ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮಕ್ಕೆ ಆದಿಚುಂಚನಗಿರಿ ಶ್ರೀಗಳ ಆಗ್ರಹ

ಬೆಂಗಳೂರು, (ಸೆಪ್ಟೆಂಬರ್.16); ಒಕ್ಕಲಿಗ ಹಾಗೂ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರು ಕೂಡಲೇ ತಮ್ಮ ಹೇಳಿಕೆ ಕುರಿತು ಕ್ಷಮೆ ಯಾಚಿಸಬೇಕೆಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ಮಾಡಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿದ್ದು ಓರ್ವ ಜನಪ್ರತಿನಿಧಿಯಾಗಿರುವ ಮುನಿರತ್ನ ಅವರ ಹೇಳಿಕೆಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಸಮಾಜದಲ್ಲಿ ಪ್ರತಿಯೊಂದು ಸಮುದಾಯಗಳಿಗೂ ತಮ್ಮದೇ ಆದ ಆತ್ಮಾಭಿಮಾನಿ ಮತ್ತು ಸ್ವಾಭಿಮಾನ ಇರುತ್ತದೆ. ಯಾರೊಬ್ಬರ ಮನಸ್ಸನ್ನು ನೋಯಿಸುವ ಕೆಲಸ ಮಾಡಬಾರದೆಂದು ಕಿವಿಮಾತು ಹೇಳಿದ್ದಾರೆ.

ಮುನಿರತ್ನ ಅವರು ಕಳೆದ ಹಲವಾರು ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿದ್ದವರು. ಅಂಥವರಿಂದ ಇಂತಹ ಆಶ್ಲೀಲಪದಗಳನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಇಂತಹ ಅವಹೇಳನಕಾರಿ ಮಾತುಗಳನ್ನು ನಾವು ಖಂಡಿಸುತ್ತೇವೆ. ಕೂಡಲೇ ತಮ್ಮ ಹೇಳಿಕೆಗೆ ಪ್ರಾಯಶ್ಚಿತ ರೂಪದಲ್ಲಿ ಕ್ಷಮೆ ಕೇಳಬೇಕೆಂದು ಸೂಚಿಸಿದ್ದಾರೆ.

‘ಇಂದು ಸಮಾಜದಲ್ಲಿ ಮಹಿಳೆಯರು ಪುರುಷರಿಗೆ ಸಮನಾಗಿ ಎಲ್ಲಾ ಕ್ಷೇತ್ರಗಳಲ್ಲೂ ಅದ್ವೀತಿಯ ಸಾಧನೆ ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣವಾಗಬೇಕೆಂಬ ಎಲ್ಲರೂ ಅಪೇಕ್ಷೆ ಪಡುತ್ತಿರುವಾಗ ಶಾಸಕರಾಗಿ ಮುನಿರತ್ನ ಅವರು ಮಹಿಳೆಯ ಬಗ್ಗೆ ಇಷ್ಟು ಕ್ಷುಲ್ಲಕವಾಗಿ ಮಾತನಾಡಿದ್ದನ್ನು ನಾಗರಿಕ ಸಮಾಜ ಒಪ್ಪಲು ಸಾಧ್ಯವೇ ಇಲ್ಲ ಎಂದು ಶ್ರೀಗಳು ಆಕ್ಷೇಪಿಸಿದ್ದಾರೆ.

ಸಮಾಜದಲ್ಲಿ ಮೇಲುಕೀಳು, ಬಡವಬಲಿದ ಎನ್ನದೆ ನಾವೆಲ್ಲರೂ ಒಂದೇ ಎಂಬುದು ಸಂವಿಧಾನದ ಆಶಯ. ಅದಕ್ಕೆ ತಕ್ಕಂತೆ ಜನಪ್ರತಿನಿಧಿಗಳು ನಡೆದುಕೊಳ್ಳಬೇಕು. ಮುನಿರತ್ನ ಅವರ ಮಾತನ್ನು ಕೇಳಿ ಒಂದು ಕ್ಷಣ ದಿಗ್ಧಾಂತನಾಗಿದ್ದೇನೆ ಎಂದು ಹೇಳಿದ್ದಾರೆ. 

ಒಕ್ಕಲಿಗ ಸಮುದಾಯದ ಬಗ್ಗೆಯೂ ಅವರು ಆಡಿರುವ ಮಾತುಗಳು ಯಾರಿಗೂ ಶೋಭೆ ತರುವುದಿಲ್ಲ. ಸ್ವಾಭಿಮಾನದ ಸಂಕೇತದಂತಿರುವ ಒಕ್ಕಲಿಗರು ಇನ್ನೊಬ್ಬರಿಗೆ ಕೈ ಎತ್ತಿ ದಾನ ಮಾಡುವರೇ ಹೊರತು ಬೇರೆಯವರ ಬಳಿ ಎಂದೂ ಕೈಚಾಚುವವರಲ್ಲ. ಅಂತಹ ಸಮಾಜದ ಬಗ್ಗೆ ಕ್ಷುಲಕವಾಗಿ ಮಾತನಾಡಿರುವ ಮುನಿರತ್ನ ಅವರು ಕೂಡಲೇ ಕ್ಷಮಾಪಣೆ ಕೇಳುವಂತೆ ಬುದ್ದಿಮಾತು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮುನಿರತ್ನ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಇದರ ಸತ್ಯಸತ್ಯತೆಯನ್ನು ಸರ್ಕಾರ ಪರಿಶೀಲಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಿಕೊಡಬೇಕು. ಒಂದು ವೇಳೆ ಇದರಲ್ಲಿರುವ ಧ್ವನಿ ಮುನಿರತ್ನ ಅವರದ್ದೇ ಎಂದು ದೃಢವಾದರೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕು ಎಂದು ಶ್ರೀಗಳು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸುರಂಗ ರಸ್ತೆ ಯೋಜನೆ ಕೂಡ ಅದೇ ರೀತಿಯಾಗಲಿದೆ. ಎಷ್ಟೇ ಅನುದಾನ ಹೆಚ್ಚಿದರೂ ಈ ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಮೆಟ್ರೋ ಯೋಜನೆಯನ್ನು ಇದೇ ಹಣದಲ್ಲಿ ವಿಸ್ತರಣೆ ಮಾಡಬಹುದು. ಈ ಯೋಜನೆ ಮಾಡಿ ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌

[ccc_my_favorite_select_button post_id="115408"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!