ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಸಿಎಂ ಅಭಯ

ಮೈಸೂರು: ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನಾಮಾಂಕಿತರಾಗಿದ್ದು, ಯಾವುದು ಚುನಾವಣೆಯ ಮೂಲಕ ಆಯ್ಕೆಯಾದವರಲ್ಲ. ಅವರು ಸಂವಿಧಾನದಲ್ಲಿ ಪ್ರಮುಖರು. ಆದರೆ ಜನಪ್ರತಿನಿಧಿಗಳು ಚುನಾವಣೆಯ ಮೂಲಕ ಆಯ್ಕೆಯಾಗಿ ಆಡಳಿತದಲ್ಲಿ ಪ್ರಮುಖರು. ಇಂತಹ ಪ್ರಮುಖ ವ್ಯತ್ಯಾಸವಿರುವಾಗ ಯಾವುದೇ ರಾಜ್ಯದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ . ಈ ವಿಷಯದ ಕುರಿತು ರಾಷ್ಟ್ರಾದ್ಯಂತ ಚರ್ಚೆಯಾಗಬೇಕು ಎಂದರು.

ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು: ಮುಡಾ ಪ್ರಕರಣದಲ್ಲಿ ಕಾನೂನು ಪ್ರಕಾರ ಹೋರಾಟ ಮಾಡಲಾಗುವುದು. ನನ್ನ ಮೇಲಿನ ಜನಬೆಂಬಲದಿಂದ ಬೆದರಿರುವ ಪ್ರತಿಪಕ್ಷಗಳು, ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲ ಬಾರಿ ಎಂದರು.

ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದಿಂದ ಸಂವಿಧಾನದ ಸಂಘರ್ಷ ಉಂಟಾಗುತ್ತಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಮ್ಮ ಸರ್ಕಾರಕ್ಕೆ ಜನಬೆಂಬಲ ದೊರೆತಿದ್ದು, ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದೇವೆ. ಈ ಐದು ವರ್ಷದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಗೊಳಿಸಬೇಕೆಂದು ಜನಾದೇಶವಿದೆ ಎಂದರು.

ಕೇಂದ್ರ ಸರ್ಕಾರದಿಂದ ಅಧಿಕಾರದ ದುರ್ಬಳಕೆ: ಕೇಂದ್ರದ ಇಡಿ ಮತ್ತು ಸಿಬಿಐ ಗಳು ದುರ್ಬಳಕೆಯಾಗುತ್ತಿದ್ದು, ಆಪರೇಷನ್ ಕಮಲದ ಭಾಗವಾಗಿರಬಹುದೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಇಡೀ ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು

ಪ್ರತಿಪಕ್ಷಗಳಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ: ಬಿಜೆಪಿಯವರು ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕೆಂದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಉತ್ತರಿಸಿ, ತಪ್ಪು ಮಾಡಿಲ್ಲವಾದ್ದರಿಂದ ರಾಜಿನಾಮೆ ನೀಡುವ ಅಗತ್ಯವಿಲ್ಲ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜಿನಾಮೆ ನೀಡಿದ್ದಾರೆಯೇ? ಎಂದು ಮರುಪ್ರಶ್ನಿಸಿ , ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಪ್ರತಿಪಕ್ಷಗಳು ಮಾಡುತ್ತಿವೆ ಎಂದರು.

ಸರ್ಕಾರವನ್ನು ಟೀಕಿಸಲು ಬಿಜೆಪಿಗೆ ನೈತಿಕತೆ ಇಲ್ಲ: ಮೋದಿಯವರು ತಮ್ಮ ರಾಜಕೀಯ ಭಾಷಣದಲ್ಲಿ ಕರ್ನಾಟಕ ಹಾಗೂ ತೆಲಂಗಾಣ ಸರ್ಕಾರಗಳ ವಿರುದ್ಧ ದೂರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಗೋದ್ರಾ ಘಟನೆಗೆ ಸಂಬಂಧಪಟ್ಟಂತೆ ಮೋದಿಯವರು ರಾಜಿನಾಮೆ ನೀಡಿದ್ದಾರೆಯೇ? ನಮ್ಮ ಸರ್ಕಾರವನ್ನು ಟೀಕಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಇಲ್ಲ. ಆಪರೇಷನ್ ಕಮಲ ಮಾಡಿ , ಸರ್ಕಾರವನ್ನು ಅಸ್ಥಿರಗೊಳಿಸುವ ಅವರ ಪ್ರಯತ್ನ ವಿಫಲವಾಗಿದೆ ಎಂದರು.

ಸಂವಿಧಾನ ಹಾಗೂ ಕಾನೂನು ವಿರೋಧಿ ಕೆಲಸ ಮಾಡಿಲ್ಲ: ಕುಮಾರಸ್ವಾಮಿಯವರು ರಾಜ್ಯದಲ್ಲಿ ಲೋಕಾಯುಕ್ತ ಮರಳಿರುವ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಉತ್ತರಿಸಿ, ಲೋಕಾಯುಕ್ತವನ್ನು ಮುಚ್ಚಲಾಗಿರಲಿಲ್ಲ. ಆನೇಕ ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲಿ ಎಸಿಬಿ ಅಸ್ತಿತ್ವದಲ್ಲಿದೆ. ಬಿಜೆಪಿಯವರಿಗೆ ಈ ಧೋರಣೆ ಏಕೆ? ಬಿಜೆಪಿಯಲ್ಲಿ ತಪ್ಪು ಮಾಡದಿರುವ , ಭ್ರಷ್ಟಾಚಾರ ಮಾಡದಿರುವ ಒಬ್ಬರೂ ಇಲ್ಲ. ನಾವು ಎಂದಿಗೂ ಸಂವಿಧಾನ ವಿರುದ್ಧವಾಗಿಯಾಗಲಿ, ಕಾನೂನು ವಿರುದ್ಧವಾಗಿ ಯಾವುದೇ ಕೆಲಸಗಳನ್ನು ಹಿಂದೆಯೂ ಮಾಡಿರುವುದಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಅನಿಶ್ಚಿತ ರಾಜಕೀಯ ಬೆಳವಣಿಗೆಯಿಂದ ಗ್ಯಾರಂಟಿಗಳು ನಿಲ್ಲಬಹುದೆಂಬ ಆತಂಕ ಜನರಲ್ಲಿ ಮನೆಮಾಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಯಾವುದೇ ಕಾರಣಕ್ಕೂ ಬಡವರ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ. ಇಂದಿನ ಕಾರ್ಯಕ್ರಮಕ್ಕೆ ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ಮುಖ್ಯಮಂತ್ರಿಗಳ ಪರ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

136 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಬಿಜೆಪಿಯವರು ಜನಾದೇಶ ಎಂದಿಗೂ ಪಡೆಯದೆ, ಕೇವಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಜನರು ತಿರಸ್ಕರಿಸಿದ್ದಾರೆ ಎಂದರು.

ರಾಜಕೀಯ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ರಾಹುಕಾಲ: 01:30PM ರಿಂದ 3:00PM, ಗುಳಿಕಕಾಲ: 09:00AM ರಿಂದ 10:30AM, ಯಮಗಂಡಕಾಲ: 06:00AM ರಿಂದ 07:30AM, Astrology

[ccc_my_favorite_select_button post_id="115027"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!