ಚಿಕ್ಕಬಳ್ಳಾಪುರ, (ಸೆ.13): ಶಾಸಕ ಪ್ರದೀಪ್ ಈಶ್ವರ್, ಸಂಸದ ಡಾ.ಕೆ.ಸುಧಾಕರ್ ನಡುವೆ ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚಿಕ್ಕಬಳ್ಳಾಪುರನಗರಸಭೆ ಅಧ್ಯಕ್ಷಮತ್ತು ಉಪಾಧ್ಯಕ್ಷರ ಚುನಾವಣೆ ಮತದಾನ ನಡೆದಿದ್ದು, ನ್ಯಾಯಾಲಯದ ನಿರ್ದೇಶನದ ಮೇರೆಗೆ ಫಲಿತಾಂಶ ಕಾಯ್ದಿರಿಸಲಾಗಿದೆ.
ಆದಾಗ್ಯೂ ಚುನಾವಣೆಯಲ್ಲಿ ಜಯಗಳಿಸಿದ್ದೇವೆ ಎಂದು ಬಿಜೆಪಿ ಬೆಂಬಲಿಗರು ವಿಜಯೋತ್ಸವ ಆಚರಿಸಿದ್ದಾರೆ.
ಒಟ್ಟು 31 ಸದಸ್ಯ ಬಲದ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ 9 ಸದಸ್ಯರು, 3 ಪಕ್ಷೇತರರು, 6 ಕಾಂಗ್ರೆಸ್ಸಿಗರು, ಸಂಸದರ ಮತ ಸೇರಿ ಬಿಜೆಪಿಗೆ ಒಟ್ಟು 19 ಮತ.
ಇನ್ನು ಕಾಂಗ್ರೆಸ್ 10 ಸದಸ್ಯರು, ಶಾಸಕ, ಎಂಎಲ್ಸಿ ಸೇರಿ 3, ಒಬ್ಬ ಪಕ್ಷೇತರ, ಇಬ್ಬರು ಜೆಡಿಎಸ್ ಸದಸ್ಯರ ಬೆಂಬಲದೊಂದಿಗೆ ಒಟ್ಟು 16 ಮತಗಳನ್ನು ಪಡೆದಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….