ನಾಗಮಂಗಲದಲ್ಲಿ ಶಾಂತಿ ನೆಲೆಸುತ್ತದೆ, ಮತ್ತೆ ಯಾರನ್ನೂ ಬಂಧಿಸಬೇಡಿ: ಪೊಲೀಸರಿಗೆ HD ಕುಮಾರಸ್ವಾಮಿ ನಿರ್ದೇಶನ

ನಾಗಮಂಗಲ, (ಸೆ.20): ಗಲಭೆಪೀಡಿತ ನಾಗಮಂಗಲದಲ್ಲಿ ಶಾಂತಿ ನೆಲೆಸುತ್ತದೆ. ಸಹಜ ವಾತಾವರಣ ಮರು ಸ್ಥಾಪನೆ ಆಗುತ್ತಿದೆ. ಹೀಗಾಗಿ ಯಾರನ್ನೂ ಬಂಧಿಸುವ ಕೆಲಸ ಮಾಡಬಾರದು ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

ಗುರುವಾರ ಸಂಜೆ ನಾಗಮಂಗಲದ ಬಿದಿರು ಕೊಪ್ಪಲುಗೆ ಭೇಟಿ ನೀಡಿದ ಸಚಿವರು; ಗಣೇಶ ಮೂರ್ತಿ ಗಲಾಟೆ ಹಿನ್ನೆಯಲ್ಲಿ ತಮ್ಮ ಮಕ್ಕಳ ಬಗ್ಗೆ ಆತಂಕಗೊಂಡಿರುವ ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಐಜಿಪಿ ಡಾ.ಎಂ.ಬಿ.ಬೋರಲಿಂಗಯ್ಯ ಅವರೊಂದಿಗೆ ಸ್ಥಳದಿಂದಲೇ ದೂರವಾಣಿಯಲ್ಲಿ ಮಾತನಾಡಿದ ಸಚಿವರು, ಪಟ್ಟಣದಲ್ಲಿ ಮೊದಲಿನ ವಾತಾವರಣವೇ ನೆಲೆಸಿದೆ. ಶಾಂತಿ ಸ್ಥಾಪನೆ ಆಗುತ್ತಿದೆ. ಇಂಥ ಸಂದರ್ಭದಲ್ಲಿ ಯಾರನ್ನಾದರೂ ಬಂಧಿಸುವ ಕೆಲಸ ಆದರೆ ಮತ್ತೆ ಅಶಾಂತಿ ಉಂಟಾಗುವ ಅಪಾಯವಿದೆ. ಆದ್ದರಿಂದ ಸೂಕ್ಷ್ಮವಾಗಿ ವರ್ತಿಸಿ ಹಾಗೂ ಯಾರನ್ನೂ ಬಂಧಿಸಬೇಡಿ ಎಂದು ಸಚಿವರು ಸೂಚಿಸಿದರು.

ಅಲ್ಲದೆ; ಯಾವುದೇ ತಪ್ಪು ಮಾಡದೇ ಜೈಲು ಪಾಲಾಗಿರುವ ಅಮಾಯಕರನ್ನು ಬಿಡುಗಡೆ ಮಾಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಅಧೈರ್ಯಪಡಬೇಡಿ. ನಿಮ್ಮ ಜೊತೆ ನಾವಿದ್ದೇವೆ ಎಂದು ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಎಲ್ಲರೂ ಶಾಂತಿಯಿಂದ ವರ್ತಿಸಬೇಕು. ವೈಷಮ್ಯ ಯಾರಿಗೂ ಒಳ್ಳೆಯದಲ್ಲ. ಜೈಲಿನ ಮುಂದೆ ಈ ಗ್ರಾಮದ ಹೆಣ್ಣು ಮಕ್ಕಳು ಕಣ್ಣೀರು ಹಾಕುತ್ತಿವುದನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅದಕ್ಕೆ ಮತ್ತೆ ಇಲ್ಲಿಗೆ ಬಂದಿದ್ದೇನೆ. ಅಲ್ಲದೆ; ನಿಂದಾ ತಂದೆ ತಾಯಿಗೆ ಆರ್ಥಿಕ ಸಹಾಯ ಮಾಡಲು ಬಂದಿದ್ದೇನೆ ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಸಚಿವರು ಸುಮಾರು ಹದಿನೇಳಕ್ಕೂ ಹೆಚ್ಚು ಗ್ರಾಮಸ್ಥರಿಗೆ ಹಣಕಾಸು ನೆರವು ನೀಡಿದರು.

ಗುಪ್ತದಳ ವೈಫಲ್ಯ: ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ. ಆ ಎಫ್ಐಆರ್ ನೋಡಿದರೆ ಗೊತ್ತಾಗುತ್ತದೆ ಗುಪ್ತದಳದ ವೈಫಲ್ಯ ಆಗಿದೆ ಎಂದು. ಗಲಭೆ ಮಾಡಲು ಪೋಸ್ಟ್ ಮಾಡಿದ್ದಾರೆ ಅಂತಾರೆ,
ಇವರ ಎಫ್‌ಐಆರ್ ನೋಡಿದರೆ ನಗು ಬರುತ್ತದೆ.

ಗೃಹ ಸಚಿವರು ಎಚ್ಚರಿಕೆ ವಹಿಸಿದ್ದಿದ್ದರೆ ಹೀಗೆ ಆಗುತ್ತಿರಲಿಲ್ಲ. ನನಗೆ ರಾಜಕೀಯಕ್ಕಿಂತ ಜನರ ನೆಮ್ಮದಿ‌ ಮುಖ್ಯ. ಮುಗ್ಧ ಜನರನ್ನು ಪೊಲೀಸರು ಬಂಧಿಸುವುದು ಬೇಡ. ಊರು ಬಿಟ್ಟವರಿಗೆ ತೊಂದರೆ ಕೊಡಬೇಡಿ. ಈ ಘಟನೆಯನ್ನು ರಾಜಕೀಯವಾಗಿ ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು. ನಾನು ಅನುಕಂಪ ಗಿಟ್ಟಿಸಿಕೊಳ್ಳೋಕೆ ಬಂದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು ಸಚಿವರು.

ನೊಂದವರಿಗೆ ಆರ್ಥಿಕ ಸಹಾಯ ಮಾಡಬೇಕೆಂದು ಬಂದಿದ್ದೇನೆ. ಇದರ ಬಗ್ಗೆ ಕೆಲವರು ಕೇವಲವಾಗಿ ಮಾತಾಡುತ್ತಿದ್ದಾರೆ. ನಾನು 20, 30 ವರ್ಷಗಳಿಂದ ಕಷ್ಟದಲ್ಲಿ ಇರುವವರಿಗೆ ನೆರವಾಗುತ್ತಾ ಬಂದಿದ್ದೇನೆ. ನೀವು ಬೇಕಿದ್ದರೆ ಸಹಾಯ ಮಾಡಿ. ದ್ವೇಷ ರಾಜಕೀಯ ಮಾಡೋದು ಬೇಡಾ. ಜೈಲಿಗೆ ಹೋಗಿರುವವರನ್ನು ಕಾನೂನಿನ ವ್ಯಾಪ್ತಿಯಲ್ಲಿ ಜಾಮೀನು ಕೊಡಿಸೋಕು ಮುಂದಾಗುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಚಲುವರಾಯಸ್ವಾಮಿಗೆ ತಿರುಗೇಟು: ಸಂಸದರ ಕೆಲಸ ಏನು? ಎಂದು ಸಚಿವ ಚಲುವರಾಯಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಸಂಸದರು ಆರಾಮವಾಗಿ ದೆಹಲಿಯಲ್ಲಿ‌ ಇರಬೇಕಾ? ನಾನು ಈ ಕ್ಷೇತ್ರದ ಸಂಸದ. ಜನರು ಕಷ್ಟದಲ್ಲಿ ಇದ್ದಾಗ ನಾನು ಬರಲೇಬೇಕು. ನಾನು ಮಂಡ್ಯದ ಸಂಸದ. ಸಚಿವನೂ ಹೌದು. ಮಂಡ್ಯದಲ್ಲಿ ಮಾತ್ರ ಪ್ರವಾಸ ಮಾಡಿಲ್ಲ, ಇಡೀ ದೇಶವನ್ನೇ ಸುತ್ತುತ್ತಿದ್ದೇನೆ ಎಂದು ತಿರುಗೇಟು ಕೊಟ್ಟರು.

ನಾನು ರಾಜಕೀಯ ಮಾಡಲು ಬಂದಿಲ್ಲ. ನಾನು ಯಾವ ಕುಮ್ಮಕ್ಕು ಕೊಡಲು ಬಂದಿಲ್ಲ. ಗಲಾಟೆಗೆ ಕುಮ್ಮಕ್ಕು ಕೊಟ್ಟಿದ್ದು ಯಾರು? ಜೆಡಿಎಸ್ ನವರು ಬೆಂಕಿ‌ ಹಚ್ಚಿ ಎಂದು ಹೇಳಿದರಾ? ಪೊಲೀಸರನ್ನು ಯಾರು ಕಳಿಸಿದ್ದು? ಪೊಲೀಸರು ಇದ್ದಿದ್ದರೆ ಈ ಘಟನೆ ಆಗುತ್ತಿರಲಿಲ್ಲ. ನಾನು ಎರಡು ಸಮುದಾಯದ ಜನರಿಗೆ ಆರ್ಥಿಕ ಪರಿಹಾರ ನೀಡಿದ್ದೇನೆ. ನಾನು ಬೆಂಕಿ ಹಚ್ಚಲು‌ ಬಂದಿಲ್ಲ, ರಾಜಕೀಯ ಮಾಡಲು ಬಂದಿಲ್ಲ. ಇದನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವರು ಹೇಳಿದರು.

ಮಾಜಿ ಸಚಿವರಾದ ಸಾ.ರಾ.ಮಹೇಶ್, ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ, ಶಾಸಕ ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಮಂಜೆಗೌಡ ಮೊದಲಾದವರು ಸಚಿವರ ಜತೆಯಲ್ಲಿ ಇದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!