ದೊಡ್ಡಬಳ್ಳಾಪುರ, (ಸೆ.16); ಮುಸ್ಲಿಂ ಬಾಂಧವರ ಪವಿತ್ರ ಈದ್ ಮಿಲಾದ್ ಅನ್ನು ತಾಲೂಕಿನಾದ್ಯಂತ ಶ್ರದ್ಧಾ ಭಕ್ತಿ ಸಂಭ್ರಮಗಳಿಂದ ಆಚರಿಸಲಾಯಿತು.
ಶಾಂತಿದೂತ ಮಾನವತಾವಾದಿ ವಿಶ್ವ ಪ್ರವಾದಿ ಮಹಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಆಚರಣೆಯಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಈದ್ ಶುಭಾಶಯಗಳನ್ನು ಕೋರುವ ಮೂಲಕ ಸಂಭ್ರಮಿಸಿದರು.
ಮಸೀದಿಗಳಲ್ಲಿ ಮೌಲೀದ್ ಹಾಗೂ ಕುರಾನ್ ಪಾರಾಯಣ ಆಚರಣೆ ನಡೆಯಿತು. ಮಸೀದಿಗಳ ಸಮೀಪದ ಹಾದಿ ಬೀದಿಗಳಲ್ಲಿ ಹಸರುಮಯ ಬ್ಯಾನರ್‍ಗಳು, ಬಾವುಟಗಳು ರಾರಾಜಿಸುತ್ತಿದ್ದವು.
ಮಸೀದಿಗಳಲ್ಲಿ ಅನ್ನಸಂತರ್ಪಣೆ ನಡೆಯಿತು.
ಮಧ್ಯಾಹ್ನ ನಗರದ ಇಸ್ಲಾಂಪುರ ಜಾಮಿಯಾ ದರ್ಗಾದಿಂದ ಪೈಗಂಬರ್ ಮೆಕ್ಕಾದ ಸ್ಥಬ್ದ ಚಿತ್ರಗಳು, ಮೌಲೀದ್ ಪಾರಾಯಣದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೂಬಸ್ತ್ ಕೈಗೊಳ್ಳಲಾಗಿತ್ತು. ಐಜಿ ಲಾಬುರಾಮ್ ಅವರು ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು.
ಎಸ್ಪಿ ಸಿಕೆ ಬಾಬಾ, ಎಎಸ್ಪಿ ನಾಗರಾಜು, ಡಿವೈಎಸ್ಪಿ ರವಿ, ಇನ್ಸ್ಪೆಕ್ಟರ್ಗಳಾದ ಅಮರೇಶ್ ಗೌಡ, ಸಾಧಿಕ್ ಪಾಷಾ, ಡಾ.ಎಂ.ಬಿ.ನವೀನ್ ಕುಮಾರ್, ದಿಲೀಪ್ ಕುಮಾರ್, ಮಧುಸೂದನ್, ಶ್ರೀನಿವಾಸ್ ಸೇರಿದಂತೆ ಡಿಆರ್ ತುಕ್ಕಡಿ, ಕೆಎಸ್ ಆರ್‌ಪಿ ತುಕ್ಕಡಿ ಸೇರಿದಂತೆ 200 ಕ್ಕೂ ಹೆಚ್ಚು ಪೊಲೀಸರು ಭದ್ರತಾ ಕಾರ್ಯದಲ್ಲಿ ನಿರತರಾಗಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….<!–