ಚಿಕ್ಕಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ನಂದಿ ಬೆಟ್ಟದ ಕ್ರಾಸ್ ಬಳಿ ಶುಕ್ರವಾರ ನಡೆದಿದೆ.
ಮೃತನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬ ಳ್ಳಾಪುರ ತಾಲೂಕಿನ ಹೆಗಡಿಹಳ್ಳಿಯ 32ವರ್ಷದ ರಾಜು ಎಂದು ಗುರ್ತಿಸಲಾಗಿದೆ.
ಮೃತ ರಾಜು ಗಾರೆ ಕೆಲಸ ಮಾಡುತ್ತಿದ್ದು, ಅವರಿಗೆ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಶುಕ್ರವಾರ ಕೆಲಸ ಮುಗಿಸಿಕೊಂಡು ಗ್ರಾಮದತ್ತ ತೆರಳುತ್ತಿದ್ದಾಗ ನಂದಿ ಬೆಟ್ಟದ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.