ಆಂಬುಲೆನ್ಸ್ ದೊರೆಯದೆ ಬೈಕ್ ಮೇಲೆ ತಂದೆಯ ಶವ ಸಾಗಾಟ; ಆರೋಗ್ಯಾಧಿಕಾರಿಗೆ ಸಿಎಂ ಕಚೇರಿಯಿಂದ ನೋಟಿಸ್

ಪಾವಗಡ, (ಸೆ.21): ತಂದೆಯ ಸಾವಿನ ನೋವು ಒಂದು ಕಡೆಯಾದರೆ, ಕೊನೆಯ ಕ್ಷಣದಲ್ಲಿ ಗೌರವಯುತವಾಗಿ ಬೀಳ್ಕೊಡಲು ಆಗುತ್ತಿಲ್ಲ ಎಂಬ ಕೊರಗಿನಿಂದಲೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸದ ದೃಶ್ಯ ಮನ ಕಲಕುವಂತಿತ್ತು.

ಹೌದು ಸೂಕ್ತ ಸಮಯದಲ್ಲಿ ಆಂಬುಲೆನ್ಸ್ ದೊರೆಯದೆ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್​ನಲ್ಲೇ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ನಡೆದಿದೆ.

ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವ್ಯಕ್ತಿ ಅಸ್ವಸ್ಥಗೊಂಡಿದ್ದರು.
ಕೂಡಲೇ ಮಕ್ಕಳು, ಹೊನ್ನೊರಪ್ಪನವರನ್ನ 108 ಆಂಬ್ಯುಲೆನ್ಸ್ ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಅಷ್ಟರಾಗಲೇ ಹೊನ್ನೂರಪ್ಪನ ಜೀವ ಹೋಗಿದೆ. ಬಳಿಕ ಮೃತ ಶರೀರವನ್ನು ಮನೆಗೆ ಸಾಗಿಸಲು 108 ಆಂಬ್ಯುಲೆನ್ಸ್ ಸಿಬ್ಬಂದಿ ನಿರಾಕಿಸಿದ್ದಾರೆ. ಮೃತದೇಹವನ್ನು ಆಂಬ್ಯುಲೆನ್ಸ್​​ನಲ್ಲಿ ಸಾಗಿಸುವಂತಿಲ್ಲ ಎಂದಿದ್ದಾರೆ.

ಕೈಯಲ್ಲಿ ಹಣವಿಲ್ಲದೇ ಕೊನೆಗೆ ಹೊನ್ನೂರಪ್ಪ ಮಕ್ಕಳಾದ ಗೋಪಾಲಪ್ಪ ತಮ್ಮ ತಂದೆಯ ಮೃತದೇಹವನ್ನು ಭುಜದ ಮೇಲೆ ಹೊತ್ತು ಕಣ್ಣೀರು ಸುರಿಸುತ್ತ ಆಸ್ಪತ್ರೆಯಿಂದ ಹೊರ ಬಂದರು.
ವಿಧಿಯಿಲ್ಲದೆ ತಂದೆ ಶವವನ್ನು ಬೈಕ್ ನಲ್ಲೇ ತೆಗೆದುಕೊಂಡು ಮನೆಗೆ ಹೋಗಿದ್ದಾರೆ.

ನೋಟೀಸ್: ಈ ವಿಚಾರವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದವು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಅದರಂತೆ ಸದರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದ್ದು, ವೈದ್ಯರು ಈ ಬಗ್ಗೆ ವರದಿ ನೀಡಿದ್ದಾರೆ. ರೋಗಿಯ ಸಂಬಂಧಿಕರು ಮೃತ ದೇಹವನ್ನು ಸಾಗಿಸಲು ತುರ್ತು ವಾಹನದ ವ್ಯವಸ್ಥೆ ಮಾಡಲು ಕೋರಿದ್ದರು. ಆಂಬುಲೆನ್ಸ್‌ ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಸಾಗಿಸಲು ಮಾತ್ರ ಸರ್ಕಾರದ ಆದೇಶವಾಗಿದ್ದು, ಮೃತಪಟ್ಟ ವ್ಯಕ್ತಿಯನ್ನು ಸಾಗಿಸಲು ಅನುಮತಿ ಇರುವುದಿಲ್ಲ.

ಹಾಗಾಗಿ ಪಾವಗಡ ತಾಲೂಕಿನಿಂದ ವಾಹನದ ವ್ಯವಸ್ಥೆ ಮಾಡಲಾಗಿತ್ತು. ಅಷ್ಟರಾಗಲೇ ವೈದ್ಯಾಧಿಕಾರಿಗಳ ಗಮನಕ್ಕೆ ಬಾರದೇ ಮೃತ ದೇಹವನ್ನು ಸ್ವ ಇಚ್ಛೆಯಿಂದ ಅವರ ಕುಟುಂಬಸ್ಥರು ತೆಗೆದುಕೊಂಡು ಹೋಗಿರುತ್ತಾರೆ ಎಂದು ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]