ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ( Prajwal revanna ) ವಿರುದ್ಧದ ಲೈಂಗಿಕ ಹಗರಣದ ಆರೋಪಕ್ಕೆ ಸಂಬಂಧಿಸಿದ ಪೆನ್ ಡ್ರೈವ್ ( pendrive case) ಗಳನ್ನು ಹಂಚಿಕೆ ಮಾಡಿದ ಆರೋಪದಡಿ ಮಾಜಿ ಶಾಸಕ ಬಿಜೆಪಿಯ ಪ್ರೀತಂ ಗೌಡ (preetham gowda ) ಅವರ ವಿರುದ್ದದ ಕ್ರಿಮಿನಲ್ ಪ್ರಕರಣದ ತನಿಖೆ ಮುಂದುವರಿಯಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
‘ನನ್ನ ವಿರುದ್ಧ ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿರುವ ದೂರು ಮತ್ತು ನಂತರದ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಪ್ರೀತಂ ಗೌಡ ಸಲ್ಲಿಸಿರುವ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಈ ಕುರಿತಂತೆ ಆದೇಶಿಸಿದರು.
ವಿಚಾರಣೆ ವೇಳೆ ಪ್ರೀತಂ ಗೌಡ ಪರ ವಕೀಲ ಸಂದೀಪ್ ಎಸ್.ಪಾಟೀಲ್, ಅರ್ಜಿಯನ್ನು ದಸರಾ ರಜೆಯ ಬಳಿಕ ವಿಚಾರಣೆಗೆ ತೆಗೆದುಕೊಳ್ಳಬೇಕು. ಬುಧವಾರ ಪ್ರೀತಂ ಗೌಡ ಎಸ್ಐಟಿಯ ಮುಂದೆ ಹೇಳಿಕೆ ದಾಖಲಿಸಿದ್ದಾರೆ ಎಂದು ಮನವಿ ಮಾಡಿದರು.
ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ರವಿವರ್ಮ ಕುಮಾರ್, ಇದು ಡಿಜಿಟಲ್ ಅಪರಾಧ. ವಿಡಿಯೊಗಳಿಗೆ ಸಂಬಂಧಿಸಿದಂತೆ విధి ವಿಜ್ಞಾನ ವರದಿಗೆ ಪ್ರಯೋಗಾಲಯದ (ಎಫ್ಎಸ್ಎಲ್) ಕಾಯಲಾಗುತ್ತಿದೆ ಎಂದರು.
ಅ.24ಕ್ಕೆ ವಿಚಾರಣೆ ನಿಗದಿ: ನ್ಯಾಯಪೀಠ ಪ್ರತಿಕ್ರಿಯಿಸಿ, ತನಿಖೆ ಮುಂದುವರಿಯಬೇಕು ಮತ್ತು ಇದಕ್ಕೆ ಪ್ರೀತಂ ಗೌಡ ಸಹಕರಿಸಬೇಕು.
ವಿಚಾರಣೆಯನ್ನು ಅಕ್ಟೋಬರ್ 240 ನಿಗದಿಗೊಳಿಸಲಾಗು ವುದು. ಅಷ್ಟರಲ್ಲಿ ಎಫ್ಎಸ್ ಎಲ್ ವರದಿ ಬರಬಹುದು. ಅಲ್ಲಿಯವರೆಗೂ ಅರ್ಜಿದಾ ರರಿಗೆ ಬಂಧನದಿಂದ ರಕ್ಷಣೆ ನೀಡಿರುವ ಮಧ್ಯಂತರ ಆದೇಶ ಮುಂದವರಿಯಲಿದೆ ಎಂದು ತಿಳಿಸಿತು.
ಮುಂದಿನ ವಿಚಾರಣೆ ವೇಳೆಗೆ ಪ್ರಕರಣದ ವಸ್ತುಸ್ಥಿತಿ ವರದಿಯನ್ನು ಸಲ್ಲಿಸಿ ಎಂದು ಪ್ರಾಸಿಕ್ಯೂಷನ್ಗೆ ನಿರ್ದೇಶಿಸಿ ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಿತು ಎಂದು ವರದಿಯಾಗಿದೆ.