ಸರ್ವರಿಗೂ ಶಿಕ್ಷಣ ನೀಡುವುದು ನಮ್ಮ ಗುರಿ: ಕರಾಮುವಿ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ

ಬೆಂಗಳೂರು: ಸರ್ವರಿಗೂ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪಾತ್ರ ಮಹತ್ವವಾದುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ ಅವರು ತಿಳಿಸಿದರು.

ಬೆಂಗಳೂರಿನ ಪ್ರಸ್ ಕ್ಲಬ್ ಆವರಣದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಾತಿಯ ಕುರಿತು ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತಾನಾಡಿದರು.

ಪ್ರಸ್ತುತ 65 ಕೋರ್ಸ್ ಗಳಿದ್ದು ಅದರಲ್ಲಿ 10 ಆನ್ ಲೈನ್ ಕೋಸ್ಗಳು ತರಬೇತಿಯ ಪ್ರವೇಶಾತಿಯನ್ನು ಜುಲೈ 22 ರಿಂದ ಆರಂಭಿಸಿಲಾಗಿದೆ. ತೃತೀಯ ಲಿಂಗದ ವಿದ್ಯಾರ್ಥಿಗಳಿಗೆ ಹಾಗೂ ದೃಷ್ಠಿಹೀನ ವಿದ್ಯಾರ್ಥಿಗಳಿಗೆ, ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ 2024 -25 ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ಯುಜಿಸಿ ಅನುಮೋದಿತ ಸ್ನಾತಕ/ ಸ್ನಾತಕೋತ್ತರ ಕೋರ್ಸ್ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯು. ಬಿ.ಎಲ್.ಐ.ಎಸ್ಸಿ., ಬಿ.ಎಡ್. (ಸಿ.ಇ.ಟಿ. ಮುಖಾಂತರ) ಹಾಗೂ ಬಿ.ಎಸ್ಸಿ, ಎಂ.ಎ, ಎಂ.ಸಿ.ಜೆ, ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ, ಎಂ.ಎಸ್ಸಿ, ಎಂ.ಬಿ.ಎ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್, ಡಿಪ್ಲೋಮಾ ಪ್ರೋಗ್ರಾಮ್ಸ್, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಪ್ರಾರಂಭಗೊಂಡಿರುತ್ತವೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರವೇಶಾತಿಯನ್ನು ಪಡೆಯಲು 18 ರಿಂದ 80ರ ವರೆಗೆ ವಯೋಮಿತಿ ನಿಗದಿಪಡಿಸಲಾಗಿದ್ದು, ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ, KSRTC/BMTC/NWKSRTC/KKRTC ನೌಕರರುಗಳಿಗೆ ಕ.ರಾ.ಮು.ವಿ.ಯು ಪ್ರವೇಶಾತಿಯಲ್ಲಿ 10% ರಷ್ಟು ರಿಯಾಯಿತಿಯನ್ನು ನೀಡಲಾಗಿದೆ ಎಂದರು.

ಕರಾಮುವಿ ಬೆಂಗಳೂರಿನ 06 ಪ್ರಾದೇಶಿಕ ಕೇಂದ್ರಗಳಲ್ಲಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು, ಅಧಿಕೃತ ವೆಬ್ಸೈಟ್ www.ksoumysuru.ac.in KSOU Admission Portal ಮೂಲಕ ಅರ್ಜಿಗಳನ್ನು ಭರ್ತಿ ಮಾಡಬಹುದಾಗಿದೆ ಎಂದು ತಿಳಿಸಿದರು.

ರಾಜ್ಯಾದ್ಯಾಂತ 50ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಿವೆ. ಕರ್ನಾಟಕದಾದ್ಯಂತ ವಿದ್ಯಾರ್ಥಿಗಳು/ಆಸಕ್ತರು ಹತ್ತಿರದ ಜಿಲ್ಲಾ ಪ್ರಾದೇಶಿಕ ಕೇಂದ್ರಗಳಿಗೂ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಡೀನ್ ಹಾಗೂ ಬೆಂಗಳೂರು ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಪ್ರೋ.ಎಂ. ರಾಮನಾಥಂ ನಾಯ್ಡು, ಕರಾಮುವಿ ವ್ಯವಸ್ಥಾಪನಾ ಮಂಡಳಿ ಸದ್ಯಸರು, ಬೆಂಗಳೂರು ಹಾಗೂ ಬೆಂಗಳೂರು ವಲಯ ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಪ್ರಾದೇಶಿಕ ಕೇಂದ್ರಗಳ ಪ್ರಾದೇಶಿಕ ನಿರ್ದೇಶಕರುಗಳು ಉಪಸ್ಥಿತರಿದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]