ದೊಡ್ಡಬಳ್ಳಾಪುರ, (ಸೆ.13); ತಾಲೂಕಿನ ಭಾರತೀಯ ಜನತಾ ಪಾರ್ಟಿಯ ಸಕ್ರಿಯ, ನಿಷ್ಠಾವಂತ ಕಾರ್ಯಕರ್ತರಲ್ಲಿ ಒಬ್ಬರಾಗಿರುವ ರಾಮಕೃಷ್ಣಯ್ಯ ಎನ್.ಬಿ (ರಾಮಕಿಟ್ಟಿ) ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಕೃಷ್ಣಪ್ಪ ಅವರು ಆದೇಶಿಸಿದ್ದು, ದರ್ಗಾಜೋಗಿಹಳ್ಳಿ ನಿವಾಸಿ ರಾಮಕೃಷ್ಣಯ್ಯ ಎನ್.ಬಿ (ರಾಮಕಿಟ್ಟಿ) ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.
ಆದೇಶ ಪತ್ರದನ್ವಯ ಈ ಹೊಣೆಗಾರಿಕೆಯನ್ನು ಅತ್ಯಂತ ಜವಬ್ದಾರಿಯುತವಾಗಿ ನಿರ್ವಹಿಸಿ ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಡಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನ ಎದುರಿಸಲು ಪಕ್ಷಕ್ಕೆ ಶಕ್ತಿ ತುಂಬಾತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತವಾಗಿ ಶ್ರಮಿಸುವಂತೆ ಸೂಚನೆ ನೀಡಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….<!–