ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ; ಅಗತ್ಯ ಸಿದ್ಧತೆಗೆ ಸೂಚನೆ

ಮಡಿಕೇರಿ, (ಸೆ.14): ಇದೇ ಅಕ್ಟೋಬರ್, 17 ರಂದು ತಲಕಾವೇರಿಯಲ್ಲಿ ಜರುಗುವ ಪವಿತ್ರ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ. 

 ಭಾಗಮಂಡಲ ‘ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿಶೆಡ್ ಕಟ್ಟಡದ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

 ಪವಿತ್ರ ತೀರ್ಥೋದ್ಭವ ಸಂಬಂಧ ತಲಕಾವೇರಿಯಲ್ಲಿ ಭಕ್ತಾಧಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಅಧಿಕಾರಿಗಳು ಗಮನಹರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. 

 ಈ ಬಾರಿ ಅಕ್ಟೋಬರ್, 17 ರಂದು ಬೆಳಗ್ಗೆ 7.40 ಗಂಟೆಗೆ ಪವಿತ್ರ ತೀರ್ಥೋದ್ಭವ ಸಂಭವಿಸುವುದರಿಂದ ರಾತ್ರಿ ವೇಳೆಯಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ಆದ್ದರಿಂದ ಅಗತ್ಯ ಕ್ರಮವಹಿಸುವಂತೆ ಸಚಿವರು ಸೂಚಿಸಿದರು. 

ಮಳೆ ಕಡಿಮೆಯಾಗಿದ್ದು, ಕೂಡಲೇ ರಸ್ತೆ ನಿರ್ವಹಣೆ ಕೈಗೊಳ್ಳಬೇಕು. ರಸ್ತೆ ಬದಿ ಕಾಡನನ್ನು ಕಡಿಬೇಕು. ಗಿಡ ಗಂಟೆ ಸಂಬಂಧ ಅರಣ್ಯ ಅಧಿಕಾರಿಗಳು ತಗಾದೆ ತೆಗೆಯಬಾರದು ಎಂದು ನಿರ್ದೇಶನ ನೀಡಿದರು. 

ಪೊಲೀಸ್ ಇಲಾಖೆ ಅಧಿಕಾರಿಗಳು ಪವಿತ್ರ ತೀರ್ಥೋದ್ಭವ ಸಂಬಂಧ ಅಗತ್ಯ ಬಂದೋಬಸ್ತ್ ಮಾಡಬೇಕು ಎಂದು ಎನ್.ಎಸ್.ಭೋಸರಾಜು ಅವರು ನಿರ್ದೇಶನ ನೀಡಿದರು. 

ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಬಸ್ ಸೌಲಭ್ಯ ಒದಗಿಸುವುದು, ಕಾವೇರಿ ನೀರಾವರಿ ನಿಗಮ, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಹಂತದಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದರು. 

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ಸೂಚಿಸಿದರು. 

ನಾಡಿನ ಜೀವನದಿ ತಲಕಾವೇರಿಯ ಪವಿತ್ರ ತೀರ್ಥೋದ್ಭವ ಒಂದು ವಿಶಿಷ್ಟವಾಗಿದ್ದು, ಪವಿತ್ರ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಭಕ್ತಾಧಿಗಳಿಗೆ ಅಗತ್ಯ ಕನಿಷ್ಠ ಮೂಲ ಸೌಲಭ್ಯ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದರು. 

ಮಡಿಕೇರಿ-ಭಾಗಮಂಡಲ, ಕರಿಕೆ-ಭಾಗಮಂಡಲ, ವಿರಾಜಪೇಟೆ-ಭಾಗಮಂಡಲ ರಸ್ತೆಗುಂಡಿ ಮುಚ್ಚಬೇಕು. ರಸ್ತೆ ನಿರ್ವಹಣೆ ಮಾಡಬೇಕು. ಹಾಗೆಯೇ ಭಾಗಮಂಡಲ-ತಲಕಾವೇರಿ ರಸ್ತೆ ಸರಿಪಡಿಸುವಂತೆ ನಿರ್ದೇಶನ ನೀಡಿದರು. 

ತಲಕಾವೇರಿ ತೀರ್ಥೋದ್ಭವಕ್ಕೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದು, ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ತಾತ್ಕಾಲಿಕ ಶೌಚಾಲಯ, ಕುಡಿಯುವ ನೀರು ಮತ್ತಿತರ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು. 

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ರಸ್ತೆ ಗಿಡಗಂಟೆ ಕಡಿಯುವ ಸಂಬಂಧ ಲೋಕೋಪಯೋಗಿ, ಅರಣ್ಯ ಮತ್ತು ಕೆಎಸ್‍ಆರ್‍ಟಿಸಿ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ಮಾಡಿ ತುರ್ತು ಕ್ರಮವಹಿಸುವಂತೆ ಸೂಚಿಸಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಪ್ರತೀ ಬಾರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗುತ್ತದೆ. ಇದನ್ನು ನಿಯಂತ್ರಿಸಲು ಭಕ್ತಾಧಿಗಳು ಸಹಕರಿಸಬೇಕು ಎಂದು ಕೋರಿದರು. 

ಈ ಬಾರಿ ಬೆಳಗಿನ ವೇಳೆ ತೀರ್ಥೋದ್ಭವ ಸಂಭವಿಸುವುದರಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆ ಆಗಮಿಸಲಿದ್ದಾರೆ. ಆದ್ದರಿಂದ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗುವುದು ಎಂದರು. 

ಕೆಎಸ್‍ಆರ್‍ಸಿ ವಿಭಾಗದ ಅಧಿಕಾರಿ ಅವರು ಮಾಹಿತಿ ನೀಡಿ ತೀರ್ಥೋದ್ಭವಕ್ಕೆ ಅಗತ್ಯ ಬಸ್ ಸೌಲಭ್ಯವನ್ನು ಕಳೆದ ಬಾರಿಯಂತೆ ಕಲ್ಪಿಸಲಾಗುವುದು ಎಂದು ತಿಳಿಸಿದರು. 

ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಅವರು ಮಾತನಾಡಿ ತೀರ್ಥೋದ್ಭವ ಜಾತ್ರ ಮಹೋತ್ಸವ ಸಂಬಂಧ ಅರಣ್ಯ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು. 

ಕರಿಕೆ ಗ್ರಾಮದ ಕೋಡಿ ಪೊನ್ನಪ್ಪ ಅವರು ಮಾತನಾಡಿ ಕರಿಕೆ-ಭಾಗಮಂಡಲ ರಸ್ತೆ ತುಂಬಾ ಹದಗೆಟ್ಟಿಗೆ ಕೂಡಲೇ ರಸ್ತೆ ಅಭಿವೃದ್ಧಿಯಾಗಬೇಕು. ಹಾಗೆಯೇ ಅರಂತೋಡು-ಭಾಗಮಂಡಲ ಮಾರ್ಗ ರಸ್ತೆ ಸರಿಪಡಿಸಿ ಭಕ್ತಾಧಿಗಳಿಗೆ ಅನುಕೂಲ ಮಾಡಬೇಕು ಎಂದು ಕೋರಿದರು. 

ನೀರಾವರಿ ಇಲಾಖೆಯ ಇಇ ಪುಟ್ಟಸ್ವಾಮಿ ಅವರು ಮೇಲ್ಸುತುವೆ ಸಂಬಂಧಿಸಿದಂತೆ ಸುಣ್ಣ ಬಣ್ಣ ಬಳಿಯಲಾಗುವುದು, ಮಳೆ ನೀರು ಸರಾಗವಾಗಿ ಸರಿಯುವಂತಾಗಲು ಅಗತ್ಯ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಹೊಸೂರು ಸತೀಶ್ ಕುಮಾರ್ ಅವರು ಮೇಲ್ಸುತುವೆ ನಿರ್ಮಾಣ ಮಾಡಿದ್ದು, ಅಲ್ಲಲ್ಲಿ ನೀರು ನಿಲ್ಲುತ್ತಿದ್ದುಕಿದನ್ನು ಸರಿಪಡಿಸುವಂತಾಗಬೇಕು ಎಂದು ಹೇಳಿದರು. 

ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ ಅವರು ರಸ್ತೆ ನಿರ್ವಹಣೆ ಸಂಬಂಧಿಸಿದಂತೆ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದ್ದು, ಕೂಡಲೇ ಇನ್ನೊಂದು ವಾರದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. 

ಪುಲಿಯಂಡ ಜಗದೀಶ್ ಅವರು ಮಾತನಾಡಿ ಯಾವುದೇ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಶಾಸಕರು ಸ್ಥಳ ಪರಿಶೀಲಿಸಿದಲ್ಲಿ ಕಾಮಗಾರಿ ವೇಗ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ತಿಳಿಯಲಿದೆ. ಆ ನಿಟ್ಟಿನಲ್ಲಿ ಆಗಾಗ ಪರಿಶೀಲಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. 

ಪ್ರಮುಖರಾದ ಎಂ.ಬಿ.ದೇವಯ್ಯ ಅವರು ಮಾತನಾಡಿ ಮಡಿಕೇರಿ-ತಲಕಾವೇರಿ ಮಾರ್ಗ ಸಿಮೆಂಟ್ ರಸ್ತೆ ನಿರ್ಮಿಸಿದಲ್ಲಿ ಶಾಶ್ವತವಾಗಿ ರಸ್ತೆ ಇರುತ್ತದೆ ಎಂದು ಹೇಳಿದರು. 

ಭಾಗಮಂಡಲ ಸ್ಥಳೀಯರೊಬ್ಬರು ತುಲಾ ಸಂಕ್ರಮಣ ಸಂದರ್ಭದಲ್ಲಿ ಭಾಗಮಂಡಲ ಗ್ರಾ.ಪಂ.ವ್ಯಾಪ್ತಿಯಲ್ಲಿ ಮಾತ್ರ ಮೀನು ಮಾಂಸ ಮಾರಾಟ ನಿಷೇಧ ಮಾಡಲಾಗುತ್ತದೆ. ಇದು ಜಿಲ್ಲೆಯಾದ್ಯಂತ ಆಗಬೇಕು ಎಂದು ಸಲಹೆ ಮಾಡಿದರು. 

ನಗರಸಭೆ ಪೌರಾಯುಕ್ತರಾದ ವಿಜಯ್ ಅವರು ನಗರಸಭೆಯಿಂದ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ ಸ್ವಚ್ಛತೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು. 

ಸೆಸ್ಕ್ ಇಇ ಅನಿತಾ ಬಾಯಿ ಅವರು ಮಾತನಾಡಿ ಅಗತ್ಯ ವಿದ್ಯುತ್ ಪೂರೈಸಲಾಗುವುದು. ಹೆಚ್ಚುವರಿ ವಿದ್ಯುತ್ ಪರಿವರ್ತಕ ಅಳವಡಿಕೆಗೆ ಕೂಡಲೇ ಕ್ರಮವಹಿಸಲಾಗುವುದು ಎಂದು ಹೇಳಿದರು. 

ಈ ಕುರಿತು ಮಾತನಾಡಿದ ಪ್ರಮುಖರಾದ ಬಿ.ಎಸ್.ತಮ್ಮಯ್ಯ ಅವರು ತಲಕಾವೇರಿ ತೀರ್ಥೋದ್ಭವ ಒಂದು ತಿಂಗಳ ಕಾಲ ವಿದ್ಯುತ್ ಪೂರೈಕೆ ಇಲ್ಲದೆ ತುಂಬಾ ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ಗಮನಕ್ಕೆ ತಂದರು. 

ಸ್ಥಳೀಯರಾದ ಸುನಿಲ್ ಪತ್ರಾವೋ ಅವರು ತಲಕಾವೇರಿ ಭಾಗದಲ್ಲಿ ವಿದ್ಯುತ್ ಪೂರೈಕೆ ಇಲ್ಲದೆ ತುಂಬಾ ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡಿದರು. 

ಈ ಕುರಿತು ಮಾತನಾಡಿದ ಅನಿತಾ ಬಾಯಿ ಅವರು ಭಾಗಮಂಡಲ ತಲಕಾವೇರಿ ಮಾರ್ಗದಲ್ಲಿ ವಿದ್ಯುತ್ ಮಾರ್ಗವನ್ನು ರಸ್ತೆ ಬದಿಗೆ ಸ್ಥಳಾಂತರಿಸಿ ಸರಿಪಡಿಸಿ ವಿದ್ಯುತ್ ಪೂರೈಕೆಗೆ ಕೂಡಲೇ ಕ್ರಮವಹಿಸಲಾಗುವುದು ಎಂದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಜಾತ್ರೆಗೆ ಅಗತ್ಯ ವೈದ್ಯರನ್ನು ನಿಯೋಜಿಸಲಾಗುವುದು ಎಂದರು. 

ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಜಾತ್ರಾ ಪ್ರಯುಕ್ತ ಸ್ಥಳೀಯ ಸಾಂಸ್ಕøತಿಕ ಹಾಡುಗಾರಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. 

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಮಾತನಾಡಿ ತೀರ್ಥೋದ್ಭವ ಸಂದರ್ಭದಲ್ಲಿ ಕುಂಕುಮ ಹೂ ಇಟ್ಟು ತೀರ್ಥವನ್ನು ಕಲುಷಿತ ಮಾಡಬಾರದು. ಆದಷ್ಟು ಹೂ ಮತ್ತು ಕುಂಕುಮವನ್ನು ಕಡಿಮೆ ಮಾಡಬೇಕು ಎಂದು ಅವರು ಸಲಹೆ ಮಾಡಿದರು. 

ದಸರಾ ಸಾಂಸ್ಕøತಿಕ ಸಮಿತಿ ಸಂಚಾಲಕರಾದ ತೆನ್ನಿರಾ ಮೈನಾ ಅವರು ಮಾತನಾಡಿ ಭಕ್ತಾಧಿಗಳಿಗೆ ಯಾವುದೇ ಕಿರಿಕಿರಿ ಉಂಟಾಗದಂತೆ ಎಲ್ಲರೂ ಎಚ್ಚರವಹಿಸಬೇಕು ಎಂದು ಅವರು ಸಲಹೆ ಮಾಡಿದರು. 

ಬಿ.ಎಸ್.ತಮ್ಮಯ್ಯ ಅವರು ಮಾತನಾಡಿ ಕೊಡಗು ಏಕೀಕರಣ ರಂಗ ವತಿಯಿಂದ ಅನ್ನ ಸಂತರ್ಪಣೆಯನ್ನು ಮಾಡಿಕೊಂಡು ಬರಲಾಗುತ್ತಿದೆ. ಅದನ್ನು ಮುಂದುವರಿಸಿಕೊಂಡು ಹೋಗಲಾಗುವುದು. ಆ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಕೋರಿದರು. 

‘ಕೊನೆಯಲ್ಲಿ ಮಾತನಾಡಿದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಧಾರ್ಮಿಕ ಆಚರಣೆ ಮತ್ತು ವಿಚಾರಗಳಿಗೆ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ದೇವಾಲಯ ಸಮಿತಿಯವರು ಕುಳಿತು ನಿರ್ಧಾರ ತೆಗೆದುಕೊಳ್ಳಬೇಕು. ಈ ಬಗ್ಗೆ ಹಿರಿಯರ ಜೊತೆ ಚರ್ಚಿಸಬೇಕು. ಯಾರಿಗೂ ನೋವು ಉಂಟಾಗದಂತೆ ಗಮನಹರಿಸುವುದು ಅತ್ಯವಶ್ಯಕ ಎಂದು ಹೇಳಿದರು.’ 

ಆಡಳಿತ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ನಿರ್ಲಕ್ಷ್ಯ ಕಂಡುಬಂದಲ್ಲಿ ಕೂಡಲೇ ಗಮನಕ್ಕೆ ತರುವಂತಾಗಬೇಕು. ಭಕ್ತಾಧಿಗಳಿಗೆ ಸಮಸ್ಯೆ ಆಗದಂತೆ ಗಮನಹರಿಸುವುದು ಅತ್ಯಗತ್ಯ ಎಂದು ಹೇಳಿದರು. 

ಸ್ಥಳೀಯರಾದ ಪ್ರಮೋದ್, ಕೆ.ಜೆ.ಭರತ್ ಇತರರು ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಬಲ್ಲಡ್ಕ ಅಪ್ಪಾಜಿ, ಕಾಳನ ರವಿ, ಇತರರು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ ಮತದಾರರ ವಿವರ ಪ್ರಕಟ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ

ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಾದ ಆದೇಶದ ನಂತರ ಬಿಹಾರದಲ್ಲಿ ಕರಡು ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ (Election Commission) ಬಿಡುಗಡೆ ಮಾಡಿದೆ.

[ccc_my_favorite_select_button post_id="112766"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!