ಕನಿಷ್ಠ ದೇವರನ್ನಾದರೂ ರಾಜಕೀಯದಿಂದ ಹೊರಗಿಡಿ: ಆಂಧ್ರ ಸಿಎಂಗೆ ಸುಪ್ರೀಂ ಚಾಟಿ

ದೆಹಲಿ: ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬೆರೆಸಿದ ತುಪ ಬಳಸಲಾಗಿದೆ ಎಂಬ ಆರೋಪ ಸಂಬಂಧ ವಿಚಾರಣೆ ನಡೆಸಲು ಸೋಮವಾರ ಆರಂಭಿಸಿದ ಸುಪ್ರೀಂ ಕೋರ್ಟ್ ‘ಕನಿಷ್ಠ ದೇವರನ್ನಾದರೂ ರಾಜಕೀಯದಿಂದ ಹೊರಗಿಡಿ’ ಎಂದು ಬೇಸರದಿಂದ ಹೇಳಿದೆ.

ಲಡ್ಡು ಪ್ರಸಾದ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬೆರೆತ ತುಪ್ಪ ಬಳಸಲಾಗಿದೆ ಎಂದು ಮಾಧ್ಯಮದೆದುರು ನೇರ ಆರೋಪ ಮಾಡಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ನಡೆಗೆ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ನ್ಯಾಯಾಲಯದ ಮೇಲ್ವಿಚಾರಣೆಯಲ್ಲೇ ತಿರುಪತಿ ಲಡ್ಡು ವಿವಾದ ತನಿಖೆ ಆಗಬೇಕು ಎಂದು ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾ. ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ‘ಲ್ಯಾಬ್ ವರದಿ ನೋಡಿದರೆ ಪ್ರಾಥಮಿಕವಾಗಿ ತಿರಸ್ಕೃತಗೊಂಡಿದ್ದ ತುಪ್ಪದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿರುವಂತೆ ಕಾಣಿಸುತ್ತದೆ. ಈ ಕಲಬೆರಕೆ ತುಪ್ಪವನ್ನೇ ಪ್ರಸಾದ ತಯಾರಿಸಲು ಬಳಸಲಾಗಿದೆ ಎಂಬುದಕ್ಕೆ ಯಾವ ಸಾಕ್ಷಿ ಇದೆ?’ ಎಂದು ಪ್ರಶ್ನಿಸಿದೆ.

ಲಡ್ಡುಗೆ ಕಲಬೆರಕೆ ತುಪ್ಪ ಬಳಕೆ ಮತ್ತು ಹಿಂದಿನ ವೈಎಸ್ ಜಗನ್ ರೆಡ್ಡಿ ಸರಕಾರದ ಅವಧಿಯಲ್ಲಿ ತಿರುಪತಿ ತಿರುಮಲ ದೇಗುಲದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ತನಿಖೆಗಾಗಿ ರಾಜ್ಯ ಸರಕಾರ ರಚಿಸಿದ ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆ ಮುಂದುವರೆಸಬಾರದು ಎಂದೂ ಪೀಠ ಸೂಚನೆ ನೀಡಿದೆ.

ಆ ಮೂಲಕ ಹೊಸದಾಗಿ ಎಸ್‌ಐಟಿ ರಚಿಸಿ ತನಿಖೆಗೆ ವಹಿಸುವ ಸೂಚನೆ ನೀಡಿದೆ. ಈ ವಿಚಾರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ಅವರಿಗೆ ಕೇಂದ್ರದಿಂದ ನಿರ್ದೇಶನ ಪಡೆಯುವಂತೆ ಸೂಚಿಸಲಾಗಿದೆ. ಬಳಿಕ ಪೀಠ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.

ಸಿಎಂ ನಡೆಗೆ ಅಸಮಾಧಾನ: ತಿರುಪತಿ ಲಡ್ಡು ಪ್ರಸಾದದಲ್ಲಿ ಕಳಪೆ ತುಪ್ಪ ಬಳಕೆಯಾಗಿಲ್ಲ ಎಂದಾದಲ್ಲಿ ಇಡೀ ವಿವಾದವೇ ಸುಳ್ಳಾಗುತ್ತದೆ. ಜನರ ನಂಬಿಕೆ ವಿಚಾರದಲ್ಲಿ ವಿವಾದ ಸೃಷ್ಟಿಯಾಗಿದೆ.

ಇಂತಹ ವಿಚಾರದಲ್ಲಿ ರಾಜಕೀಯ ಸಲ್ಲ. ಖಚಿತ ಮಾಹಿತಿ ಇಲ್ಲದೇ, ತನಿಖೆಯೂ ಆಗದೇ ಮಾಧ್ಯಮದೆದುರು ಹೇಳಿಕೆ ನೀಡುವ ಅಗತ್ಯವೇನಿತ್ತು? ಎಂದು ಆಂಧ್ರ ಪ್ರದೇಶ ಸರಕಾರದ ಪರ ಹಾಜರಾಗಿದ್ದ ಹಿರಿಯ ವಕೀಲ ಮುಕುಲ್ ರೊಡ್ಡಗಿ ಅವರನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಕೋಟ್ಯಂತರ ಜನರ ನಂಬಿಕೆಗೆ ಸಂಬಂಧಿಸಿದ ವಿಚಾರಗಳಲ್ಲಿ ಆರೋಪ ಮಾಡುವಾಗ ಸೂಕ್ಷ್ಮತೆ ಇರಬೇಕು ಎಂದೂ ಹೇಳಿದೆ.

ರಾಜಕೀಯ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ಜೆಡಿಎಸ್ (JDS) ಪಕ್ಷದ ಎಲ್ಲಾ ಹಿರಿಯರನ್ನು ವಿಶ್ವಾಸಕ್ಕೆ ಪಡೆಯುವ ಮೂಲಕವೇ ಮೇ.8 ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ

[ccc_my_favorite_select_button post_id="121754"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]