October 11, 2024 3:59 am

2024ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ…!

ಬೆಂಗಳೂರ: ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ ಗಾಂಧಿವಾದಿ ಪ್ರೊ. ಜಿ.ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಗಳು ಆಯ್ಕೆಯಾಗಿವೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಾವಲಂಬನೆ, ಗ್ರಾಮಸ್ವರಾಜ್, ಅಸ್ಪøಶ್ಯತೆ ನಿವಾರಣೆ, ಆರ್ಥಿಕ ಚಿಂತನೆಗಳು, ಖಾದಿ ಚಟುವಟಿಕೆ, ಜೀವನ ಶಿಕ್ಷಣ ಮತ್ತಿತರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಮಹತ್ಸಾಧನೆ ಮಾಡಿದ ಮಹನೀಯರು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ಗೌರವಿಸಲು ಕರ್ನಾಟಕ ರಾಜ್ಯ ಸರ್ಕಾರವು 2014 ರಲ್ಲಿ ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ ಸ್ಥಾಪಿಸಿ ಆದೇಶ ಹೊರಡಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಶಸ್ತಿ ಫಲಕ ಹಾಗೂ ರೂ.5 ಲಕ್ಷ ನಗದು ಒಳಗೊಂಡಿರುವ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು 2014 ರಿಂದ ಪ್ರದಾನ ಮಾಡುತ್ತಾ ಬಂದಿದೆ.

2023 ರ ವರೆಗೆ 8 ವ್ಯಕ್ತಿಗಳು ಹಾಗೂ 2 ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2024ನೇ ಸಾಲಿನ ಪ್ರಶಸ್ತಿಯು ಪ್ರೊ.ಜಿ.ಬಿ. ಶಿವರಾಜು, ಗೊಟ್ಟಿಕೆರೆ, ತುರುವೇಕೆರೆ ತಾಲ್ಲೂಕು, ತುಮಕೂರು ಜಿಲ್ಲೆ ಇವರಿಗೆ ಮತ್ತು ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ ಸಂಸ್ಥೆಗೆ ವಿಂಗಡಿಸಿ ಪ್ರದಾನ ಮಾಡಲಾಗುತ್ತಿದೆ.

ಪ್ರಶಸ್ತಿ ಮೊತ್ತವನ್ನು ತಲಾ ರೂ.2.5 ಲಕ್ಷಗಳಂತೆ ಸಮನಾಗಿ ಪುರಸ್ಕಾರ ನೀಡಿ ಸ್ಮರಣಿಕೆ, ಪ್ರಶಸ್ತಿ ಪತ್ರದೊಂದಿಗೆ ಬರುವ ಅಕ್ಟೋಬರ್ 02 ಗಾಂಧಿ ಜಯಂತಿಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾದ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತ ಸನತ್ಕುಮಾರ್ ಬೆಳಗಲಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ವೂಡೆ ಪಿ.ಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರು ಸದಸ್ಯರಾಗಿದ್ದರು.

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತ ಪ್ರೊ.ಜಿ.ಬಿ. ಶಿವರಾಜು: ನಿವೃತ್ತ ಉಪನ್ಯಾಸಕರಾಗಿರುವ ಪ್ರೊ. ಜಿ.ಬಿ. ಶಿವರಾಜು ಅವರು ವೃತ್ತಿ ಜೀವನದುದ್ದಕ್ಕೂ ವಿದ್ಯಾರ್ಥಿಗಳಲ್ಲಿ ಗಾಂಧಿ ವಿಚಾರಧಾರೆಯನ್ನು ರೂಪಿಸಲು ಶ್ರಮಿಸಿದ್ದಾರೆ. 73 ವರ್ಷದ ಇವರು ತಮ್ಮ ನಿವೃತ್ತಿ ವೇತನವನ್ನು ಗಾಂಧೀ ವಿಚಾರಗಳನ್ನು ಯುವ ಜನರಿಗೆ ತಲುಪಿಸಲು ವಿನಿಯೋಗಿಸುತ್ತಿದ್ದಾರೆ.

ಗಾಂಧಿ ಪ್ರಣೀತ ಸಂಘ ಸಂಸ್ಥೆಗಳು ಮತ್ತು ಸರ್ಕಾರಿ ಸಂಸ್ಥೆಗಳು, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಮದ್ಯಪಾನ ಸಂಯಮ ಮಂಡಳಿಗಳ ಸಮನ್ವಯದ ಮೂಲಕ ಗಾಂಧಿ ವಿಚಾರಗಳನ್ನು ವಿದ್ಯಾರ್ಥಿಗಳು ಮತ್ತು ಯುವ ಸಮುದಾಯಕ್ಕೆ ತಲುಪಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ.

ಅರಸೀಕೆರೆಯಲ್ಲಿನ ಕಸ್ತೂರ ಬಾ ಗಾಂಧಿ ಆಶ್ರಮದ ಪುನರುಜ್ಜೀವನಗೊಳಿಸಿದ್ದಾರೆ. ಮೂಡಿಗೆರೆಯ ಭಾರತಿ ಬೈಲ್ ಕೇಂದ್ರವನ್ನು ಅಭಿವೃದ್ಧಿಗೊಳಿಸಿದ್ದಾರೆ. ಮಂಡ್ಯ ಜಿಲ್ಲೆ ಮಾರ್ನೋಮಿದೊಡ್ಡಿ ಗ್ರಾಮದಲ್ಲಿ ಕಸ್ತೂರಬಾ ಗಾಂಧಿ ಟ್ರಸ್ಟ್ನ ಉಪಕೇಂದ್ರವನ್ನು ಸ್ಥಳೀಯರ ಸಹಕಾರದಿಂದ ಗ್ರಾಮೀಣ ಮಹಿಳೆಯರ ಸ್ವ ಉದ್ಯೋಗ ಕಾರ್ಯಾಗಾರವಾಗಿ ಅಭಿವೃದ್ಧಿಪಡಿಸಿದ್ದಾರೆ.

ಸಂಸ್ಥೆಯ 20 ಎಕರೆಗೂ ಹೆಚ್ಚು ಭೂಮಿಯಲ್ಲಿ ಸುಸ್ಥಿರ ಕೃಷಿ ಚಟುವಟಿಕೆಗಳನ್ನು ಸ್ಥಳೀಯರ ಸಹಕಾರದೊಂದಿಗೆ ನಿರ್ವಹಿಸುತ್ತಿದ್ದಾರೆ. ಮೈಸೂರಿನ ಮಾನಸಗಂಗೋತ್ರಿಯಲ್ಲಿ ಸಬರಮತಿ ಮಾದರಿಯ ಆಶ್ರಮ ನಿರ್ಮಾಣ.

ಗದಗ ಜಿಲ್ಲೆಯಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದ ಆವರಣದಲ್ಲಿ ಸಬರಮತಿ ಆಶ್ರಮದ ಮಾದರಿಯನ್ನು ನಿರ್ಮಿಸಿ ಗಾಂಧೀಜಿಯವರ ಬದುಕು ಸಾಧನೆಗಳನ್ನು ಯುವಜನರು ಹಾಗೂ ಗ್ರಾಮೀಣ ಭಾಗದ ಜನರಿಗೆ ಆಕರ್ಷಕವಾಗಿ ಅನಾವರಣಗೊಳಿಸಿದ್ದಾರೆ.

ಗಾಂಧೀ ಸಾಹಿತ್ಯ ಸಂಘ, ಹರಿಜನ ಸೇವಕ ಸಂಘ ಮೊದಲಾದ ಸಂಸ್ಥೆಗಳನ್ನು ಪುನರಜ್ಜೀವಗೊಳಿಸಿದ್ದಾರೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ ಬಳಿ ಕ್ವಿನ್ ಸಿಟಿ: ಹೇಗಿರುತ್ತೆ ಗೊತ್ತಾ..? ವಿಡಿಯೋಗಳನ್ನು ನೋಡಿ

ಹಾವೇರಿ ಜಿಲ್ಲೆ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ 1984 ರ ಅಕ್ಟೋಬರ್ 02 ರಂದು ಹಾವೇರಿ ಜಿಲ್ಲೆ ಹೊಸರಿತ್ತಿ ಗ್ರಾಮದಲ್ಲಿ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನವು ಸ್ಥಾಪಿಸಿದ ಗಾಂಧೀ ಗ್ರಾಮೀಣ ಗುರುಕುಲ ವಸತಿ ಶಾಲೆಯು ಕಳೆದ 39 ವರ್ಷಗಳಿಂದ ಗಾಂಧಿ ವಿಚಾರಗಳನ್ನು ಹೊಸ ಪೀಳಿಗೆಯಲ್ಲಿ ಅಳವಡಿಸಲು ಅಹರ್ನಿಶಿ ದುಡಿಯುತ್ತಿದೆ.

ಗಾಂಧೀ ಗ್ರಾಮೀಣ ಗುರುಕುಲ ವಸತಿ ಶಾಲೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ 5 ರಿಂದ 10 ನೇ ತರಗತಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಸಮಾಜದ ಎಲ್ಲಾ ವರ್ಗಗಳು ಸೇರಿದಂತೆ ಗ್ರಾಮೀಣ ಕೃಷಿಕ ಹಾಗೂ ಕೂಲಿಕಾರರ ಕುಟುಂಬದ ಹಿನ್ನೆಲೆಯ ಸಾವಿರಾರು ಪ್ರತಿಭಾವಂತ ಮಕ್ಕಳಿಗೆ ಊಟ, ವಸತಿ, ಇತರೆ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ.

ಇಲ್ಲಿನ ವಿದ್ಯಾರ್ಥಿಗಳು ತಾವೇ ನೇಯ್ದ ಬಟ್ಟೆಗಳನ್ನು ಧರಿಸುತ್ತಾರೆ. ತಾವೇ ಬೆಳೆದ ಕೃಷಿ ಬೆಳೆಗಳಿಂದ ತಯಾರಿಸಿದ ಆಹಾರ ಸೇವಿಸುತ್ತಾರೆ. ದೇಶದ ಆಂತರಿಕ ಕಲಹಗಳನ್ನು ಕಿತ್ತೆಸೆಯುವ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಶಿಕ್ಷಣ ಪಡೆಯುತ್ತಿದ್ದಾರೆ.

ರಾಜ್ಯ ಪಠ್ಯಕ್ರಮದ ಜೊತೆಗೆ ಗಾಂಧೀ ವಿಚಾರಧಾರೆಯ ಅನುಸಾರ ಕೃಷಿ, ನೂಲು ಮತ್ತು ನೇಯ್ಗೆ, ಹೈನುಗಾರಿಕೆ, ತೋಟಗಾರಿಕೆ ಮುಂತಾದ ಸ್ವಾವಲಂಬಿ, ಪ್ರಾಯೋಗಿಕ ಶಿಕ್ಷಣವನ್ನು ಇಲ್ಲಿನ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇಲ್ಲಿ ಶಿಕ್ಷಣ ಪಡೆದ ಹಲವಾರು ವಿದ್ಯಾರ್ಥಿಗಳು ಅತ್ಯುತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಸಂಸ್ಥೆಯು ಶಿಕ್ಷಣದ ಜೊತೆಗೆ ಜೀವನ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು 02ನೇ ಅಕ್ಟೋಬರ್ 2024 ರಂದು ಸಂಜೆ 4.30 ಗಂಟೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಸೌಧದ ಸುಲೋಚನಾ ಸಭಾಂಗಣದಲ್ಲಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Recent Posts

ರಾಜಕೀಯ

ಓ ನಲ್ಲ, ನೀನಲ್ಲ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನೀ ಲಾಯಕ್ಕಿಲ್ಲ ಎಂದವರು ಯಾರು..?: ಬಿಜೆಪಿಗರಿಗೆ ಜೆಡಿಎಸ್ ಮುಖಂಡರ ಪ್ರಶ್ನೆ

ಓ ನಲ್ಲ, ನೀನಲ್ಲ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನೀ ಲಾಯಕ್ಕಿಲ್ಲ ಎಂದವರು ಯಾರು..?: ಬಿಜೆಪಿಗರಿಗೆ

ದೊಡ್ಡಬಳ್ಳಾಪುರ: ಒಪ್ಪಂದದಂತೆ ನಗರಸಭೆ ಅಧ್ಯಕ್ಷ ಸ್ಥಾನ ಜೆಡಿಎಸ್‌ಗೆ ಬಿಡದಿರುವ ಕುರಿತು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಅವರ ಬೇಸರದ ನುಡಿಗಳು ತಾಲೂಕಿನಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಜೆಡಿಎಸ್-ಬಿಜೆಪಿ ಮುಖಂಡರ ನಡುವೆ ಮಾತಿನ

[ccc_my_favorite_select_button post_id="93837"]
ನ.1 ರಂದು ಅದ್ದೂರಿ‌ ರಾಜ್ಯೋತ್ಸವ; ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಡಿಸಿ

ನ.1 ರಂದು ಅದ್ದೂರಿ‌ ರಾಜ್ಯೋತ್ಸವ; ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಡಿಸಿ

ಬೆಳಗಾವಿ; ಪ್ರತಿ ವರ್ಷದಂತೆ ಈ ಬಾರಿಯೂ ನ.1 ರಂದು ಕರ್ನಾಟಕ‌ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು; ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಬೆಳಗಾವಿ ಜಿಲ್ಲಾ‌

[ccc_my_favorite_select_button post_id="93748"]
RATAN TATA: ಸರ್ಕಾರಿ ಗೌರವಗಳೊಂದಿಗೆ ಭಾರತದ ಮಹಾನ್ ಪುತ್ರನ ಅಂತ್ಯಕ್ರಿಯೆ

RATAN TATA: ಸರ್ಕಾರಿ ಗೌರವಗಳೊಂದಿಗೆ ಭಾರತದ ಮಹಾನ್ ಪುತ್ರನ ಅಂತ್ಯಕ್ರಿಯೆ

ಮುಂಬೈ: ನಿನ್ನೆ ರಾತ್ರಿ ನಿಧನರಾದ ಭಾರತದ ಹೆಮ್ಮೆಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಮಹಾರಾಷ್ಟ್ರ ಸರ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯವನ್ನು ಸಲ್ಲಿಸಿದೆ. ಮುಂಬೈನ ವರ್ಲಿಯ ರುದ್ರಭೂಮಿಯ ವಿದ್ಯುತ್ ಚಿತಾಗಾರದಲ್ಲಿ ಭಾರತದ ಮಹಾನ್

[ccc_my_favorite_select_button post_id="93842"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

ರಾಜ್ಯ ಮಟ್ಟದ Dasara ಕ್ರೀಡಾಕೂಟ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಸಾಧನೆ

ರಾಜ್ಯ ಮಟ್ಟದ Dasara ಕ್ರೀಡಾಕೂಟ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಸಾಧನೆ

ದೊಡ್ಡಬಳ್ಳಾಪುರ: ಮೈಸೂರಿನ ಅರಮನೆ ಮೈದಾನದಲ್ಲಿ ದಸರಾ (Dasara) ಉತ್ಸವ ಅಂಗವಾಗಿ ಅಕ್ಟೋಬರ್ 03 ರಿಂದ ಅಕ್ಟೋಬರ್ 06 ರ ವರೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ‘ರಾಜ್ಯ ಮಟ್ಟದ ದಸರಾ

[ccc_my_favorite_select_button post_id="93666"]
ಪುತ್ರನ ಜತೆ ಸೇರಿ | ಪತಿ ಕೊಂದ ಪತ್ನಿ

ಪುತ್ರನ ಜತೆ ಸೇರಿ | ಪತಿ ಕೊಂದ ಪತ್ನಿ

ಬೆಂಗಳೂರು: ಪತ್ನಿ, ಪುತ್ರ ಇನ್ನಿಬ್ಬರೊಂದಿಗೆ ಪತಿಯನ್ನು ಮನಸೋಇಚ್ಛೆ ಹೊಡೆದು ಕೊಲೆಗೈದಿರುವ ಘಟನೆ ಮಾದನಾಯಕನಹಳ್ಳಿಯ ತೋಟದಗುಡ್ಡದಹಳ್ಳಿಯ ಪ್ರಕೃತಿ ಬಡಾವಣೆಯಲ್ಲಿ ನಡೆದಿದೆ. ಮೂಲತಃ ತಮ್ಮೇನಹಳ್ಳಿ ಪಾಳ್ಯದ ಮುನಿರಾಜು(38) ಕೊಲೆಯಾದವರು, ಪತ್ನಿ ಹಾಗೂ ಮಗನೊಂದಿಗೆ ತೋಟದ ಗುಡ್ಡದಹಳ್ಳಿಯ ಪ್ರಕೃತಿ ಬಡಾವಣೆಯಲ್ಲಿ ವಾಸವಾಗಿದ್ದರು. ಪತ್ನಿ ಗೀತಾ(35), ಮಗ ಹೇಮಂತ್

[ccc_my_favorite_select_button post_id="93786"]
ಬಸ್‌ ಡಿಕ್ಕಿ: ಬಿದ್ದ ಮಹಿಳೆ ಕಾರಿಗೆ ಸಿಲುಕಿ ಸಾವು..!

ಬಸ್‌ ಡಿಕ್ಕಿ: ಬಿದ್ದ ಮಹಿಳೆ ಕಾರಿಗೆ ಸಿಲುಕಿ ಸಾವು..!

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್‌ ತಗುಲಿ (accident) ರಸ್ತೆಗೆ ಬಿದ್ದ ಮಹಿಳೆಗೆ ಹಿಂದೆ ಬರುತ್ತಿದ್ದ ಕಾರು ಡಿಕ್ಕಿಯಾಗಿ ಕೊಂಚ ದೂರ ಎಳೆದೊಯ್ದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜ್ಞಾನಭಾರತಿ ಸಂಚಾರ

[ccc_my_favorite_select_button post_id="93728"]

ಆರೋಗ್ಯ

ಸಿನಿಮಾ

NATIONAL AWARDS : ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸ್ವೀಕರಿಸಿದ ರಿಷಭ್ ಶೆಟ್ಟಿ- Video

NATIONAL AWARDS : ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸ್ವೀಕರಿಸಿದ ರಿಷಭ್ ಶೆಟ್ಟಿ- Video

ನವದೆಹಲಿ; ಪ್ರಕಟವಾಗಿದ್ದ 2022ನೇ ಸಾಲಿನ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (NATIONAL AWARDS) ಇಂದು ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈ ಪೈಕಿ ಕನ್ನಡದ ಚಲನಚಿತ್ರಗಳು 6 ಪ್ರಶಸ್ತಿಗಳನ್ನು ಬಾಚಿಕೊಂಡಿವೆ. ಕನ್ನಡದ ಕೆಜಿಎಫ್ ಚಾಪ್ಟರ್ 2

[ccc_my_favorite_select_button post_id="93703"]
error: Content is protected !!