ಬೆಂಗಳೂರು: ಚಿತ್ರದುರ್ಗದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಅಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ( Darshan ) ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿರುವ ನ್ಯಾಯಾಲಯ ವಿಚಾರಣೆಯನ್ನು ಸೋಮವಾರಕ್ಕೆ (ಸೆ.30) ಮುಂದೂಡಿ ಆದೇಶಿಸಿದೆ.
ಸದ್ಯ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದು, ವಿಡಿಯೋ ಕಾನ್ಸರೆನ್ಸ್ ಮೂಲಕ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿರುವ ಕೋರ್ಟ್ ಈ ಆದೇಶ ನೀಡಿದೆ.
ಇನ್ನು ದರ್ಶನ್‌ಗೆ ಇಂದು ಜಾಮೀನು ಸಿಕ್ಕೇ ಸಿಗುತ್ತೇ ಅಂತಾ ಈ ಮೊದಲು ದರ್ಶನ್ ಪರ ವಕೀಲರು ವಿಶ್ವಾಸ ವ್ಯಕ್ತಪಡಿಸಿದ್ದರು. ಅಲ್ಲದೇ ದರ್ಶನ್‌ಗೆ ಬೇಲ್ ಸಿಕ್ಕ ನಂತರ ಅವರನ್ನು ಬೆಂಗಳೂರಿಗೆ ಬಳ್ಳಾರಿಯಿಂದ ಕರೆತರಲು ಹೆಲಿಕಾಪ್ಟರ್ ಸಹ ಬುಕ್ ಮಾಡಲಾಗಿದೆ ಎಂಬ ಸುದ್ದಿಯನ್ನು ಖಾಸಗಿ ಸುದ್ದಿವಾಹಿನಿಗಳು ಪ್ರಸಾರ ಮಾಡಿದ್ದವು.
ಆದರೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ದರ್ಶನ್ ಹಾಗೂ ಅವರ ಅಭಿಮಾನಿಗಳಿಗೆ ಸದ್ಯ ನಿರಾಸೆಯಾಗಿದೆ.