ನಾಗಮಂಗಲ ಗಲಭೆ ಪ್ರಕರಣ; ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಅಮಾನತ್ತು – ಸಿಎಂ

ಕಲಬುರಗಿ, (ಸೆಪ್ಟೆಂಬರ್.16): ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ  ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ  ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು.

371 ಜೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ: ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ  371 ಜೆ ಕಾನೂನು ತರಲಾಗಿದ್ದು,, ಇದಕ್ಕಾಗಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು.  2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತರು ಬಿಜೆಪಿಯವರಲ್ಲ.  ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿದ್ದರು ಎಂದರು.

ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ಅನುದಾನ: ಕಾಂಗ್ರೆಸ್ ಸರ್ಕಾರದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ  ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

ನಾಗಮಂಗಲ ಪ್ರಕರಣ- ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಅಮಾನತ್ತು: ಮಂಡ್ಯ ಜಿಲ್ಲೆಯ ನಾಗಮಂಗಲದ ಗಲಭೆ ಪ್ರಕರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ನಾಗಮಂಗಲ ಶಾಂತವಾಗಿದೆ. ಗಲಭೆ ಪ್ರಕರಣಕ್ಕೆ ಪೊಲೀಸರ ಕರ್ತವ್ಯ ವೈಫಲ್ಯವ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಸಂಬಂಧಪಟ್ಟ ಉಪಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ಸ್ ಪೆಕ್ಟರ್ ನ್ನು ಅಮಾನತ್ತುಗೊಳಿಸಲಾಗಿದೆ.

ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟ, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸುರಂಗ ರಸ್ತೆ ಯೋಜನೆ ಕೂಡ ಅದೇ ರೀತಿಯಾಗಲಿದೆ. ಎಷ್ಟೇ ಅನುದಾನ ಹೆಚ್ಚಿದರೂ ಈ ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಮೆಟ್ರೋ ಯೋಜನೆಯನ್ನು ಇದೇ ಹಣದಲ್ಲಿ ವಿಸ್ತರಣೆ ಮಾಡಬಹುದು. ಈ ಯೋಜನೆ ಮಾಡಿ ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌

[ccc_my_favorite_select_button post_id="115408"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!