರು, ಮೇಲಿನ ಸಂಗತಿಗಳ ಜತೆಗೆ ಕರ್ನಾಟಕದ ಕೈಗಾರಿಕಾ ವಲಯದ ಬೆಳವಣಿಗೆಗೆ ಅಗತ್ಯವಿರುವ ನಿರ್ಣಾಯಕ ನೆರವಿನ ಕುರಿತು ವಿಚಾರ ವಿನಿಮಯ ನಡೆಸಿದರು.

ಅಲ್ಲದೆ ಅವರು, ಇ.ವಿ. ವಲಯದಲ್ಲಿ ನವೋದ್ಯಮಗಳಿಗೆ 10 ಸಾವಿರ ಕೋಟಿ ರೂ. ಪೂರೈಸಲು ಎದುರಾಗಿರುವ ಸವಾಲು, ಫೇಮ್-3 ಯೋಜನೆಯ ಜಾರಿಯಲ್ಲಿ ಆಗುತ್ತಿರುವ ವಿಳಂಬ, ರಕ್ಷಣಾ ತಂತ್ರಜ್ಞಾನ ಹಬ್ ಗಳ ಸ್ಥಾಪನೆಯ ಜರೂರು, ಬೆಂಗಳೂರು ಗ್ರಾಮಾಂತರದಲ್ಲಿ ಇಎಂಸಿ ಕ್ಲಸ್ಟರ್ ಸ್ಥಾಪನೆಗೆ ಬಾಕಿ ಇರುವ ಅನುಮೋದನೆ, ಹಾರೋಹಳ್ಳಿ, ಕುಡುತಿನಿ ಮತ್ತು ದೇವಕತ್ತಿಕೊಪ್ಪದಲ್ಲಿ ಕೈಗಾರಿಕಾ ಯೋಜನೆಗಳಿಗೆ ಬಾಕಿ ಇರುವ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ, ಸೆಮಿಕಂಡಕ್ಟರ್ ಕಂಪನಿ ಸ್ಥಾಪನೆಯ ತುರ್ತು ಮತ್ತು ಕೇಂದ್ರವು ಇತ್ತೀಚೆಗೆ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಯೋಜನೆಯಡಿ ರೂಪಿಸಿರುವ 12 ಸ್ಮಾರ್ಟ್ ಸಿಟಿ ಯೋಜನೆಯಿಂದ ಕರ್ನಾಟಕವನ್ನು ಹೊರಗಿಟ್ಟಿರುವುದರ ಬಗ್ಗೆ ಮಾತುಕತೆ ನಡೆಸಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಸಚಿವರು, ಬೇಗನೆ ಹಾಳಾಗುವಂತಹ ಪದಾರ್ಥಗಳನ್ನು ವಿಮಾನದ ಮೂಲಕ ಹೊರದೇಶಗಳಿಗೆ ಕಳುಹಿಸುತ್ತಿರುವ ಸಣ್ಣ ಪ್ರಮಾಣದ ರಫ್ತುದಾರರ ಮೇಲೆ ಹೇರಿರುವ ಜಿಎಸ್ ಟಿ ತೆರಿಗೆಯನ್ನು ರದ್ದುಪಡಿಸಬೇಕು ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಆಮದಿನ ಮೇಲೆ ಈಗ ಇರುವ ಭಾರೀ ಆಮದು ತೆರಿಗೆ ಮತ್ತು ಸುಂಕವನ್ನು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು.

ಸಿಂಗಪುರ್ ಹೈಕಮೀಷನರ್ ಭೇಟಿ (ಬಾಕ್ಸ್); ಇದಕ್ಕೂ ಮುನ್ನ ಎಂ ಬಿ ಪಾಟೀಲ, ಸಿಂಗಪುರ್ ಹೈಕಮಿಷನರ್ ಸೈಮನ್ ವಾಂಗ್ ಅವರನ್ನು ಭೇಟಿಯಾಗಿ, ಫೆಬ್ರವರಿಯಲ್ಲಿ ನಡೆಯಲಿರುವ ಹಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಅವರು, ಇತ್ತೀಚೆಗೆ ಭಾರತ ಮತ್ತು ಸಿಂಗಪುರ್ ಸೆಮಿಕಂಡಕ್ಟರ್, ಡಿಜಿಟಲ್ ಸಹಕಾರ, ಆರೋಗ್ಯ ಸೇವೆ, ವೈದ್ಯಕೀಯ ಸಂಶೋಧನೆ, ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರಕ್ಕೆ ಮಾಡಿಕೊಂಡಿರುವ ಒಡಂಬಡಿಕೆ ಕುರಿತು ಚರ್ಚಿಸಿದರು.

ಇದಕ್ಕೆ ಸ್ಪಂದಿಸಿದ ಹೈಕಮಿಷನರ್, ನೆಟ್-ಜೀರೋ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸಲು ತಮಗಿರುವ ಆಸಕ್ತಿಯನ್ನು ವ್ಯಕ್ತಪಡಿಸಿದರು. ಜತೆಗೆ ಡೇಟಾ ಕೇಂದ್ರಗಳು, ಎಂಆರ್ ಓ, ವೈದ್ಯಕೀಯ ಉಪಕರಣಗಳು ಮತ್ತು ಔಷಧ ಕಂಪನಿಗಳಲ್ಲಿ ಹೂಡಿಕೆ ಮಾಡಲು ತಮ್ಮ ದೇಶದ ಕಂಪನಿಗಳಿರುವ ಒಲವನ್ನು ಹಂಚಿಕೊಂಡರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ ಮತದಾರರ ವಿವರ ಪ್ರಕಟ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ

ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಾದ ಆದೇಶದ ನಂತರ ಬಿಹಾರದಲ್ಲಿ ಕರಡು ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ (Election Commission) ಬಿಡುಗಡೆ ಮಾಡಿದೆ.

[ccc_my_favorite_select_button post_id="112766"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!