ರಾಜ್ಯದಲ್ಲಿ ಅರವತ್ತು ಸಾವಿರ ಗಣೇಶ ಪ್ರತಿಷ್ಠಾಪನೆ; ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, (ಸೆಪ್ಟೆಂಬರ್ 20): ಹೆಸರಾಂತ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಶಾಸಕ ಮುನಿರತ್ನ ಅವರ ಮೇಲೆ ಮೇಲಿನ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು ತಮ್ಮನ್ನು ಭೇಟಿ ಮಾಡಿದ ಒಕ್ಕಲಿಗ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ ಎಂದರು.
ಕಾನ್ ಸ್ಟಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಬಗ್ಗೆ ಮಾತನಾಡಿ ಈ ಕುರಿತು ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದರು.

ಅರವತ್ತು ಸಾವಿರ ಗಣೇಶ ಪ್ರತಿಷ್ಠಾಪನೆ: ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಲ್ಲು ತೂರಾಟ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಬಾರಿ ಅರವತ್ತು ಸಾವಿರ ಗಣೇಶಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ ಎಂದರು.

ಕೋಮು ಗಲಭೆಗೆ ಬಿಜೆಪಿ ಪ್ರಚೋದನೆ: ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಇದಕ್ಕೆ ಬಿಜೆಪಿ ಕಾರಣ ಎಂದು ಮುಖ್ಯಮಂತ್ರಿಗಳು ಆರೋಪಿಸಿದರು.

ಡಿನೋಟಿಫೈ ಪ್ರಕರಣಕ್ಕೆ ಲೋಕಾಯುಕ್ತ ತನಿಖೆ ಬಗ್ಗೆ ಪರಿಶೀಲನೆ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪರವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ 2021 ರಿಂದ ಲೋಕಾಯುಕ್ತದವರು ತನಿಖೆ ನಡೆಸದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆಬಾಳುವಂಥದ್ದಾಗಿದ್ದು, ಕುಮಾರಸ್ವಾಮಿಯವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ , ಜಿಪಿಓ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲವೆಂದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು ಎಂದರು.

ಸರ್ಕಾರ ಯಾರ ಮೇಲೂ ಆರೋಪ ಮಾಡುವುದಿಲ್ಲ: ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆಯೇ ಎಂಬ ಮಾಧ್ಯಮದವರ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಿ, ನಾವು ಯಾರ ಮೇಲೆಯೂ ಆರೋಪ ಹೊರಿಸುವ ಕೆಲಸವನ್ನು ಮಾಡಿಲ್ಲ.

ಕುಮಾರಸ್ವಾಮಿಯವರು ಎಂದಿಗೂ ಹಿಟ್ ಎಂಡ್ ರನ್ ಮಾಡುವವರಾಗಿದ್ದು, ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಷಯದ ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕು ಎಂದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!