ಬೆಂಗಳೂರು, (ಸೆ.16); ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ನಿಂದನೆ ಮಾಡಿರುವ ಆರೋಪದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಇಂದು ಒಕ್ಕಲಿಗ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರನ್ನು ಒಳಗೊಂಡ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮುನಿರತ್ನ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಿದೆ.
ಸೋಮವಾರ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮುನಿರತ್ನ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮಕ ಜರುಗಿಸಿ ಎಂದು ಮನವಿ ಸಲ್ಲಿಸಲಿದ್ದಾರೆ.
ಸಚಿವರಾದ ಡಾ.ಎಂ.ಸಿ.ಸುಧಾಕರ್, ಚೆಲುವರಾಯಸ್ವಾಮಿ, ಶಾಸಕರಾದ ಶರತ್ ಬಚ್ಚೇಗೌಡ, ಹೆಚ್‌ಸಿ ಬಾಲಕೃಷ್ಣ, ಡಾ.ರಂಗನಾಥ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಎಸ್.ರವಿ, ದೊಡ್ಡಬಳ್ಳಾಪುರ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಮತ್ತಿತರರಿದ್ದರು.
ಈ ಕುರಿತು ಮಾಹಿತಿ ನೀಡಿದ ಟಿ.ವೆಂಕಟರಮಣಯ್ಯ, ಒಕ್ಕಲಿಗ ಸಮುದಾಯ, ದಲಿತ ಸಮುದಾಯದ ವಿರುದ್ಧ ನಾಲಿಗೆ ಹರಿಬಿಟ್ಟಿರುವ ಮುನಿರತ್ನ ಅವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಲಾಗಿದೆ.
ನಾವು ಒಕ್ಕಲಿಗ ನಾಯಕರು ಎನ್ನುವ ಆರ್.ಅಶೋಕ್, ಸಿಟಿ ರವಿ ಈಗ ಮುನಿರತ್ನ ಪರವಾಗಿ ವಕಾಲತ್ತು ವಹಿಸುತ್ತಿದ್ದಾರೆ. ಇವರು ಒಕಲಿಗ ವಿರೋಧಿ ಮಾತ್ರವಲ್ಲದೆ, ದಲಿತ ವಿರೋಧಿಗಳಾಗಿದ್ದಾರೆ. ಓಟ್ ಬ್ಯಾಂಕ್ಗೋಸ್ಕರ ದಲಿತ ಪರ, ಒಕ್ಕಲಿಗ ನಾಯಕರು ಎಂಬ ಪೋಷಾಕು ಧರಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ ಹಾಕಿ ಜಾತಿ ನಿಂತನೆ ಮಾಡಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಇನ್ನು ಇವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್ ದಾಖಲಾಗಿವೆ.
ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ.
ಆಡಿಯೋ ವೈರಲ್ ಆದ ಬೆನ್ನಲ್ಲೇ ಬಿಜೆಪಿ ಶಾಸಕ ಮುನಿರತ್ನ ಅವರನ್ನ ಅರೆಸ್ಟ್ ಮಾಡಲಾಗಿದೆ. ಅವರ ವಾಯ್ಸ್ ನ ಎಫ್ ಎಸ್ ಎಲ್ ಗೆ ಕಟ್ಟಿದ್ದಾರೆ. ಬೆದರಿಕೆ ಹಾಕಿರುವ ಧ್ವನಿ ಅವರದ್ದೋ ಅಲ್ಲವೋ ಎಂದು ತನಿಖೆಯಿಂದ ತಿಳಿದು ಬರಬೇಕಿದೆ.
ವಾಯ್ಸ್ ಮ್ಯಾಚ್ ಆಗುತ್ತಾ ಇಲ್ವಾ ಅನ್ನೋದು ತನಿಖೆಯಲ್ಲಿ ಬರುತ್ತದೆ, ಮ್ಯಾಚ್ ಆಗಿಲ್ಲ ಅಂದ್ರೆ ಅವರ ಮೇಲೆ ಯಾವುದೇ ಕೇಸ್, ಆಪಾದನೆ ಮುಂದುವರೆಯೋದಿಲ್ಲ. ಒಂದು ವೇಳೆ ಮ್ಯಾಚ್ ಆಗುತ್ತೆ ಅಂದ್ರೆ ಕಾನೂನು ಪ್ರಕಾರ ಏನು ಕ್ರಮ ತಗೊಬೇಕೋ ತಗೋತಾರೆ ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….