ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಬೆಟ್ಟದ ಟ್ರಕ್ಕಿಂಗ್, ಸಸಿ ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಲ್ಲೆಯಲ್ಲಿ ಕುಂದಾಣ ಬೆಟ್ಟ, ಮಾಕಳಿಬೆಟ್ಟ, ಶಿವಗಂಗೆ ಬೆಟ್ಟ, ಸಿದ್ಧರ ಬೆಟ್ಟ, ಆವತಿ ಬೆಟ್ಟದಂತ ಪ್ರವಾಸಿ ತಾಣಗಳು ಹಾಗೂ ಪಾರಂಪರಿಕ ಕಟ್ಟಡಗಳಿರುವುದು ನಮ್ಮೆಲ್ಲರ ಹೆಮ್ಮೆ. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಚಾರಣಕ್ಕೆ ಅನುಕೂಲಕರ ವಾತಾವರಣವನ್ನು ಜಿಲ್ಲಾಡಳಿತ ಕಲ್ಪಿಸುತ್ತಿದ್ದು, ಸಾರ್ವಜನಿಕರು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದಾಗ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಸ್ವಚ್ಛತೆ ಕಾಪಾಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆವತಿ ಬೆಟ್ಟದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಮತ್ತು ಶಾಂತಿ ದ್ಯೇಯ ವಾಕ್ಯದೊಂದಿಗೆ ‘ಟ್ರಕ್ಕಿಂಗ್, ಸಸಿ ನೆಡುವ ಹಾಗೂ ಸ್ವಚ್ಛತಾ ಹೀ ಸೇವಾ ಆಂದೋಲನ’ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್-ಕಸ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜತೆಗೆ ಪರಿಸರ ಸಂರಕ್ಷಣೆಗಾಗಿ ಗಿಡ-ಮರ ಹೆಚ್ಚಾಗಿ ನೆಟ್ಟು, ಬೆಳೆಸುವ ಮೂಲಕ ಆರೋಗ್ಯಕರ ಪ್ರಕೃತಿ ನಿರ್ಮಿಸಿ ಪರಿಸರ ಸಮತೋಲನ ಕಾಪಾಡಬೇಕು ಎಂದರು.

ಸ್ವಚ್ಛತಾ ಹೀ ಸೇವಾ ಆಂದೋಲನ: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ’ವನ್ನು ಆಯೋಜಿಸಲಾಗುತ್ತಿದ್ದು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಸಿ.ಇ.ಒ ಡಾ.ಕೆ.ಎನ್ ಅನುರಾಧ ಅವರು ಹೇಳಿದರು.

ಸ್ವಚ್ಛತಾ ಹೀ ಸೇವಾ ಆಂದೋಲನದ ಭಾಗವಾಗಿ ಎಲ್ಲಾ ಅಧಿಕಾರಿಗಳು, ಸಂಘಸಂಸ್ಥೆಗಳು, ಸಾರ್ವಜನಿಕರು ದೇವನಹಳ್ಳಿ ತಾಲ್ಲೂಕಿನ ಆವತಿ ಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳು, ಕಸ-ತ್ಯಾಜ್ಯವನ್ನು ಸಂಗ್ರಹಿಸಿ ಸ್ವಚ್ಚತೆ ಮಾಡಿದರು. ಈ ಸಂದರ್ಭದಲ್ಲಿ ಸ್ವಚ್ಛತೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಬಳಿಕ ಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ 100 ಕ್ಕೂ ಅಧಿಕ ಸಸಿಗಳನ್ನು ನೆಡಲಾಯಿತು.

ಈ ದಿನದಂದು ನಾವೆಲ್ಲರೂ ಪರಿಸರ ಸಂರಕ್ಷಣೆಗಾಗಿ ಸಮಾಜದಲ್ಲಿ ಗಿಡ-ಮರ ನೆಟ್ಟು ಹಸಿರು ವಾತವರಣ ನಿರ್ಮಿಸುವದಾಗಿ ಪ್ರತಿಜ್ಞೆಯನ್ನು ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ಅರಣ್ಯ ಬೆಳೆಸಿ ಪೋಷಿಸಿದ ಅಧಿಕಾರಿಗಳು, ಸಿಬ್ಬಂದಿ, ಪರಿಸರ ಸಂಸ್ಥೆಗಳು ಹಾಗೂ ಪ್ರವಾಸೋದ್ಯಮ ಮಿತ್ರರ ಕಾರ್ಯಕ್ಕೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಆರ್.ಸುಮಾ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗಾರ, ಜಿ.ಪಂ ಯೋಜನಾ ನಿರ್ದೇಶಕರಾದ ವಿಠ್ಠಲ್ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಪ್ರೀತಿ, ದೇವನಹಳ್ಳಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರಗೌಡ, ದೊಡ್ಡ ಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ, ಆವತಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!