ಬಿಜೆಪಿಯವರಿಗೆ ಗೋಡ್ಸೆ ನಾಯಕ: ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸೋಣ – ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ಗಾಂಧಿ ಭಾರತದ ಪ್ರಜ್ಞೆ. ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ.
ಬಿಜೆಪಿಯವರಿಗೆ ಗೋಡ್ಸೆ ನಾಯಕ. ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸೋಣ
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಕಛೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧಿವೇಶನಕ್ಕೆ ನೂರು ವರ್ಷಗಳ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ “ಗಾಂಧಿ ಭಾರತ” ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಮಹಾತ್ಮಗಾಂಧಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ಐತಿಹಾಸಿಕವಾದದ್ದು. ಗಾಂಧಿ ಜಗತ್ತು ಕಂಡ ಅಪರೂಪದ ಸಂತ. ಇವರು ಭಾರತೀಯರ ಹೆಮ್ಮೆ ಎಂದರು.

ಗಾಂಧಿ ವಿಚಾರದಲ್ಲಿ ಬಿಜೆಪಿ ಬಹಳ ಕೆಳಮಟ್ಟದ ರಾಜಕಾರಣ ಮಾಡುತ್ತಿದೆ. ಬಿಜೆಪಿ ಗೋಡ್ಸೆ ಭಾರತ ಮಾಡಲು ಹೊರಟಿದೆ. ಈ ಷಡ್ಯಂತ್ರವನ್ನು ನಾವು ಸೋಲಿಸಬೇಕಿದೆ.

ಗಾಂಧಿ ಭಾರತದ ಆತ್ಮ. ಭಾರತದ ಪ್ರಜ್ಞೆ. ಇಲ್ಲಿ ಗೋಡ್ಸೆಗಳು ಬೆಳೆಯಲು ಬಿಡಬಾರದು. ಧರ್ಮದ ಹೆಸರಲ್ಲಿ, ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರ ಮಾಡಲು ಅವಕಾಶ ಕೊಡಬಾರದು. ಕೋಮು ಶಕ್ತಿಗಳನ್ನು ಸೋಲಿಸಬೇಕು ಎಂದರು.

ಕೋಮು ದುಷ್ಟಶಕ್ತಿಗಳು ರಾಜ್ಯದ, ದೇಶದ ಅಭಿವೃದ್ಧಿಗೆ ಮಾರಕ. ಬಿಜೆಪಿ ಅಧಿಕಾರದಲ್ಲಿ ಇದ್ದಾಗೆಲ್ಲಾ ಸಮಾಜವನ್ನು, ಜಾತಿ, ಧರ್ಮದ ಹೆಸರಲ್ಲಿ ವಿಭಜಿಸುತ್ತಿದ್ದರೇ ಹೊರತು ಜನಪರವಾದ, ಅಭಿವೃದ್ಧಿ ಪರವಾದ ಕಾರ್ಯಕ್ರಮಗಳನ್ನು ರೂಪಿಸಲೇ ಇಲ್ಲ. ಜಾರಿ ಮಾಡಲೂ ಇಲ್ಲ. ಬಿಜೆಪಿಗೆ ಜನಪರ ಪ್ರಗತಿ ಮುಖ್ಯ ಅಲ್ಲವೇ ಅಲ್ಲ ಎಂದರು.

ನಾವು ಸರ್ವ ಜಾತಿ, ಜನಾಂಗ, ಧರ್ಮದವರಿಗೆ ಮತ್ತು ಸರ್ವ ವರ್ಗದವರ ಏಳೆಗೆಗಾಗಿ ಗ್ಯಾರಂಟಿಗಳನ್ನು ಜಾರಿ ಮಾಡಿದರೆ, ಈ ಜನಪರ ಕಾರ್ಯಕ್ರಮಗಳ ವಿರುದ್ಧ ತಪ್ಪು ಮಾಹಿತಿ ನೀಡಿ ಫಲಾನುಭವಿಗಳನ್ನು ಅವಮಾನಿಸಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಾಂಧಿ ಅವರು ಬೆಳಗಾವಿ ಅಧಿವೇಶನದಲ್ಲಿ ಹಿಂದು-ಮುಸ್ಲಿಂ ಐಕ್ಯತೆ, ಗ್ರಾಮ ಸ್ವರಾಜ್ಯ, ಸರ್ವೋದಯದ ಬಗ್ಗೆ ಹೆಚ್ಚು ಒತ್ತು ಕೊಟ್ಟು ಸಂದೇಶ ನೀಡಿದ್ದಾರೆ. ಇದು ಕಾಂಗ್ರೆಸ್ ನ ಸಿದ್ದಾಂತ ಮತ್ತು ಕಾರ್ಯಕ್ರಮಗಳಾಗಿವೆ ಎಂದರು.

ಗಾಂಧಿ ಭಾರತದ ಆತ್ಮ. ಗಾಂಧಿ ಭಾರತದ ಪ್ರಜ್ಞೆ. ಗಾಂಧಿ ಭಾರತದ ಆಲೋಚನಾ ಕ್ರಮ. ಆದ್ದರಿಂದ ಗಾಂಧಿಯ ದೇಹವನ್ನು ಕೊಲ್ಲಬಹುದೇ ಹೊರತು, ಗಾಂಧಿತತ್ವಗಳು, ವಿಚಾರಗಳನ್ನು ಕೊಲ್ಲಲು ಸಾಧ್ಯವೇ ಇಲ್ಲ. ಗಾಂಧಿ ವಿಚಾರಗಳು ಈ ಮಣ್ಣಿನಲ್ಲಿ ಬೆರೆತಿವೆ ಎಂದರು.

ಹೀಗಾಗಿ ಗಾಂಧಿಯವರು ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನದ ಶತಾಬ್ದಿ ಅರ್ಥಪೂರ್ಣವಾಗಿ ಇಡೀ ವರ್ಷ ನಡೆಯುತ್ತಿದೆ. ಇದರಲ್ಲಿ ಇಡೀ ರಾಜ್ಯದ ಎಲ್ಲಾ ವಯೋಮಾನದವರು ಭಾಗಿ ಆಗಿ ಅರ್ಥಪೂರ್ಣಗೊಳಿಸಿ ಎಂದು ಕರೆ ನೀಡಿದರು.

ಮನಮೋಹನ್ ಸಿಂಗ್ ಮತ್ತು ನರೇಗ: ನರೇಗಾ ಮತ್ತು ಅನ್ನಭಾಗ್ಯ ಕಾರ್ಯಕ್ರಮಗಳು ಕೋವಿಡ್ ಸಂದರ್ಭದಲ್ಲಿ ಕೋಟ್ಯಂತರ ಜನರನ್ನು ಹಸಿವಿನಿಂದ ರಕ್ಷಿಸಿ ಜೀವ ಉಳಿಸಿತು. ಹೀಗಾಗಿ‌ ಮಾಜಿ ಪ್ರಧಾನಿ ಅವರು ಜಾರಿಗೆ ತಂದ ನರೇಗಾ ಮತ್ತು ಆಹಾರ ಭದ್ರತೆ ಕಾಯ್ದೆಯನ್ನು ನಾವು ಸ್ಮರಿಸಬೇಕು ಎಂದರು.

ಕಾನೂನು v/s ಕಾನ್ಸ್ಪಿರೆಸಿ: ಬಿಜೆಪಿ ರಾಜ್ಯದಲ್ಲಿ, ದೇಶದಲ್ಲಿ ಕಾನೂನು v/s ಕಾನ್ಸ್ಪಿರೆಸಿ ನಡೆಸುತ್ತಿದೆ. ಕಾನ್ಸ್ಪಿರೆಸಿ ಮೂಲಕ ಕಾನೂನನ್ನು ಸೋಲಿಸಲು ಯತ್ನಿಸಿ ರಾಜಕೀಯ ಅಸ್ಥಿರತೆ ಸೃಷ್ಟಿಸುತ್ತಿದೆ. ಮಹಾತ್ಮ ಗಾಂಧಿ ಅವರು ಹೇಳಿದಂತೆ , “ಎಲ್ಲಾ ನ್ಯಾಯಾಲಯಗಳಿಗಿಂತ ಆತ್ಮ‌ಸಾಕ್ಷಿಯ ನ್ಯಾಯಾಲಯ ದೊಡ್ಡದು” . ಈ ಆತ್ಮಸಾಕ್ಷಿಗೆ ತಕ್ಕಂತೆ ನಡೆಯೋಣ ಎಂದರು.

KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ಮತ್ತು ಹಾಲಿ, ಮಾಜಿ ಸಚಿವರು, KPCC ಯ ಹಾಲಿ, ಮಾಜಿ ಪದಾಧಿಕಾರಿಗಳಿ ಸೇರಿ ಹಲವಾರು ಪ್ರಮುಖರು, ನಿವೃತ್ತ ಸೇನಾಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!