ನವದೆಹಲಿ, (ಸೆ.12); ಸಿಪಿಐ (ಎಂ) ನಾಯಕ ಸೀತಾರಾಂ ಯೆಚೂರಿ ನಿಧನರಾಗಿದ್ದಾರೆ. ಕಳೆದು ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಸೀತಾರಾಂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.
ನ್ಯುಮೋನಿಯಾದಿಂದ ಅವರು ಬಳಲುತ್ತಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಪತ್ನಿ ಸೀಮಾ ಚಿಸ್ತಿ ಯೆಚೂರಿ ಮತ್ತು ಇಬ್ಬರು ಮಕ್ಕಳನ್ನು ಯೆಚೂರಿ ಅಗಲಿದ್ದಾರೆ.
ಕಳೆದ ಆ.19ರಂದು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ನ್ಯುಮೋನಿಯಾದಿಂದ ಅವರು ತೀವ್ರವಾಗಿ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆ ಫಲಿಸದೇ ಅವರು ಅಸುನೀಗಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.
1952ರ ಆ.12ರಂದು ಚೆನ್ನೈನಲ್ಲಿ ಜನಿಸಿದ್ದ ಯೆಚೂರಿ ಅವರು ದೆಹಲಿ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದು, ನಂತರ JNU ನಲ್ಲೂ ಅವರು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದರು.
ಕಳೆದ 50 ವರ್ಷಗಳಿಂದ ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….