ಚೆನ್ನೈ, (ಸೆ.16); ದಕ್ಷಿಣ ಭಾರತದ ಹೆಸರಾಂತ ಡ್ಯಾನ್ಸ್ ಕೊರಿಯೋ ಗ್ರಫರ್ (ನೃತ್ಯ ನಿರ್ದೇಶಕ) ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ.
ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಅತ್ಯಂತ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರು ಕಳೆದ ಕೆಲವು ದಿನಗಳಿಂದ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು 21 ವರ್ಷದ ಮಹಿಳಾ ನೃತ್ಯ ನಿರ್ದೇಶಕಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
ಜಾನಿ ಮಾಸ್ಟರ್ ಅವರು ಚೆನ್ನೈ, ಮುಂಬೈ ಮತ್ತು ಹೈದರಾಬಾದ್‌ನಲ್ಲಿ ಹೊರಾಂಗಣ ಚಿತ್ರೀಕರಣದ ಸಮಯದಲ್ಲಿ ಮತ್ತು ನರಸಿಂಗಿಯಲ್ಲಿರುವ ಅವರ ನಿವಾಸದಲ್ಲಿ ಸಂತ್ರಸ್ತೆಯ ಮೇಲೆ ಅನೇಕ ಬಾರಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದೀಗ ಜಾನಿ ವಿರುದ್ಧ ಎಫ್ ಐಆರ್ ದೂರು ದಾಖಲಾಗಿದ್ದು, ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ನರಸಿಂಗಿ ಪೊಲೀಸರಿಗೆ ವರ್ಗಾಯಿಸಲಾಗಿದೆ.
ಕನ್ನಡದ ಹೆಸರಾಂತ ನಟರಾದ ಪುನೀತ್ ರಾಜ್‌ಕುಮಾರ್, ಸುದೀಪ್, ಅಲ್ಲು ಅರ್ಜುನ್ ಸೇರಿದಂತೆ ಅನೇಕ ಖ್ಯಾತ ನಟರಿಗೆ ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ.
ಜಾನಿ ಮಾಸ್ಟರ್ ವಿರುದ್ಧ ಈ ಹಿಂದೆ ಕೂಡ ದೂರು ದಾಖಲಾಗಿತ್ತು. 2015ರಲ್ಲಿ ಕಾಲೇಜಿನಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಮೇಡ್ಕಲ್‌ನ ಸ್ಥಳೀಯ ನ್ಯಾಯಾಲಯ ಆರು ತಿಂಗಳು ಜೈಲು ಶಿಕ್ಷೆ ಕೂಡ ವಿಧಿಸಿದೆ.
ಜನಸೇನಾ ಪಕ್ಷದಿಂದ ದೂರ; ಜಾನಿ ಮಾಸ್ಟರ್ ಮೇಲೆ ಆರೋಪದ ಹಿನ್ನೆಲೆಯಲ್ಲಿ ಜನಸೇನಾ ಪಕ್ಷದ ಚಟುವಟಿಕೆಗಳಿಂದ ದೂರವಿರಲು ಆದೇಶಿಸಲಾಗಿದೆ. ಅವರ ವಿರುದ್ಧ ರಾಯದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವ ಈ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರ ತಕ್ಷಣವೇ ಜಾರಿಗೆ ಬರಲಿದೆ ಎಂದು ಪಕ್ಷದ ಮುಖ್ಯಸ್ಥ ವೇಮುಲಪತಿಯ ಅಜಯ್ ಎಮ್ಮಾರ್ ಆದೇಶಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….