October 11, 2024 4:43 am

ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ; ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಹಿಂದೆ ಇದೇ ಸಿದ್ದರಾಮಯ್ಯ ಅವರ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ನವದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್ ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಕಳಿಸಬೇಕೆಂದು ಚರ್ಚೆ ಮಾಡಲಾಗಿದೆ ಇಂದು ಆರೋಪ ಮಾಡಿದರು.

ನಾನು ಜಾಮೀನು ತೆಗೆದುಕೊಂಡಿದ್ದೇನೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಈ ಸರ್ಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆ ಎಂದು ನನ್ನ ವಕೀಲರು ಜಾಮೀನು ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಅದಕ್ಕೆ ಜಾಮೀನು ಪಡೆದಿದ್ದೇನೆ ಎಂದು ಅವರು ಹೇಳಿದರು.

ಕಳೆದ ಮೂರ್ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. 80 ಕೋಟಿ ಗುಳುಂ ಮಾಡಿರೋ ಪ್ರಕರಣದಲ್ಲಿ ಏನಾಯಿತು? ಎಸ್ ಐಟಿ ಯಾರನ್ನೋ ಬಂಧನ ಮಾಡಿದ್ದರು. ಯಾರೋ ಸಂಬಂಧವಿಲ್ಲದ ವ್ಯಕ್ತಿಯ ಹೆಸರನ್ನು ಪ್ರಕರಣದಲ್ಲಿ ಸೇರಿಸಿದಿರಿ. ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ನಾನು ಆ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ನನ್ನ ಕೇಸ್ ಬಗ್ಗೆ ಅಲ್ಲ. ರಾಜ್ಯಪಾಲರ ಕಚೇರಿ ತನಿಖೆ ಮಾಡುವುದಕ್ಕೆ ಅವಕಾಶ ಕೇಳಿ ಪತ್ರ ಬರೆದು, ಒಂದು ಖಾಸಗಿ ಚಾನೆಲ್ ಗೆ ಲೀಕ್ ಮಾಡಿರುವ ಹಿನ್ನಲೆಯಲ್ಲಿ ನಾನು ಪ್ರಶ್ನೆ ಮಾಡಿದ್ದು ಎಂದು ಅವರು ಹೇಳಿದರು.

ನಾನು ಆ ಪೋಲಿಸ್ ಅಧಿಕಾರಿಯ ಉದ್ದಟನವನ್ನು ಖಂಡಿಸಿದ್ದೆ. ಆ ಅಧಿಕಾರಿಯ ಹಿನ್ನೆಲೆ ಏನಿದೆ ಎನ್ನುವುದನ್ನು ಹೇಳಿದ್ದೇನೆ. ಬೆಂಗಳೂರಿನ ಲ್ಯಾಂಡ್ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ಜತೆ ಅವರ ನೇರ ನಂಟಿದೆ. ಸಮಾಜ ವಿದ್ರೋಹಿ ಶಕ್ತಿಗಳಿಗೆ ಸಾಥ್ ನೀಡಲು ಈ ವ್ಯಕ್ತಿಗೆ ಐಪಿಎಸ್ ಸ್ಥಾನ ಕೊಟ್ಟಿದ್ದಾರಾ? ಕ್ರಿಮಿನಲ್ ಪ್ರಕರಣದಲ್ಲಿ ಅಧಿಕಾರಿಯೇ ಆರೋಪಿ ನಂಬರ್ 2 ಆಗಿದ್ದಾರೆ. ಸದ್ಯ ಜಾಮೀನು ಮೇಲೆ ಹೊರಗಡೆ ಇದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಅಧಿಕಾರಿಗಳು ಸಿಎಂ ಬಳಿ ಬಂದು ನೀವು ಕ್ರಿಮಿನಲ್ ಸಿಎಂ ಅಂದ್ರೆ ಏನು ಮಾಡುತ್ತೀರಿ? ಶನಿವಾರ ಕಚೇರಿ ಕಚೇರಿ ರಜೆ ಇದ್ದರೂ ಸಹ ಸಹೋದ್ಯೋಗಿಗಳಿಗೆ ಪತ್ರ ಬರೆಯುವ ನೆಲದಲ್ಲಿ ನನ್ನ ಬಗ್ಗೆ ಅಶ್ಲೀಲ ಭಾಷೆ ಬಳಕೆ ಮಾಡಿದ್ದಾರೆ. ಅದು ಕಚೇರಿ ಮೆಮೊ ಅಲ್ಲ, ಅದರಲ್ಲಿ ಸೀಲ್ ಇಲ್ಲ, ಆ ಇಲಾಖೆಯ ಎಂಬಲಂ ಇಲ್ಲ ಎಂದು ಸಚಿವರು ಹೇಳಿದರು

ಗೃಹ ಸಚಿವ ಡಾ.ಪರಮೇಶ್ವರ ಶಬ್ದಪಂಡಿತರು. ನನ್ನ ಹೆಸರು ಉಲ್ಲೇಖಿಸಿಲ್ಲ ಅಂತಾರೆ. ಸಿಎಂ ಮೇಲೂ ಆರೋಪ ಇದೆ, ನಾಳೆ ಬೆಳಗ್ಗೆ ಬಂದು ನಿಮ್ಮ ಅಧಿಕಾರಿ ನಿಮ್ಮನ್ನು ಕ್ರಿಮಿನಲ್ ಮುಖ್ಯಮಂತ್ರಿ ಅಂತಾ ಕರೆದರೆ ಏನು ಮಾಡುತ್ತೀರಿ. ನನ್ನ ವಿರುದ್ಧ ಬರೆದ ಪತ್ರ ಹೇಗೆ ಹಂಚಲಾಯಿತು? ನನ್ನ ವಿರುದ್ಧ ಸಿಎಂ ಕಚೇರಿಯಿಂದ ಸೋಮವಾರ ರಾತ್ರಿ ಮತ್ತೊಂದು ಪತ್ರ ದಾಖಲೆಗಳು ಹೋಗಿವೆ. ಪತ್ರದಲ್ಲಿ ಉಲ್ಲೇಖಿಸಿರುವ ಕಿಶೋರ್ ಕುಮಾರ ಅವರನ್ನು ಇವರು ಎಲ್ಲಿಗೆ ಕರೆಸಿಕೊಂಡಿದ್ದರು? ಎಂದು ಅವರು ಪ್ರಶ್ನಿಸಿದರು.

Recent Posts

ರಾಜಕೀಯ

ಓ ನಲ್ಲ, ನೀನಲ್ಲ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನೀ ಲಾಯಕ್ಕಿಲ್ಲ ಎಂದವರು ಯಾರು..?: ಬಿಜೆಪಿಗರಿಗೆ ಜೆಡಿಎಸ್ ಮುಖಂಡರ ಪ್ರಶ್ನೆ

ಓ ನಲ್ಲ, ನೀನಲ್ಲ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನೀ ಲಾಯಕ್ಕಿಲ್ಲ ಎಂದವರು ಯಾರು..?: ಬಿಜೆಪಿಗರಿಗೆ

ದೊಡ್ಡಬಳ್ಳಾಪುರ: ಒಪ್ಪಂದದಂತೆ ನಗರಸಭೆ ಅಧ್ಯಕ್ಷ ಸ್ಥಾನ ಜೆಡಿಎಸ್‌ಗೆ ಬಿಡದಿರುವ ಕುರಿತು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಅವರ ಬೇಸರದ ನುಡಿಗಳು ತಾಲೂಕಿನಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಜೆಡಿಎಸ್-ಬಿಜೆಪಿ ಮುಖಂಡರ ನಡುವೆ ಮಾತಿನ

[ccc_my_favorite_select_button post_id="93837"]
ನ.1 ರಂದು ಅದ್ದೂರಿ‌ ರಾಜ್ಯೋತ್ಸವ; ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಡಿಸಿ

ನ.1 ರಂದು ಅದ್ದೂರಿ‌ ರಾಜ್ಯೋತ್ಸವ; ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಡಿಸಿ

ಬೆಳಗಾವಿ; ಪ್ರತಿ ವರ್ಷದಂತೆ ಈ ಬಾರಿಯೂ ನ.1 ರಂದು ಕರ್ನಾಟಕ‌ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು; ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಬೆಳಗಾವಿ ಜಿಲ್ಲಾ‌

[ccc_my_favorite_select_button post_id="93748"]
RATAN TATA: ಸರ್ಕಾರಿ ಗೌರವಗಳೊಂದಿಗೆ ಭಾರತದ ಮಹಾನ್ ಪುತ್ರನ ಅಂತ್ಯಕ್ರಿಯೆ

RATAN TATA: ಸರ್ಕಾರಿ ಗೌರವಗಳೊಂದಿಗೆ ಭಾರತದ ಮಹಾನ್ ಪುತ್ರನ ಅಂತ್ಯಕ್ರಿಯೆ

ಮುಂಬೈ: ನಿನ್ನೆ ರಾತ್ರಿ ನಿಧನರಾದ ಭಾರತದ ಹೆಮ್ಮೆಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಮಹಾರಾಷ್ಟ್ರ ಸರ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯವನ್ನು ಸಲ್ಲಿಸಿದೆ. ಮುಂಬೈನ ವರ್ಲಿಯ ರುದ್ರಭೂಮಿಯ ವಿದ್ಯುತ್ ಚಿತಾಗಾರದಲ್ಲಿ ಭಾರತದ ಮಹಾನ್

[ccc_my_favorite_select_button post_id="93842"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

ರಾಜ್ಯ ಮಟ್ಟದ Dasara ಕ್ರೀಡಾಕೂಟ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಸಾಧನೆ

ರಾಜ್ಯ ಮಟ್ಟದ Dasara ಕ್ರೀಡಾಕೂಟ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಸಾಧನೆ

ದೊಡ್ಡಬಳ್ಳಾಪುರ: ಮೈಸೂರಿನ ಅರಮನೆ ಮೈದಾನದಲ್ಲಿ ದಸರಾ (Dasara) ಉತ್ಸವ ಅಂಗವಾಗಿ ಅಕ್ಟೋಬರ್ 03 ರಿಂದ ಅಕ್ಟೋಬರ್ 06 ರ ವರೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ‘ರಾಜ್ಯ ಮಟ್ಟದ ದಸರಾ

[ccc_my_favorite_select_button post_id="93666"]
ಪುತ್ರನ ಜತೆ ಸೇರಿ | ಪತಿ ಕೊಂದ ಪತ್ನಿ

ಪುತ್ರನ ಜತೆ ಸೇರಿ | ಪತಿ ಕೊಂದ ಪತ್ನಿ

ಬೆಂಗಳೂರು: ಪತ್ನಿ, ಪುತ್ರ ಇನ್ನಿಬ್ಬರೊಂದಿಗೆ ಪತಿಯನ್ನು ಮನಸೋಇಚ್ಛೆ ಹೊಡೆದು ಕೊಲೆಗೈದಿರುವ ಘಟನೆ ಮಾದನಾಯಕನಹಳ್ಳಿಯ ತೋಟದಗುಡ್ಡದಹಳ್ಳಿಯ ಪ್ರಕೃತಿ ಬಡಾವಣೆಯಲ್ಲಿ ನಡೆದಿದೆ. ಮೂಲತಃ ತಮ್ಮೇನಹಳ್ಳಿ ಪಾಳ್ಯದ ಮುನಿರಾಜು(38) ಕೊಲೆಯಾದವರು, ಪತ್ನಿ ಹಾಗೂ ಮಗನೊಂದಿಗೆ ತೋಟದ ಗುಡ್ಡದಹಳ್ಳಿಯ ಪ್ರಕೃತಿ ಬಡಾವಣೆಯಲ್ಲಿ ವಾಸವಾಗಿದ್ದರು. ಪತ್ನಿ ಗೀತಾ(35), ಮಗ ಹೇಮಂತ್

[ccc_my_favorite_select_button post_id="93786"]
ಬಸ್‌ ಡಿಕ್ಕಿ: ಬಿದ್ದ ಮಹಿಳೆ ಕಾರಿಗೆ ಸಿಲುಕಿ ಸಾವು..!

ಬಸ್‌ ಡಿಕ್ಕಿ: ಬಿದ್ದ ಮಹಿಳೆ ಕಾರಿಗೆ ಸಿಲುಕಿ ಸಾವು..!

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್‌ ತಗುಲಿ (accident) ರಸ್ತೆಗೆ ಬಿದ್ದ ಮಹಿಳೆಗೆ ಹಿಂದೆ ಬರುತ್ತಿದ್ದ ಕಾರು ಡಿಕ್ಕಿಯಾಗಿ ಕೊಂಚ ದೂರ ಎಳೆದೊಯ್ದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜ್ಞಾನಭಾರತಿ ಸಂಚಾರ

[ccc_my_favorite_select_button post_id="93728"]

ಆರೋಗ್ಯ

ಸಿನಿಮಾ

NATIONAL AWARDS : ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸ್ವೀಕರಿಸಿದ ರಿಷಭ್ ಶೆಟ್ಟಿ- Video

NATIONAL AWARDS : ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸ್ವೀಕರಿಸಿದ ರಿಷಭ್ ಶೆಟ್ಟಿ- Video

ನವದೆಹಲಿ; ಪ್ರಕಟವಾಗಿದ್ದ 2022ನೇ ಸಾಲಿನ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (NATIONAL AWARDS) ಇಂದು ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈ ಪೈಕಿ ಕನ್ನಡದ ಚಲನಚಿತ್ರಗಳು 6 ಪ್ರಶಸ್ತಿಗಳನ್ನು ಬಾಚಿಕೊಂಡಿವೆ. ಕನ್ನಡದ ಕೆಜಿಎಫ್ ಚಾಪ್ಟರ್ 2

[ccc_my_favorite_select_button post_id="93703"]
error: Content is protected !!