ಮುಡಾ ಕೇಸ್‌ಗೂ, ಗಂಗೇನಹಳ್ಳಿ ಕೇಸ್‌ಗೂ ಸಂಬಂಧವೇ ಇಲ್ಲ: ನಿಖಿಲ್ ಕಿಡಿ

ಬೆಂಗಳೂರು, (ಸೆ.21): ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು ವೈಯಕ್ತಿಕವಾಗಿ ಟಾರ್ಗೆಟ್ ಮಾಡ್ತಿದೆ, ಎಂದು ನಿಖಿಲ್ ಕುಮಾರಸ್ವಾಮಿ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಬೆಂಗಳೂರು ಜೆಡಿಎಸ್ ರಾಜ್ಯ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಮಂತ್ರಿ ಆದ ಮೇಲೆ ಕಾಂಗ್ರೆಸ್ ನಾಯಕರು ಟಾರ್ಗೆಟ್ ಮಾಡೋದಾದ್ರೆ, ಕುಮಾರಸ್ವಾಮಿ ಅವರನ್ನ ಮಾಡೋಣ ಅಂತ ಮಾಡ್ತಿದ್ದಾರೆ. ಕಾಂಗ್ರೆಸ್ ನವರಿಗೆ ಕುಮಾರಸ್ವಾಮಿ ಅವರ ಬಗ್ಗೆ ಭಯ ಇದೆ ಎಂದು ವಾಗ್ದಾಳಿ ನಡೆಸಿದರು.

ಇದು ಟಾರ್ಗೆಟ್ ರಾಜಕಾರಣ: ಕುಮಾರಸ್ವಾಮಿ ಅವರು ವಾಸ್ತವ ಮಾತಾಡ್ತಾರೆ. ಎಲ್ಲವನ್ನು ಜನರ ಮುಂದೆ ತೆರೆದಿಡುತ್ತಾರೆ. ಇದರಿಂದ ಪಾಪ ಅವರಿಗೆ ಭಯ ಶುರುವಾಗಿದೆ‌.. ಹೀಗಾಗಿ ಕುಮಾರಸ್ವಾಮಿ ಅವರ ಮೇಲೆ ನಿತ್ಯ ದಾಖಲಾತಿ ಹುಡುಕುತ್ತಿದ್ದಾರೆ. ದಾಖಲಾತಿ ರೆಡಿ ಮಾಡಿ ಅಂತ ಸಿಎಂ, ಡಿಸಿಎಂ, ಸಚಿವ ಸಂಪುಟ ಕುಮಾರಸ್ವಾಮಿ ತೇಜೋವಧೆ ಮಾಡಬೇಕು ಪ್ರಯತ್ನ ಮಾಡ್ತಿದೆ ಎಂದು ಕಿಡಿಕಾರಿದರು.

ಮುಡಾ ಕೇಸ್, ಗಂಗೇನಹಳ್ಳಿ ಕೇಸ್ ಗೂ ಸಂಬಂಧವೇ ಇಲ್ಲ: ಕುಮಾರಸ್ವಾಮಿ ಅವರನ್ನ ತಪ್ಪಿತಸ್ಥರಾಗಿ ಮಾಡಬೇಕು ಅಂತ ಕಾಂಗ್ರೆಸ್ ಸರ್ಕಾರ ಹೊರಟಿದೆ.. ಡಿನೋಟಿಫಿಕೇಶನ್ ವಿಚಾರ ವಾಗಿ ಕುಮಾರಸ್ವಾಮಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ b2015 ರಲ್ಲಿ ಈ ಪ್ರಕರಣ ಆಗಿದೆ. ಇದಕ್ಕೂ ಕುಮಾರಸ್ವಾಮಿ ಅವರಿಗೂ ಸಂಬಂಧವಿಲ್ಲ,ಮುಡಾ ಕೇಸ್ ಗೂ, ಗಂಗೇನಹಳ್ಳಿ ಕೇಸ್ ಗೂ ಸಂಬಂಧವೇ ಇಲ್ಲ. ಸುಮ್ಮನೆ ಅವರ ತಪ್ಪು ಮುಚ್ಚಿಕೊಳ್ಳಲು ತಿರುಚೋ ಕೆಲಸ ಆಗ್ತಿದೆ.

ಡಿನೋಟಿಫಿಕೇಶನ್ ಆಗಿರೋದು ಯಡಿಯೂರಪ್ಪ ಅವರ ಕಾಲದಲ್ಲಿ. ಇದಕ್ಕೂ ಕುಮಾರಸ್ವಾಮಿ ಅವರಿಗೆ ಏನ್ ಸಂಬಂಧ..? ಕುಮಾರಸ್ವಾಮಿ ಅವರ ಕಾಲದಲ್ಲಿ ಫೈಲ್ ರಿಜೆಕ್ಟ್ ಮಾಡಿದ್ರು. ಅವರು ಸಹಿ ಹಾಕಿದ್ರಾ? ಅವರು ಡಿನೋಟಿಫಿಕೇಶನ್ ಮಾಡಿದ್ರಾ..? ಎಂದು ಕಿಡಿಕಾರಿದರು.

ರಾಜಕೀಯವಾಗಿ ಜೆಡಿಎಸ್ ಪಕ್ಷ ಬಿಜೆಪಿ, ಕಾಂಗ್ರೆಸ್ ವಿರುದ್ದ ಹೋರಾಟ ಮಾಡಿಕೊಂಡು ಬರುತ್ತಿದೆ ಇಷ್ಟು ವರ್ಷಗಳಿಂದ.‌ ಲೋಕಸಭೆ ಚುನಾವಣೆಯಲ್ಲಿ ನಾವು ಒಂದಾಗಿರೋದು.. ಕುಮಾರಸ್ವಾಮಿ ಅವರು ಎಂದೂ ಕೂಡಾ ಅಡ್ಜೆಸ್ಟ್ ಮೆಂಟ್ ರಾಜಕೀಯ ಮಾಡಿಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಶಾಸಕ ಮುನಿರತ್ನ ಪ್ರಕರಣ ವಿಚಾರವಾಗಿ ಮಾತನಾಡಿದ ಅವರು ಮುನಿರತ್ನ ಕೇಸ್ ತನಿಖೆ ಆಗ್ತಿದೆ ತನಿಖೆ ನಡೆಯೋ ಸಮಯದಲ್ಲಿ ಮಾತಾಡೋದು ಸರಿಯಲ್ಲ ತನಿಖೆ ನಡೆದು ಸತ್ಯಾಸತ್ಯತೆ ಹೊರಗೆ ಬರಲಿ ಎಂದರು. ಮುನಿರತ್ನ ವಿಚಾರದಲ್ಲಿ FSL ವರದಿ ಬರಬೇಕು. ಅವರ ಧ್ವನಿಯೋ ಅಲ್ಲವೋ, ಅಂತ ಸತ್ಯ ಹೊರಗೆ ಬರಬೇಕು ಎಂದರು.

ಕಾನೂನಿಗಿಂತ ಯಾರು ದೊಡ್ಡವರು: ಕಾನೂನಿಗಿಂತ ಯಾರು ದೊಡ್ಡವರು ಅಲ್ಲ. ಈ ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು.. ಯಾದಗಿರಿ ಪಿಎಸ್ಐ ಪರಶುರಾಮ್ ಕೇಸ್ ಸರ್ಕಾರ ಹೇಗೆ ಮುಚ್ಚಿ ಹಾಕಲು ಪ್ರಯತ್ನ ಮಾಡಿತ್ತು ಅಂತ ಎಲ್ಲರಿಗೂ ಗೊತ್ತಿದೆ.. ವಾಲ್ಮೀಕಿ ಹಗರಣ ಕೇಸ್ ನಲ್ಲಿ ನಾಗೇಂದ್ರ ವಿಚಾರಕ್ಕೆ ಸಂಬಂಧಿಸಿದಂತೆ ಈ‌ ಸರ್ಕಾರ ಹೇಗೆ ತನಿಖೆ ಮಾಡಿತು ಅಂತ ಜಗತ್‌ ಜಾಹೀರಾಗಿದೆ.

ಟಾರ್ಗೆಟ್ ರಾಜಕೀಯ ಮಾಡ್ತಿದೆ: ಶಾಸಕ ಮುನಿರತ್ನ ಅವರನ್ನ ತರಾತುರಿಯಲ್ಲಿ ಬಂಧನ ಮಾಡಿದ್ದಾರೆ. ಇದನ್ನ ನೋಡಿದ್ರೆ ರಾಜ್ಯ ಸರ್ಕಾರ ಟಾರ್ಗೆಟ್ ರಾಜಕೀಯ ಮಾಡ್ತಿದೆ ಅಂತ ಅನ್ನಿಸುತ್ತಿದೆ.ಸರ್ಕಾರ ತಮ್ಮ ತಪ್ಪು ಮುಚ್ಚಿಕೊಳ್ಳಲು ಬೇರೆ ಅವರ ಮೇಲೆ ತಪ್ಪು ಹೊರಿಸೋ ಕೆಲಸ ಮಾಡ್ತಿರೋದು ಜಗತ್ ಜಾಹೀರಾಗಿದೆ.

ಸ್ವಾತಂತ್ರ್ಯ ಬಂದಾಗಿನಿಂದ ಅನೇಕ ಸರ್ಕಾರ ಕೆಲಸ ಮಾಡಿದೆ. ಆದರೆ ಈ ಸರ್ಕಾರ ಟಾರ್ಗೆಟ್ ರಾಜಕೀಯ ಮಾಡಿಕೊಂಡು, ದ್ವೇಷದ ರಾಜಕೀಯ ಮಾಡಿಕೊಂಡು ಹೊರಟಿದ್ದಾರೆ.ಇದನ್ನ ರಾಜ್ಯದ ಜನರು ಮೆಚ್ಚುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಜಾತಿ ಆಧಾರದಲ್ಲಿ ರಾಜಕೀಯ ಮಾಡ್ತಿದೆ; ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಾಗಿನಿಂದ ಜಾತಿ ಆಧಾರದಲ್ಲಿ ರಾಜಕೀಯ ಮಾಡೋ ಪ್ರಯತ್ನ ಮಾಡ್ತಿದೆ. ಇಲ್ಲಿ ಒಕ್ಕಲಿಗ ಟ್ಯಾಗ್, ಓಬಿಸಿ ಟ್ಯಾಗ್, ಲಿಂಗಾಯತರ ಟ್ಯಾಗ್, ಮುಸ್ಲಿಂ ಟ್ಯಾಗ್ ಹಾಕಿ ರಾಜಕೀಯ ಮಾಡೋದು‌ ಸೂಕ್ತ ಅಲ್ಲ, ಯಾವುದೋ ಸಮುದಾಯ ಒಲೈಕೆ ಮಾಡಿಕೊಳ್ಳಲು ಈ ರೀತಿ ಟಾರ್ಗೆಟ್ ರಾಜಕೀಯ ಮಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಬಂದು ಒಂದೂವರೆ ಆಗಿದೆ.ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ಆಡಳಿತ ವಿರೋಧಿ ಅಲೆ ಶುರುವಾಗಿದೆ‌ ಎಂದು ಕಿಡಿಕಾರಿದರು.ನಾಳೆ ಚುನಾವಣೆ ನಡೆದರು, ಕಾಂಗ್ರೆಸ್ ಸರ್ಕಾರವನ್ನ ರಾಜ್ಯದ ಜನ ತಿರಸ್ಕಾರ ಮಾಡ್ತಾರೆ.

ಅ ಮಟ್ಟದ ವಾತಾವರಣ ಸರ್ಕಾರದ ವಿರುದ್ದ ಇದೆ. ಅವರ ತಪ್ಪು ಮುಚ್ಚಿಕೊಳ್ಳಲು ನಿತ್ಯ ಹಗರಣಗಳು, ಅಕ್ರಮಗಳು ನಡೆಯುತ್ತಿವೆ..ನಾವು ವಿರೋಧ ಪಕ್ಷವಾಗಿ ಪ್ರಜಾಪ್ರಭುತ್ವದಲ್ಲಿ ನಮಗೆ ಹಕ್ಕು ಕೊಟ್ಟಿದ್ದಾರೆ‌..ಅದನ್ನ ಬಯಲಿಗೆ ಎಳೆಯೋದೇ ತಪ್ಪಾ..? ಎಂದು ಪ್ರಶ್ನಿಸಿದರು.

ಚನ್ನಪಟ್ಟಣದಲ್ಲಿ NDA ಅಭ್ಯರ್ಥಿ; ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರು ಎಂಬ ವಿಚಾರಕ್ಕೆ ಮಾತನಾಡಿದ ಅವರು; ಟಿಕೆಟ್ ಬಗ್ಗೆ ಸಾಕಷ್ಟು ಚರ್ಚೆ ಆಗಿದೆ. ಬಿಜೆಪಿ-ಜೆಡಿಎಸ್ ನಾಯಕರು ದೆಹಲಿಯಲ್ಲಿ ಮಾತಾಡಿದ್ದಾರೆ‌. ಇನ್ನು ಚುನಾವಣೆ ಘೋಷಣೆ ಆಗಿಲ್ಲ. ಉಪ ಚುನಾವಣೆ ದಿನಾಂಕ ಘೋಷಣೆ ಆಗಲಿ..NDA ಅಭ್ಯರ್ಥಿ ಚನ್ನಪಟ್ಟಣದ ಕ್ಷೇತ್ರದಲ್ಲಿ ಅಭ್ಯರ್ಥಿ ಆಗ್ತಾರೆ ಎಂದು ತಿಳಿಸಿದರು.

ಸಿಪಿ ಯೋಗೇಶ್ವರ್ ಅವರು ಕೂಡಾ ಹೇಳಿದ್ದಾರೆ. ಅವರ ಬೆಂಬಲಿಗರ ಜೊತೆ ಸಭೆ ಮಾಡಿ NDA ಅಭ್ಯರ್ಥಿಗೆ ಶಕ್ತಿ ತುಂಬಬೇಕು ಅಂತ ಅವರು ಕೆಲಸ ಮಾಡ್ತಿದ್ದಾರೆ.ನಾವು ನಮ್ಮ ಕೆಲಸ ಮಾಡ್ತಿದ್ದೇವೆ ಎಂದು ತಿಳಿಸಿದರು.

ಅತಿ ಶೀಘ್ರದಲ್ಲೇ ಗುಡ್ ನ್ಯೂಸ್; ಚನ್ನಪಟ್ಟಣದಲ್ಲಿ ಜೆಡಿಎಸ್ ನಗರಸಭೆ ಸದಸ್ಯರು ಕಾಂಗ್ರೆಸ್ ಗೆ ಸೇರ್ಪಡೆ ಆಗಿರೋ ವಿಚಾರಕ್ಕೆ ಮಾತನಾಡಿದ ಅವರು, ನಿನ್ನೆ (ಶುಕ್ರವಾರ) ನಾನು ನಗರಪಾಲಿಕೆ ಸದಸ್ಯರ ಜೊತೆ ಮಾತುಕತೆ ಮಾಡಿದ್ದೇನೆ. ಸಾಕಷ್ಟು ಜನ ನನ್ನ ಜೊತೆ ಸಂಪರ್ಕದಲ್ಲಿ ಇದ್ದಾರೆ.

ಲೋಕಸಭೆ ‌ಚುನಾವಣೆಯಲ್ಲಿ ಕಾಂಗ್ರೆಸ್ ಅವರು ಆಮಿಷ ಒಡ್ಡಿ ಅವರನ್ನ‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಇವೆಲ್ಲವನ್ನು ಸರಿ ಮಾಡೋಕೆ‌ ನಿನ್ನೆ ತೋಟದ ಮನೆಯಲ್ಲಿ ಸಭೆ ಮಾಡಿದ್ದೇನೆ ಅತಿ ಶೀಘ್ರದಲ್ಲೇ ಕೆಲವು ಗುಡ್ ನ್ಯೂಸ್ ಕೊಡ್ತೀನಿ. ತಲೆ ಕೆಡಿಸಿಕೊಳ್ಳಬೇಡಿ ಎಂದರು

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!