ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಮತ್ತೆ ಜೀವ..!; ಡಿಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ ಭೇಟಿ ಶೀಘ್ರ

ಬೆಂಗಳೂರು; ಎತ್ತಿನಹೊಳೆ ನೀರಾವರಿ ಯೋಜನೆಯಲ್ಲಿ ಕಾಂಗ್ರೆಸ್ ಸರ್ಕಾರವು ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು ಡಾ.ಜಿ.ಪರಮೇಶ್ವರ್ ಅವರ ಜೊತೆ ಎತ್ತಿನಹೊಳೆ ವಿಚಾರವಾಗಿ ಮಾತುಕತೆ ನಡೆಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಒಂದು ವರ್ಷದಲ್ಲಿ ತುಮಕೂರಿಗೆ ಎತ್ತಿನಹೊಳೆ ನೀರು ಹರಿಸಬೇಕಿದೆ. ಆದರೆ ಈ ಮುಂಚಿನ ಬಿಜೆಪಿ ಸರ್ಕಾರ ಎತ್ತಿನಹೊಳೆ ಯೋಜನೆಯ ಬೈರಗೊಂಡ್ಲು ಜಲಾಶಯ ನಿರ್ಮಾಣದ ಪ್ಲಾನ್ ಬದಲಾವಣೆ ಮಾಡಿದೆ. ಈ ನಿಟ್ಟಿನಲ್ಲಿ ಬೈರಗೊಂಡ್ಲುಗೆ ಭೇಟಿ ನೀಡಬೇಕಿದೆ.

ತುಮಕೂರು ಮತ್ತು ದೊಡ್ಡಬಳ್ಳಾಪುರ ವ್ಯಾಪ್ತಿಯ ಪ್ರದೇಶ ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಸೇರಿರುವುದರಿಂದ, ಜಮೀನಿಗೆ ಬೆಲೆ ನಿಗದಿ ವಿಚಾರವಾಗಿ ದೊಡ್ಡಬಳ್ಳಾಪುರ ಮತ್ತು ಕೊರಟಗೆರೆ ವ್ಯಾಪ್ತಿಯ ಜಮೀನಿಗೆ ಒಂದೇ ರೀತಿಯ ಬೆಲೆ ನಿಗದಿ ಮಾಡಬೇಕೆಂಬ ಒತ್ತಾಯವಿದೆ.

ಈ ನಿಟ್ಟಿನಲ್ಲಿ ಎತ್ತಿನಹೊಳೆಯಿಂದ ಬೈರಗೊಂಡ್ಲು ವರೆವಿಗೆ ಸ್ಥಳ ಪರಿಶೀಲನೆ ನಡೆಸಲು ಇಂದು ಚರ್ಚೆ ನಡೆಲಾಗಿದೆ. ಆದಷ್ಟು ತ್ವರಿತವಾಗಿ ಈ ಕಾರ್ಯ ಮಾಡಬೇಕಿದ್ದು, ದಸರಾ ಮುಗಿದ ಬಳಿಕ ಸ್ಥಳಕ್ಕೆ ಭೇಟಿ ನೀಡಲಿದ್ದೇವೆ ಎಂದರು.

ಎತ್ತಿನಯೋಜನೆಯ ಮೂಲ ಪ್ಲಾನ್;
ಬೈರಗೊಂಡ್ಲು ಜಲಾಶಯಕ್ಕೆ 5,478.68 ಎಕರೆ ಭೂಮಿ ಬೇಕಿದ್ದು ಭೂಸ್ವಾಧೀನ ಪ್ರಕ್ರಿಯೆ ಬಾಕಿಯಿದೆ.

ಬೈರಗೊಂಡ್ಲು ಜಲಾಶಯ ನಿರ್ಮಾಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿ, ಗರುಡಗಲ್ಲು, ಕೊರಟಗೆರೆಯ ವೀರಸಾಗರ, ಲಕ್ಕಮುತ್ತನಹಳ್ಳಿ, ಬೆಲ್ಲದಹಳ್ಳಿ, ಸುಂಕದಹಳ್ಳಿ ಸೇರಿದಂತೆ ಒಟ್ಟು 7 ಗ್ರಾಮಗಳು ಮುಳುಗಡೆಯಾಗುತ್ತವೆ.

ಈ ಭಾಗದ ಜನರಿಗೆ ಪರಿಹಾರದ ಜತೆಗೆ ಪರ್ಯಾಯ ವ್ಯವಸ್ಥೆ ಕೂಡ ಮಾಡಿಕೊಡಬೇಕಿದೆ. ಈ ಭಾಗದ ರೈತರ ಮನವೊಲಿಸಲು ಇನ್ನೂ ಸಾಧ್ಯವಾಗಿಲ್ಲ. ಇನ್ನು ಭೂಸ್ವಾಧೀನ ಯಾವಾಗ ಎಂಬುದು ಪ್ರಶ್ನೆಯಾಗಿದೆ.

ಈ ನಿಟ್ಟಿನಲ್ಲಿ ಡಿಕೆ ಶಿವಕುಮಾರ್ ಹಾಗೂ ಪರಮೇಶ್ವರ್ ಸ್ಥಳಕ್ಕೆ ಭೇಟಿ ಮಹತ್ವವನ್ನು ಪಡೆದಿದೆ.

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!