ಹಂದಿ ಪದ ಬಳಕೆ; ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಆರೋಪದ ಕುರಿತು ಕೆಳಹಂತದ ಅಧಿಕಾರಿಗಳಿ ಬರೆದ ಪತ್ರದಲ್ಲಿ, ಹಂದಿಗಳೊಂದಿಗೆ ಎಂದಿಗೂ ಕುಸ್ತಿಯಾಡಬೇಡಿ. ನೀವು ಕೊಳಕಾಗುತ್ತೀರಿ ಮತ್ತು ಹಂದಿಯು ಅದನ್ನು ಇಷ್ಟಪಡುತ್ತದೆ ಎಂಬ ಜಾರ್ಜ್ ಬರ್ನಾರ್ಡ್ ಷಾ ಅವರ ಸಂದೇಶ ಬಳಸಿದ್ದ ಐಪಿಎಸ್ ಅಧಿಕಾರಿ, ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಭಾರೀ ಪ್ರತಿಭನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ರಾಜ್ಯ ಕಚೇರಿ ಮುಂಭಾಗದಲ್ಲಿ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜವರಾಯಿ ಗೌಡ, ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಸೇರಿದಂತೆ ಅನೇಕ ನಾಯಕರು, ನೂರಾರು ಕಾರ್ಯಕರ್ತರು ಭಾಗವಹಿಸಿ ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ, ಓರ್ವ ಅಧಿಕಾರಿಯಾಗಿ ಚಂದ್ರಶೇಖರ್ ಅವರು ಕೇಂದ್ರ ಸಚಿವರ ಬಗ್ಗೆ ಬಳಕೆ ಮಾಡಿರುವ ಭಾಷೆ ಸರಿ ಇಲ್ಲ. ಅದಕ್ಕೆ ಕ್ಷಮೆ ಕೇಳಬೇಕು ಹಾಗೂ ಅವರ ಶಿಸ್ತು ಜರುಗಿಸಬೇಕು ಎಂದು ಒತ್ತಾಯ ಮಾಡಿದರು.

ಇದನ್ನೂ ಓದಿ; ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ; ಹೆಚ್.ಡಿ.ಕುಮಾರಸ್ವಾಮಿ

ಅವರ ಹೇಳಿಕೆಯಿಂದ ಕುಮಾರಸ್ವಾಮಿ ಅವರ ಅಭಿಮಾನಿಗಳು ಹಾಗೂ ಅಸಂಖ್ಯಾತ ಜೆಡಿಎಸ್ ಕಾರ್ಯಕರ್ತರ ಭಾವನೆಗಳಿಗೆ ಘಾಸಿ ಉಂಟಾಗಿದೆ. ಕಾಂಗ್ರೆಸ್ ಸರ್ಕಾರ ನಮ್ಮ ನಾಯಕರ ವಿರುದ್ಧ ಅಧಿಕಾರಿಗಳನ್ನು ಎತ್ತಿ ಕಟ್ಟುತ್ತಿದೆ ಎಂದು ಅವರು ಹೇಳಿದರು.

ಇದೇ ವೇಳೆ ಹಿರಿಯ ಶಾಸಕರಾದ ತಿಪ್ಪೇಸ್ವಾಮಿ, ಶರವಣ ಅವರು ಕೂಡಾ ಎಡಿಜಿಪಿ ಹೇಳಿಕೆಯನ್ನು ಉಗ್ರ ಶಬ್ದಗಳಲ್ಲಿ ಖಂಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲಿ ಮುಖ್ಯರಸ್ತೆಯವರೆಗೂ ಮೆರವಣಿಗೆ ನಡೆಸಿ ಅಧಿಕಾರಿ ಚಂದ್ರಶೇಖರ್ ವಿರುದ್ಧ ಧಿಕ್ಕಾರ ಕೂಗಿದರು ಹಾಗೂ ಅಧಿಕಾರಿ ಕೂಡಲೇ ಕೇಂದ್ರ ಸಚಿವರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಕ್ಷಮೆ ಕೇಳದಿದ್ದರೆ ನಗರದ ಎಲ್ಲೆಡೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಹಾಗೂ ಮುಂದೆ ಆಗಬಹುದಾದ ಪರಿಣಾಮಗಳಿಗೆ ಸರಕಾರವೇ ಹೊಣೆ ಆಗಬೇಕಾಗುತ್ತದೆ ಎಚ್ಚರಿಕೆ ಕೊಟ್ಟರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾವ್, ಬೆಂಗಳೂರು ಮಹಾನಗರದ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ತುಳಸೀ ರಾಮ್‌, ಪಾಲಿಕೆಯ ಮಾಜಿ ಸದಸ್ಯ ತಿಮ್ಮೇಗೌಡರು, ವಕ್ತಾರರುಗಳಾದ ದೇವರಾಜು, ಪೂರ್ಣಿಮ ಗೌಡ, ಬೆಂಗಳೂರು ಘಟಕದ ವಿವಿಧ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.

[ccc_my_favorite_select_button post_id="117387"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ (Kabbadi Championship) ಭಾಗವಹಿಸಿದ ಕರ್ನಾಟಕದ ಕಬ್ಬಡಿ ತಂಡ ಕಂಚಿನ

[ccc_my_favorite_select_button post_id="117398"]
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದಲ್ಲಿ (Chowdeshwari Temple) ಮತ್ತೆ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="117382"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]