ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ

ಬೆಂಗಳೂರು, (ಸೆ.20): ಗಂಗಾ ನದಿಗೆ ಮಾಡಲಾಗುವ ಗಂಗಾ ಆರತಿ ಮಾದರಿ ಕಾವೇರಿ ನದಿಗೆ ಕಾವೇರಿ ಆರತಿ ಮಾಡುವ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಅವಲೋಕಿಸಿ ಅಧ್ಯಯನ ನಡೆಸಲು ಸಚಿವರು, ಶಾಸಕರು ಮತ್ತು ಅಧಿಕಾರಿಗಳನ್ನೊಳಗೊಂಡ ನಿಯೋಗ ವಾರಣಾಸಿ ಮತ್ತು ಹರಿದ್ವಾರಕ್ಕೆ ಭೇಟಿ ನೀಡಲಿದೆ.

ಕೃಷಿ ಸಚಿವರು ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು, ಜಲಸಂಪನ್ಮೂಲ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ನಿಯೋಗ ಹರಿದ್ವಾರ ಮತ್ತು ವಾರಣಾಸಿಗೆ ಸೆ. ನಾಳೆ ಬೆಳಿಗ್ಗೆ 20 ಹಾಗೂ ಸೆ.21ರಂದು ಎರಡು ದಿನಗಳ ಅಧ್ಯಯನ ಪ್ರವಾಸ ಕೈಗೊಳ್ಳಲಿದೆ.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಲಿ ಎಂಬ ಆಶಯಕ್ಕಾಗಿ ರಾಜ್ಯದ ಇತಿಹಾಸದಲ್ಲೇ ಪ್ರಥಮಬಾರಿಗೆ ಕಾವೇರಿ ನದಿಗೆ ಗಂಗಾ ಆರತಿ ಮಾದರಿ ಕಾವೇರಿ ಆರತಿ ಮಾಡುವ ಕಾರ್ಯಕ್ರಮ ಆಯೋಜಿಸುವುದಾಗಿ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಘೋಷಣೆ ಮಾಡಿದ್ದರು.

ಹರಿದ್ವಾರ ಮತ್ತು ಮತ್ತು ವಾರಣಾಸಿಯಲ್ಲಿ ಗಂಗಾ ನದಿಗೆ ಆರತಿ ಮಾಡುವದನ್ನು ವೀಕ್ಷಿಸಿ ಸಮಗ್ರವಾಗಿ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಲು ಸಚಿವ ಚಲುವರಾಯಸ್ವಾಮಿ ಅವರ ಆಧ್ಯಕ್ಷತೆಯಲ್ಲಿ ಶಾಸಕರು, ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿತ್ತು. ಇದೀಗ ಸಮಿತಿ ಸದಸ್ಯರು ಅಧ್ಯಯನ ಪ್ರವಾಸಕ್ಕೆ ತೆರಳಿದ್ದಾರೆ.

ಇದನ್ನೂ ಓದಿ; ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಎರಡು ದಿನಗಳ ಪ್ರವಾಸ: ಕೃಷಿ ಸಚಿವರ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಶಾಸಕರುಗಳಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್, ಕೆ.ಎಂ.ಉದಯ್, ದಿನೇಶ್ ಗೂಳಿಗೌಡ, ಮಾಗಡಿ ಬಾಲ ಕೃಷ್ಣ , ಮೈಸೂರು ಹರೀಶ್ ಗೌಡ,ನಂಜನಗೂಡು ದರ್ಶನ್ ಧೃವನಾರಾಯಣ್,ಅರಸೀಕೆರೆ ಶಿವಲಿಂಗೇಗೌಡ, ಕೊಳ್ಳೇಗಾಲ ಕೃಷ್ಣಮೂರ್ತಿ, ವಿಧಾನಪರಿಷತ್ ಮಾಜಿ ಸದಸ್ಯರಾದ ಅಪ್ಪಾಜಿಗೌಡ,  ಮಂಡ್ಯ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಮಾಜಿ ಶಾಸಕರಾದ ರಾಜು, ಹಾಗೂ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್, ಜಲಸಂಪನ್ಮೂಲ ಸಚಿವರ ಸಲಹೆಗಾರರಾದ ಜಯಪ್ರಕಾಶ್ ಸೇರಿದಂತೆ ಹಲವರು ಸದಸ್ಯರನ್ನೊಳಗೊಂಡ ನಿಯೋಗ ಪ್ರವಾಸ ಕೈಗೊಂಡಿದೆ.

ನಿಯೋಗವು ಸೆ.20ರ ಶುಕ್ರವಾರ ರಾತ್ರಿ ಹರಿದ್ವಾರದಲ್ಲಿ ಗಂಗಾ ನದಿಗೆ ಆರತಿ ಮಾಡುವುದನ್ನು ವೀಕ್ಷಣೆ ಮಾಡಲಿದೆ. ಸೆ.21ರ ಶನಿವಾರದಂದು ವಾರಣಾಸಿಗೆ ತೆರಳಿ ಗಂಗಾ ಆರತಿಗೆ ಅತ್ಯಂತ ಪ್ರಸಿದ್ಧ ಹಾಗೂ ಪವಿತ್ರ ಘಾಟ್ ಆದ ದಶಾಸ್ವಮೇಧ ಘಾಟ್ ನಲ್ಲಿ ಗಂಗಾ ಆರತಿಯನ್ನು ವೀಕ್ಷಣೆ ಮಾಡಲಿದೆ. ಸೆ. 22ರ ಭಾನುವಾರ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವುದರ ಜೊತೆಗೆ ಘಾಟ್ ನಲ್ಲಿ ಸಂಚರಿಸಿ, ಅಲ್ಲಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯಕ್ಕೆ ವಾಪಸಾಗಲಿದೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!