ಕಾಂಗ್ರೆಸ್ ಸರ್ಕಾರ ಬೀಳಿಸಲು 1 ಸಾವಿರ ಕೋಟಿ ಮೀಸಲು; ಬಿಜೆಪಿ ವಿರುದ್ಧ ಯತ್ನಾಳ್ ಗಂಭೀರ ಆರೋಪ

ವಿಜಯಪುರ: ಕಾಂಗ್ರೆಸ್ ಸರ್ಕಾರ ಉರುಳಿಸಲು ಕೆಲವರು ಯತ್ನ ಮಾಡುತ್ತಿದ್ದು ಇದಕ್ಕಾಗಿ 1 ಸಾವಿರ ಕೋಟಿ ಮೀಸಲು ಇಟ್ಟಿದ್ದಾರೆ ಎಂದು ಸ್ವಪಕ್ಷದ ವಿರುದ್ಧವೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಉರುಳಿಸಲು ಬಿಜೆಪಿಯಲ್ಲಿ ರಣ ತಂತ್ರ ನಡೆಯುತ್ತಿದೆ. ಎಷ್ಟೋ ಮಂದಿಗೆ ಮುಖ್ಯಮಂತ್ರಿ ಆಗಬೇಕು ಎನ್ನುವುದಿರುತ್ತದೆ. ಅದಕ್ಕಾಗಿ ಎಷ್ಟೋ ಮಂದಿ ಈಗಾಗಲೇ ಸಿಎಂ ಆಗಲು 1 ಸಾವಿರ ಕೋಟಿ ರೂ. ರಿಸರ್ವ್ ಮಾಡಿಟ್ಟಿದ್ದಾರೆ. ಸರ್ಕಾರ ಒಡೆದು ಮುಖ್ಯಮಂತ್ರಿ ಆಗುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೊಸಬಾಂಬ್ ಹಾಕಿದ್ದಾರೆ.

ಡಿಸೆಂಬರ್‌ನಲ್ಲಿ ಕ್ರಾಂತಿಯಾಗುತ್ತದೆ ಅಂತ ಕಾಯುತ್ತಿದ್ದಾರೆ. ತಾವು ಸಿಎಂ ಆಗಬೇಕೆಂದು ಬಿಜೆಪಿಯ ನಾಯಕರೊಬ್ಬರು ಒಂದು ಸಾವಿರ ಕೋಟಿ ರೂ. ರೆಡಿ ಮಾಡಿಕೊಂಡಿದ್ದಾರೆ.ಡಿಸೆಂಬರ್ ತಿಂಗಳಿನಲ್ಲಿ ಕಾಂಗ್ರೆಸ್‌ ಸರ್ಕಾರ ಬಿದ್ದು ಹೋಗಲಿದೆ ಎಂದು ಭಾವಿಸಿಕೊಂಡಿದ್ದಾರೆ

ಎಂದು ಪರೋಕ್ಷವಾಗಿ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರು ಹೇಳದೆ ಆರೋಪಿಸಿದರು. ಈ ಹಿಂದೆ, ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಹೈಕಮಾಂಡ್ ಗೆ ಯಾರು ಎರಡೂವರೆ ಸಾವಿರ ಕೋಟಿ ರೂ. ಕೊಡುತ್ತಾರೋ ಅವರಿಗೆ ಮುಖ್ಯಮಂತ್ರಿ ಪಟ್ಟಿ ಒಲಿಯುತ್ತದೆ ಎಂದು ಹೇಳುವ ಮೂಲಕ ಭಾರೀ ಸಂಚಲನ ಸೃಷ್ಟಿಸಿದ್ದರು. ಈಗ, ಬಿಜೆಪಿ ನಾಯಕರೊಬ್ಬರು ಸಿಎಂ ಆಗಲು 1000 ಕೋಟಿ ರೂ. ಕೂಡಿಟ್ಟುಕೊಂಡಿದ್ದಾರೆ ಎಂದು ಹೇಳುವ ಮೂಲಕ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಆದರೆ, ಸಾವಿರ ಕೋಟಿ ರೂ. ಕೂಡಿಟ್ಟುಕೊಂಡಿರುವ ಬಿಜೆಪಿ ನಾಯಕ ಯಾರು ಎಂಬುದನ್ನು ಬಹಿರಂಗಪಡಿಲಿಲ್ಲ.

ಕಾಂಗ್ರೆಸ್ ಸರ್ಕಾರವನ್ನು ಕೆಡವಲು ನಮ್ಮ ಪಕ್ಷದವರೇ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ಅಸ್ಥಿರಗೊಳಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಅವರು ಮುಖ್ಯಮಂತ್ರಿಯಾಗಲು ನಾವು ಬೆಂಬಲ ಕೊಡಬೇಕಲ್ಲವೇ?. ಕಳೆದ ಬಾರಿಯಂತೆ ಎಲ್ಲಾ ಶಾಸಕರು ಆ ನಾಯಕತ್ವಕ್ಕೆ ಮನ್ನಣೆ ಕೊಡುವುದಿಲ್ಲ. ಸರ್ಕಾರ ರಚನೆ ಅವರು ಅಂದುಕೊಂಡಷ್ಟು ಸರಳವಾಗಿಲ್ಲ ಎಂದು ಹೇಳಿದರು.

ಸಿಎಂ ಆಗಬೇಕೆಂದು ಎಲ್ಲರಿಗೂ ಇಷ್ಟವಿರುತ್ತದೆ. ಆದರೆ, ಅದೃಷ್ಟ ಇದ್ದವರಿಗಷ್ಟೇ ಆಗುತ್ತೆ ಎಂದು ಮಾತು ಆರಂಭಿಸಿದ ಅವರು, ರಾಜ್ಯದಲ್ಲಿ ಇದೇ ವರ್ಷ ಡಿಸೆಂಬರ್ ನಲ್ಲಿ ದೊಡ್ಡದಾದ ರಾಜಕೀಯ ಕ್ರಾಂತಿಯೊಂದನ್ನು ಮಾಡಲು ಹಲವಾರು ಬಿಜೆಪಿಗರು ಪ್ರಯತ್ನಿಸುತ್ತಿದ್ದಾರೆ. ಆಪರೇಷನ್ ಕಮಲ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಕೆಡವಿ ತಾವು ಮುಖ್ಯಮಂತ್ರಿಯಾಗಲು ಬಿಜೆಪಿಯ ಒಬ್ಬ ನಾಯಕರು 1000 ಕೋಟಿ ರೂ.ಗಳನ್ನು ಕೂಡಿಟ್ಟುಕೊಂಡಿಟ್ಟುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಕೆಲವರಿಗೆ ಶಾಸಕರನ್ನು ಖರೀದಿ ಮಾಡುವುದು ತುಂಬಾ ಸರಳವಾಗಿದೆ. ಏಕೆಂದರೆ ಹಿಂದೆಯೂ ಇದೇ ರೀತಿ ಖರೀದಿ ಮಾಡಿಯೇ ಕೆಲವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಆದರ ಚಾಳಿ ಈಗ ಕೆಲವರು ಮುಂದುವರೆಸಿಕೊಂಡು ಹೋಗಲು ಸಜ್ಜಾಗಿದ್ದಾರೆ. ಪಕ್ಷದ ಹೈ ಕಮಾಂಡ್ ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಯತ್ನಾಳ್ ಹೇಳಿದರು.

ಕೆಲವರಿಗೆ ಯಾರು ಬೇಕಾಗಿಲ್ಲ. ಮುಖ್ಯಮಂತ್ರಿ ಗಾದಿ ಬೇಕಾಗಿದೆ ಅಷ್ಟೇ. ನಮಗೆ ಪಕ್ಷದ ಹಿತ ಮುಖ್ಯ. ಸ್ಥಾನಮಾನಕ್ಕಾಗಿ ಪಕ್ಷವನ್ನು ಒಬ್ಬರ ಕೈಯಲ್ಲಿ ಕೊಡಲು ಸಾಧ್ಯವಿಲ್ಲ. ಹಿಂದೆ ಒಬ್ಬರಿಗೆ ಎಲ್ಲವನ್ನೂ ಕೊಟ್ಟಿದ್ದಕ್ಕೆ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, ಆಪರೇಷನ್ ಕಮಲಕ್ಕೆ ನನ್ನ ಸಮ್ಮತಿಯಿಲ್ಲ ಎಂದು ಹೇಳಿದ ಅವರು, ಕಳೆದ ಬಾರಿ ಆಪರೇಷನ್ ಕಮಲ ಮಾಡಿದಾಗ ಬಂದಿದ್ದ 17 ಮಂದಿಯಿಂದಲೇ ಬಿಜೆಪಿಯ ಅವಸಾನವಾಗಿದು. ಈಗ ಮತ್ತೆ ಅಂಥ ಪರಿಸ್ಥಿತಿ ಬರುವುದು ಬೇಡ ಎಂದರು.

ಕಾಂಗ್ರೆಸ್ ಸರ್ಕಾರ ಬಿದ್ದ ಸಂದರ್ಭದಲ್ಲಿ ನಾವು ಚುನಾವಣೆಗೆ ಹೋಗಬೇಕು. ಜನರ ಆಶೀರ್ವಾದ ಪಡೆದು ಗೆದ್ದು ಅಧಿಕಾರಕ್ಕೆ ಬರಬೇಕು. ಆ ಮೂಲಕ, ಆಪರೇಷನ್ ಕಮಲ ಮುಂತಾದ ಭ್ರಷ್ಟಾಚಾರ ವ್ಯವಸ್ಥೆಯನ್ನು ಕೊನೆಗಾಣಿಸಬೇಕು ಎಂದು ಅವರು ಗುಡುಗಿದರು.

ಬೆಳಗಾವಿಯಲ್ಲಿ ಸಭೆ ಆದಮೇಲೆ ರಾಷ್ಟ್ರೀಯ ಸ್ವಯಂ ಸಂಘದ ಸಭೆ ಆಗಿದೆ ಅಲ್ಲಿ ಎಲ್ಲಾ ಹೇಳಿದ್ದೆವೆ. ನಮ್ಮ ಪಕ್ಷದ ಮುಖಂಡರಿಗೆ ತಿಳಿಸುವ ಕೆಲಸ ಮಾಡಿದ್ದೇವೆ. ಯಾರು ಬಿಜೆಪಿ ಮಹಾನ್ ನಾಯಕರು ಯಾರು ಬರುವುದಿಲ್ಲ. ದಾವಣಗೆರೆ ಯಲ್ಲಿ ಗಣೇಶ್ ವೇಳೆ ಗಲಾಟೆ ಆಗಿದೆ ಅದರ ಸಂಬಂದ ಬಂದಿದ್ದೇವೆ ಎಂದು ಯತ್ನಾಳ್ ಹೇಳಿದರು.

ರಾಜಕೀಯ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್ ಟ್ರೈಲರ್ ಇಲ್ಲಿದೆ ನೋಡಿ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಟನೆಯ ‘ ದಿ ಡೆವಿಲ್’ (The Devil) ಸಿನಿಮಾ ಇದೇ ತಿಂಗಳ 11ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

[ccc_my_favorite_select_button post_id="117049"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!