ದೊಡ್ಡಬಳ್ಳಾಪುರ, (ಸೆ.18); ಖ್ಯಾತ ನಟ, ಕನ್ನಡ ಚಿತ್ರರಂಗದ ‘ಸಾಹಸ ಸಿಂಹ’ ದಿವಂಗತ ವಿಷ್ಣುವರ್ಧನ್ ಅವರ 74ನೇ ಜನ್ಮದಿನವನ್ನು ಇಂದು ಅವರ ಅಭಿಮಾನಿಗಳು ದೊಡ್ಡಬಳ್ಳಾಪುರ, ಘಾಟಿ ಸುಬ್ರಹ್ಮಣ್ಯ ಸೇರಿದಂತೆ ನಾಡಿನಾದ್ಯಂತ ಆಚರಿಸುತ್ತಿದ್ದಾರೆ.
ಅನ್ನದಾನ, ಆಸ್ಪತ್ರೆಗಳಲ್ಲಿ ಹಣ್ಣು ವಿತರಣೆ, ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ವಿಷ್ಣು ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಆಚರಿಸುತ್ತಿದ್ದಾರೆ.
ಚಂದನವನದ ತಾರೆಯರು, ಅಭಿಮಾನಿಗಳು ಹಾಗೂ ರಾಜಕೀಯ ನಾಯಕರು, ಸಂಘ ಸಂಸ್ಥೆಗಳ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ನೆಚ್ಚಿನ ‘ದಾದಾ’ನನ್ನು ಸ್ಮರಿಸಿದ್ದಾರೆ.
ಅಭಿನಯ ಭಾರ್ಗವ ವಿಷ್ಣುವರ್ಧನ್ ಅವರನ್ನು ಅಭಿಮಾನಿಗಳ ಪ್ರೀತಿಯಿಂದ ವಿಷ್ಣುದಾದಾ ಎಂದೇ ಕರೆಯುತ್ತಾರೆ. ಅವರು ಭೌತಿಕವಾಗಿ ಇಲ್ಲದಿದ್ದರೂ ಸಿನಿಮಾಗಳ ಮೂಲಕ ಜೀವಂತವಾಗಿದ್ದಾರೆ. 200 ಸಿನಿಮಾಗಳಲ್ಲಿ ನಟಿಸಿರುವ ವಿಷ್ಣು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.
ರಾಜ್ಯದ ಎಲ್ಲ ಕಡೆ ಅವರ ಅಭಿಮಾನಿಗಳು ಇಂದು ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….