ಬೆಂಗಳೂರು, (ಸೆ.14): ನಗರದ ಹೆಣ್ಣೂರು ಬಂಡೆ ಬಳಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಬಂಡೆ ವಿನಾಯಕ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಶುಕ್ರವಾರ ನೆರವೇರಿತು.
ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಅವರು ಹಾಗೂ ಶ್ರೀ ನಂಜಾವಧೂತ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ನೂತನ ದೇವಾಲಯವನ್ನು ಲೋಕಾರ್ಪಣೆ ಮಾಡಿದರು.
ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ಅಧ್ಯಕ್ಷತೆಯ ಬಂಡೆ ವಿನಾಯಕ ದೇವಸ್ಥಾನ ಟ್ರಸ್ಟ್ ವತಿಯಿಂದ ಈ ಭವ್ಯ ದೇಗುಲವನ್ನು ನಿರ್ಮಾಣ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳು ಹಾಗೂ ಕೇಂದ್ರ ಸಚಿವರು ವಿನಾಯಕ ದೇವರ ದರ್ಶನ ಮಾಡಿಕೊಂಡು, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರಾದ ಕುಮಾರಸ್ವಾಮಿ ಅವರು; ರಮೇಶ್ ಗೌಡ ಅವರ ನೇತೃತ್ವದಲ್ಲಿ ವಿನಾಯಕ ದೇವರಿಗೆ ಭವ್ಯ ದೇಗುಲ ನಿರ್ಮಾಣ ಮಾಡಲಾಗಿದೆ. ಅವರಿಗೆ ನನ್ನ ಅಭಿನಂದನೆಗಳು. ಇಲ್ಲಿ ನಿರಂತರವಾಗಿ ದೈವ ಕಾರ್ಯಗಳು ನಡೆಯಲಿ. ಎಲ್ಲರಿಗೂ ಆ ದೇವರು ಒಳ್ಳೆಯದು ಮಾಡಲಿ ಎಂದರು.
ಕೋಲಾರದ ಸಂಸದ ಮಲ್ಲೇಶ್ ಬಾಬು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್, ಮಾಜಿ ಶಾಸಕ ಚೌಡರೆಡ್ಡಿ ತೂಪಲ್ಲಿ, ಹಿರಿಯ ಮುಖಂಡ ಪದ್ಮನಾಭ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಸಾವಿರಾರು ಜನರು ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಎಲ್ಲರಿರೂ ಅನ್ನ ಸಂತರ್ಪಣೆ, ಪ್ರಸಾದ ವಿನಿಯೋಗ ನಡೆಯಿತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….