ಮುನಿರತ್ನ ಪ್ರಕರಣ: ಬಿಜೆಪಿಯವರ ಸಮರ್ಥನೆ ನಮ್ಮ ರಾಜ್ಯದ ಜನತೆಗೆ ಅರ್ಥವಾಗಬೇಕು – ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, (ಸೆ. 21): ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯ ಗುಣಮಟ್ಟ ವೀಕ್ಷಣೆ ಮಾಡಲು ರಾತ್ರಿ ಸಂಚಾರ ನಡೆಸುತ್ತೇನೆ. ಎರಡು ಮೂರು ದಿನಗಳಲ್ಲಿ ದಿನಾಂಕ ತಿಳಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಎಷ್ಟು ರಸ್ತೆಗುಂಡಿಗಳಿವೆ ಎಂಬುದರ ಬಗ್ಗೆ ನನ್ನ ಬಳಿ ಲೆಕ್ಕವಿದೆ. ಅಭಿಯಾನದ ರೀತಿ ಕೆಲಸ ಮಾಡಿದ್ದೇವೆ. ಇದು ಸಾಧನೆಯಲ್ಲ ಜವಾಬ್ದಾರಿ. ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಆದೇಶ ಕೊಟ್ಟ ಮೇಲೆ ಅಧಿಕಾರಿಗಳು ಇಷ್ಟು ತ್ವರಿತವಾಗಿ ಕೆಲಸ ಮಾಡಿದ್ದನ್ನು ನಾನು ನೋಡಿರಲಿಲ್ಲ” ಎಂದು ಹೇಳಿದರು.

“ರಸ್ತೆಗುಂಡಿಗಳನ್ನು ಮುಚ್ಚಿಸುವ ವಿಚಾರದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಗಲು- ರಾತ್ರಿ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಮಧ್ಯೆ ಮಳೆ ಬಂದಿದೆ. ನೀವು (ಮಾಧ್ಯಮ)ಗಳು ಅಷ್ಟೋ, ಇಷ್ಟೊ ಕೆಲಸ ಮಾಡಿದ್ದಾರೆ ಎಂದು ವರದಿ ಮಾಡಿದ್ದೀರಿ. ನಾವು ಬದ್ಧತೆಯಿಂದ ನಾಗರೀಕರಿಗೆ ಅನುಕೂಲ ಮಾಡುವ ಕೆಲಸ ಮಾಡಿದ್ದೇವೆ” ಎಂದು ಹೇಳಿದರು.

ಬೇರೆ ರಾಜ್ಯಗಳಿಗೆ ಅವಮಾನ ಮಾಡಲು ಇಷ್ಟವಿಲ್ಲ: “ನಾನು ಬೇರೆ ರಾಜ್ಯಗಳಿಗೆಲ್ಲಾ ಭೇಟಿ ನೀಡಿದ್ದೇನೆ. ಅಲ್ಲಿನ ರಸ್ತೆಯ ವಿಡಿಯೋಗಳನ್ನು ಹಾಕಿದರೆ ಆ ರಾಜ್ಯಗಳಿಗೆ ಅವಮಾನವಾಗುತ್ತದೆ. ಅದಕ್ಕಿಂತ ಉತ್ತಮವಾಗಿ ನಮ್ಮವರು ಇಲ್ಲಿನ ರಸ್ತೆಗಳ ಪರಿವರ್ತನೆ ಮಾಡಬೇಕು ಎಂದು ಕೆಲಸ ಮಾಡಿದ್ದಾರೆ. ಅದರಲ್ಲಿ ನಾವು ಯಶಸ್ವಿಯಾಗುತ್ತಿದ್ದೇವೆ” ಎಂದರು.

ಆರ್. ಅಶೋಕ್ ಮೇಲಿನ ಸಂಚು ಕೇಳಿ ದಿಗ್ಬ್ರಮೆ: ಶಾಸಕ ಮುನಿರತ್ನ ಪ್ರಕರಣಗಳ ವಿಚಾರವಾಗಿ ಎಸ್ ಐಟಿ ರಚನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಅನೇಕರು ಒತ್ತಡ ಹಾಕುತ್ತಿದ್ದಾರೆ. ನೀವು ಇದರ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ “ನನಗೆ ಸಿಎಂ ಭೇಟಿ ಸಾಧ್ಯವಾಗಿಲ್ಲ. ಆದರೆ ಆರ್. ಅಶೋಕ್ ಮೇಲೆ ಮಾಡಿದ್ದ ಸಂಚು ಕೇಳಿ ದಿಗ್ಬ್ರಮೆಯಾಗಿದ್ದೇನೆ. ಈ ರೀತಿಯ ಸಂಚನ್ನು ನಾನು ಇಡೀ ಪ್ರಪಂಚದಲ್ಲಿಯೇ ಕೇಳಿಲ್ಲ” ಎಂದರು.

“ಮುನಿರತ್ನ ವಿಚಾರವಾಗಿ ಅಶೋಕ್ ಅವರು ಮೊದಲು ಮಾತನಾಡಿದ್ದನ್ನು ಕೇಳಿದ್ದೆ. ಈಗ ಮಾತನಾಡಿದ್ದನ್ನು ನಾನು ನೋಡಿಲ್ಲ. ಅಶೋಕಣ್ಣ, ಸಿ.ಟಿ. ರವಿಯಣ್ಣ, ವಿಜಯೇಂದ್ರಣ್ಣ ಅವರುಗಳು ಮಾತನಾಡಬೇಕು. ಈ ವಿಚಾರದಲ್ಲಿ ಸತ್ಯ ಏನಿದೆ ಎಂದು ತಮ್ಮ ಅಭಿಪ್ರಾಯಗಳನ್ನು ಹೇಳಬೇಕು. ಮುಖ್ಯವಾಗಿ ಕುಮಾರಣ್ಣ, ಡಾ.ಮಂಜುನಾಥ್ ಅವರು ಮಾತನಾಡಬೇಕು. ಯಾರು, ಯಾರಿಗೆ ಏನಾಗಿದೆ ಎಂದು ನಾನು ತಿಳಿದುಕೊಳ್ಳಲು ಆಗಿಲ್ಲ. ಜೆಟ್ ಲ್ಯಾಗ್ ಇರುವ ಕಾರಣಕ್ಕೆ ಮಾಧ್ಯಮಗಳನ್ನು ಸರಿಯಾಗಿ ಗಮನಿಸಲು ಆಗಿಲ್ಲ” ಎಂದರು.

ಡಿಕೆ ಸಹೋದರರ ನೇರ ಷಡ್ಯಂತ್ರ ಎಂದು ವಿಜಯೇಂದ್ರ, ಅಶ್ವಥ್ ನಾರಾಯಣ ಅವರ ಆರೋಪದ ಬಗ್ಗೆ ಕೇಳಿದಾಗ “ಅವರುಗಳು ನನ್ನ ನೆನೆಸಿ ಕೊಳ್ಳುತ್ತೀರಬೇಕು” ಎಂದರು.

ಇಷ್ಟೊಂದು ಆರೋಪಗಳು ಇದ್ದರೂ ಬಿಜೆಪಿ ನಾಯಕರು ಬೆಂಬಲ ನೀಡುತ್ತಿರುವ ಬಗ್ಗೆ ಕೇಳಿದಾಗ “ಬಿಜೆಪಿಯವರ ಸಮರ್ಥನೆ ನಮ್ಮ ರಾಜ್ಯದ ಜನತೆಗೆ ಅರ್ಥವಾಗಬೇಕು” ಎಂದು ಹೇಳಿದರು.

ಕುಮಾರಸ್ವಾಮಿ ಅವರ ಗಂಗೇನಹಳ್ಳಿ ಡಿನೋಟಿಫಿಕೇಟಿನ್ ಪ್ರಕರಣದ ದಾಖಲೆ ಬಿಡುಗಡೆ ಮಾಡಲಾಗಿದ್ದು, ಮುಂದಿನ ರಾಜಕೀಯ ಹೋರಾಟ ಹೇಗಿರಲಿದೆ ಎಂದು ಕೇಳಿದಾಗ “ಇದರ ಬಗ್ಗೆ ಸಂಪೂರ್ಣ ವಿಚಾರ ಗೊತ್ತಿಲ್ಲ. ತಿಳಿದುಕೊಂಡು ಮಾತನಾಡುತ್ತೇನೆ” ಎಂದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!