ದೊಡ್ಡಬಳ್ಳಾಪುರ, (ಸೆ.18): ತಾಲೂಕಿನ ಆರೂಢಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಪುಟಾಣಿ ಮಕ್ಕಳಿಗೆ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಹುಡುಗನಿಗೆ ಪೇಟ, ಬಾಸಿಂಗ ಕಟ್ಟಿ ಹುಡುಗಿಗೆ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ ಮಾಡಿಸಿ, ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ರೀತಿ ಮದುವೆ ಮಾಡಿದರೆ ಮಳೆಯಾಗುತ್ತೆ ಎಂಬುವುದು ಈ ಗ್ರಾಮದ ಜನರ ನಂಬಿಕೆ. ಹೀಗಾಗಿ ಗ್ರಾಮಸ್ಥರೆಲ್ಲಾ ಸೇರಿ ಮದುವೆ ಮಾಡಿಸಿದ್ದಾರೆ.
ತಾಲೂಕಿನಲ್ಲಿ ಮಳೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ಹಲವೆಡೆ ರೈತರು ಮಳೆಗಾಗಿ ಮಳೆರಾಯನಿಗೆ ಮೊರೆ ಇಟ್ಟಿದ್ದು ವಿಭಿನ್ನ ಆಚರಣೆಯನ್ನು ಮಾಡಿದ್ದಾರೆ.
ಮಳೆಗಾಗಿ ಕತ್ತೆ ಮದುವೆ, ಕಪ್ಪೆ ಮದುವೆಗಳನ್ನು ಮಾಡುವುದು ಸಾಮಾನ್ಯ, ಇನ್ನೂ ಕೆಲ ಕಡೆ ವಿಭಿನ್ನ ಮಾದರಿಯ ಆಚರಣೆಗಳು ರೂಢಿಯಲ್ಲಿವೆ. ಆದ್ರೆ ದೊಡ್ಡಬಳ್ಳಾಪುರದ ಪಚ್ಚಾರಲಹಳ್ಳಿ ಗ್ರಾಮದಲ್ಲಿ ಗಂಡು ಮಗುವಿಗೆ ಹೆಣ್ಣಿನ ವೇಷ ಹಾಕಿಸಿ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ.
ಒಬ್ಬ ಬಾಲಕನಿಗೆ ಹುಡುಗಿ ವೇಷ ಹಾಕಿ ದಂಪತಿಗಳಂತೆ ಮದುವೆ ಮಾಡಿಸಿದ್ದಾರೆ. ಹುಡುಗನಿಗೆ ಪೇಟ, ಬಾಸಿಂಗ ಕಟ್ಟಿ ಹುಡುಗಿಗೆ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೆ ಮುಂದೆ ನಿಂತು ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ.
ಈ ರೀತಿ ಮದುವೆ ಮಾಡಿದ್ರೆ ಮಳೆಯಾಗುತ್ತೆ ಎಂಬುವುದು ಈ ಗ್ರಾಮದ ಜನರ ನಂಬಿಕೆ ಎಂದು ಗ್ರಾಮಪಂಚಾಯಿತಿ ಸದಸ್ಯೆ ನಾಗರತ್ನ ರಮೇಶ್ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….</