ಬೆಂಗಳೂರು, (ಸೆ.12); ಸರ್ಕಾರಿ ಮತ್ತು ಖಾಸಗಿ ವಲಯದ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕವಾಗಿ 6 ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ನೀಡಲು ನೀತಿ ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಡಾ.ಸಪ್ನಾ ಮುಖರ್ಜಿ ನೇತೃತ್ವದಲ್ಲಿ ವರದಿ ಸಿದ್ಧಪಡಿಸಲು ರಚಿಸಲಾಗಿದ್ದ ತಂಡವು, ಇದೀಗ ವರದಿಯನ್ನು ಸಲ್ಲಿಸಿದೆ.
ಈ ಬಗ್ಗೆ ಸಂಬಂಧ ಪಟ್ಟ ಎಲ್ಲ ಇಲಾಖೆಗಳೊಂದಿಗೂ ಚರ್ಚೆ ನಡೆಯುತ್ತಿದೆ. ಮುಟ್ಟಿನ ರಜೆ ಸಾಧ್ಯಾಸಾಧ್ಯತೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿಯ ಆಧಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವರದಿಯಾಗಿದೆ.
ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಕ್ಸಿನ್ ಈ ಬಗ್ಗೆ ಮಾತನಾಡಿ, ಆರಂಭದಲ್ಲಿ ಖಾಸಗಿ ವಲಯಕ್ಕೆ ಮುಟ್ಟಿನ ರಜೆ ನೀತಿ ಪರಿಚಯಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಇದನ್ನು ಓದಿ: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು; ಸಿಎಂ ನಾಯ್ಡು ಹೇಳಿದ್ ಏನು ನೋಡಿ
ಪೂರ್ಣ ಪ್ರಮಾಣದಲ್ಲಿ ನೀತಿ ರೂಪಿಸಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಮುಟ್ಟಿನ ರಜೆ ವಿಚಾರವಾಗಿ ಒಂದು ನೀತಿಯನ್ನು ಹೊಂದುವ ಅಗತ್ಯತೆಯ ಬಗ್ಗೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಅನುಗುಣವಾಗಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದಿದ್ದಾರೆಂದು ವರದಿಯಾಗಿದೆ.