ಆಂಧ್ರದಲ್ಲಿ ರಾಕ್ಷಸರ ಸರಕಾರ; ಟಿಡಿಪಿ ವಿರುದ್ಧ ಜಗನ್ ಕಿಡಿ

ಅಮರಾವತಿ: ರಾಜ್ಯದಲ್ಲಿ ರಾಕ್ಷಸರ ಸರಕಾರವಿದೆ. ದೇಗುಲ ಭೇಟಿಗೂ ತಡೆಯೊಡ್ಡುವ ರಾಜ ಕೀಯ ಪಕ್ಷವನ್ನು ಎಂದೂ ನೋಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕ ಜಗನ್ ಮೋಹನ್ ರೆಡ್ಡಿ, ತೆಲುಗು ದೇಶಂ ಪಕ್ಷ (ಟಿಡಿಪಿ), ಜನಸೇನಾ ಪಕ್ಷ ಮತ್ತು ಬಿಜೆಪಿ ಮೈತ್ರಿ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ನಿಗದಿತ ತಿರುಪತಿ ಭೇಟಿಯನ್ನು ರದ್ದುಗೊಳಿಸಿದ ಜಗನ್ ಗುರುವಾರ ಸುದ್ದಿಗೋಷ್ಠಿ ನಡೆಸಿ, ಸಿಎಂ ಚಂದ್ರಬಾಬು ನಾಯ್ಡು ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ತಿರುಪತಿ ಲಡ್ಡು ಪ್ರಸಾದವನ್ನು ಹಿಂದಿನ ಸರಕಾರದ ಅವಧಿಯಲ್ಲಿ ಪ್ರಾಣಿಗಳ ಕೊಬ್ಬು ಬೆರೆಸಿದ ತುಪ್ಪ ಬಳಸಿ ತಯಾರಿಸಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿರುವುದರ ಪ್ರಾಯಶ್ಚಿತವಾಗಿ ಸೆ.28ರಂದು ಮಾಜಿ ಸಿಎಂ ಜಗನ್ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ಕೈಗೊಳ್ಳುವಂತೆ ಕರೆ ನೀಡಿದ್ದರು.

ಚಂದ್ರಬಾಬು ನಾಯ್ಡು ಸರಕಾರ ಪೊಲೀಸರ ಮೂಲಕ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕರಿಗೆ ತಿರುಪತಿ ಭೇಟಿ ಕಾರ್ಯಕ್ರ ಮದಲ್ಲಿ ಭಾಗಿಯಾಗದಂತೆ ನೋಟಿಸ್ ನೀಡಿದೆ. ತಿರುಪತಿ ದಾರಿಯ ಹಲವೆಡೆ ಭಾರಿ ಸಂಖ್ಯೆಯ ಪೊಲೀಸ್ ನಿಯೋಜನೆಗೊಳಿಸಿದ್ದಾರೆ.

ಹೊರ ರಾಜ್ಯಗಳಿಂದ ಬಿಜೆಪಿ ಕಾರ್ಯಕರ್ತರು ಬರುತ್ತಿದ್ದಾರೆ. ರಾಕ್ಷಸರ ಆಡಳಿತದಲ್ಲಿ ದೇಗುಲ ಪ್ರವೇಶಕ್ಕೂ ಅನುಮತಿ ಪಡೆಯಬೇಕಿದೆ ಎಂದು ಜಗನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನ್ನದು ಮಾನವೀಯ ಧರ್ಮ: ಮನೆಯಲ್ಲಿ ಬೈಬಲ್ ಓದುವೆ. ಹಿಂದೂ, ಇಸ್ಲಾಂ, ಸಿಖ್ ಧರ್ಮವನ್ನೂ ಪಾಲಿಸುವೆ. ನನ್ನದು ಮಾನವೀಯತೆಯ ಧರ್ಮ’ ಎಂದು ಜಗನ್ ಹೇಳಿಕೊಂಡಿದ್ದಾರೆ.

ನಾಯ್ಡು ಆರೋಪದಿಂದ ತಿರುಪತಿ ಲಡ್ಡು ಪ್ರಸಾದದ ಖ್ಯಾತಿ ಕುಸಿಯುತ್ತಿದೆ ಎಂದು ಟೀಕಿಸಿದ್ದಾರೆ.

ತಿರುಪತಿ ಭೇಟಿ ವೇಳೆ ಜಗನ್ ರೆಡ್ಡಿ ತಮ್ಮ ನಂಬಿಕೆ ಮತ್ತು ಧರ್ಮವನ್ನು ದೇಗುಲದ ಫಾರಂನಲ್ಲಿ ಘೋಷಿಸಿಕೊಳ್ಳಬೇಕು. ಆ ಬಳಿಕವಷ್ಟೇ ಪ್ರವೇಶ ಅವಕಾಶ ಎಂದು ತಿರುಪತಿ ತಿರುಮಲ ದೇಗುಲ ಷರತ್ತು ವಿಧಿಸಿತ್ತು. ಬಿಜೆಪಿ ಮತ್ತು ಟಿಡಿಪಿ ಕೂಡಾ ದನಿಗೂಡಿಸಿದ್ದವು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!